ಚಾಮರಾಜನಗರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವಕ ಸಾವು, ಯುವತಿ ಸ್ಥಿತಿ ಚಿಂತಾಜನಕ

ವಿಷ ಸೇವಿಸಿದ ಪ್ರೇಮಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ದುರಾದೃಷ್ಟವಶಾತ್​ ಯುವಕ ಸಾವನ್ನಪ್ಪಿದ್ದು, ಯುವತಿ ಸ್ಥಿತಿ ಚಿಂತಾಜನಕವಾಗಿದೆ. ಕನಕಪುರ ಮೂಲದ ಉಮೇಶ್(24) ಸಾವನ್ನಪಿದ ಪ್ರೇಮಿ, ಪ್ರಜ್ಞಾಹೀನ ಸ್ಥಿತಿಯಲ್ಲಿರುವ ರಕ್ಷಿತಾ(16) ಅವರಿಗೆ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಚಾಮರಾಜನಗರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವಕ ಸಾವು, ಯುವತಿ ಸ್ಥಿತಿ ಚಿಂತಾಜನಕ
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 12, 2023 | 7:43 PM

ಚಾಮರಾಜನಗರ, ಸೆ.12: ರಾಮನಗರ (Ramanagara) ಜಿಲ್ಲೆಯ ಕನಕಪುರ ಮೂಲದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊಗೇನಕಲ್ ಜಾಲಪಾತದ ಬಳಿ ನಡೆದಿದೆ. ಹೌದು, ವಿಷ ಕುಡಿದು ಪ್ರೇಮಿಗಳು, ತಮಿಳುನಾಡು ಭಾಗದ ಬಂಡೆಯ ಮೇಲೆ ಬಿದ್ದಿದ್ದರು. ಇದನ್ನು ನೋಡಿದ ಸ್ಥಳೀಯರು ಕೂಡಲೇ ತಮಿಳುನಾಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ವಿಷ ಸೇವಿಸಿದ ಪ್ರೇಮಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ದುರಾದೃಷ್ಟವಶಾತ್​ ಯುವಕ ಸಾವನ್ನಪ್ಪಿದ್ದು, ಯುವತಿ ಸ್ಥಿತಿ ಚಿಂತಾಜನಕವಾಗಿದೆ. ಕನಕಪುರ ಮೂಲದ ಉಮೇಶ್(24) ಸಾವನ್ನಪಿದ ಪ್ರೇಮಿ, ಪ್ರಜ್ಞಾಹೀನ ಸ್ಥಿತಿಯಲ್ಲಿರುವ ರಕ್ಷಿತಾ(16) ಅವರಿಗೆ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಕ್ಯಾಂಟರ್; 30 ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಗೂರಿನ ಬಸವನ ಬೆಟ್ಟದ ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಕ್ಯಾಂಟರ್ ಉರುಳಿದೆ. ಘಟನೆಯಲ್ಲಿ ಮೂವರು ಸ್ಥಿತಿ ಗಂಭೀರವಾಗಿದ್ದು, 30 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅವರನ್ನು ಹಲಗೂರು ಹಾಗೂ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮುಗಿಸಿ ವಾಪಸಾಗುವ ವೇಳೆ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬೇರೆ ಹುಡುಗನ ಜೊತೆ ವಿವಾಹ ನಿಶ್ಚಯ.. ಪ್ರೇಮಿಗಳ ದಿನದಂದೇ ನೇಣಿಗೆ ಕೊರಳೊಡ್ಡಿ ಯುವ ಪ್ರೇಮಿಗಳು ಆತ್ಮಹತ್ಯೆ

ರೈತನ ಜಮೀನಿನಲ್ಲಿ ಅನುಮಾನಸ್ಪದವಾಗಿ ಗಂಡು ಚಿರತೆ ಸಾವು

ಚಿಕ್ಕಬಳ್ಳಾಪುರ: ತಾಲೂಕಿನ ನಲ್ಲಕದಿರೇನಹಳ್ಳಿಯಲ್ಲಿ ರೈತ ಕೃಷ್ಣಾಚಾರಿ ಎಂಬುವವರ ಜಮೀನಿನಲ್ಲಿ ಚಿರತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ಮುಸುಕಿನ ಜೋಳದ ಹೊಲದಲ್ಲಿ ಮೃತಪಟ್ಟಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us