ಚಾಮರಾಜನಗರ: ಗಂಡು ಹುಲಿ ಸಾವು; ಅರಣ್ಯ ಸಂರಕ್ಷಣಾಧಿಕಾರಿಯೇ ಕಾರಣ ಎಂದ ಪರಿಸರವಾದಿ ಜೋಸೆಫ್ ಹೂವರ್

ನಿತ್ರಾಣಗೊಂಡಿದ್ದ ಹುಲಿ(Tiger)ಗೆ ಸಕಾಲದಲ್ಲಿ ಚಿಕಿತ್ಸೆ ನೀಡದ ಕಾರಣ ಸತ್ತಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಹುಲಿ ಉಳಿಸುವ ಪ್ರಯತ್ನವನ್ನೇ ಮಾಡಲಿಲ್ಲ ಎಂದು ಪರಿಸರವಾದಿ ಜೋಸೆಫ್ ಹ್ಯೂವರ್ ಗಂಭೀರ ಆರೋಪ ಮಾಡಿದ್ದಾರೆ.

ಚಾಮರಾಜನಗರ: ಗಂಡು ಹುಲಿ ಸಾವು; ಅರಣ್ಯ ಸಂರಕ್ಷಣಾಧಿಕಾರಿಯೇ ಕಾರಣ ಎಂದ ಪರಿಸರವಾದಿ ಜೋಸೆಫ್ ಹೂವರ್
ಪರಿಸರವಾದಿ ಜೋಸೆಫ್ ಹ್ಯೂವರ್
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 26, 2023 | 6:31 PM

ಚಾಮರಾಜನಗರ, ನ.26: ಬಂಡೀಪುರದ ಮದ್ದೂರು ವಲಯ ವ್ಯಾಪ್ತಿಯಲ್ಲಿ 3 ವರ್ಷ ವಯಸ್ಸಿನ ಗಂಡು ಹುಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನಿತ್ರಾಣಗೊಂಡಿದ್ದ ಹುಲಿ(Tiger)ಗೆ ಸಕಾಲದಲ್ಲಿ ಚಿಕಿತ್ಸೆ ನೀಡದ ಕಾರಣ ಸತ್ತಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಹುಲಿ ಉಳಿಸುವ ಪ್ರಯತ್ನವನ್ನೇ ಮಾಡಲಿಲ್ಲ ಎಂದು ಪರಿಸರವಾದಿ ಜೋಸೆಫ್ ಹ್ಯೂವರ್ ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ(ನ.24) ಬೆಳಿಗ್ಗೆ 6.30 ಕ್ಕೆ ಹುಲಿ ನಿತ್ರಾಣಗೊಂಡು ಬಿದ್ದಿದೆ. ಆದರೆ, ರಮೇಶ್‌ಕುಮಾರ್ ಸ್ಥಳಕ್ಕೆ ಬಂದಿದ್ದು ಮಧ್ಯಾಹ್ನ 3.33 ಕ್ಕೆ. ಇತ್ತ ನಿತ್ರಾಣಗೊಂಡು ಹುಲಿ ಸಾವು ಬದುಕಿನೊಂದಿಗೆ ಹೋರಾಟ ಮಾಡುತ್ತಿದ್ದರೆ, ಅತ್ತ ರಮೇಶ್‌ಕುಮಾರ್ ಕ್ಷೌರ ಮಾಡಿಸಿಕೊಳ್ಳುತ್ತಾ ಕುಳಿತಿದ್ದರು.

ರೋಮ್ ಹೊತ್ತಿ ಉರಿಯುವಾಗ ನೀರೋ ಪಿಟೀಲು ಬಾರಿಸುತ್ತಿದ್ದನಂತೆ, ಅದೇ ರೀತಿ ರಮೇಶ್ ಕುಮಾರ್ ವರ್ತಿಸಿದ್ದಾರೆ. ಕೆಳಹಂತದ ಅಧಿಕಾರಿಗಳು ಏನು ಮಾಡಬೇಕೆಂದು ಹಿರಿಯ ಅಧಿಕಾರಿಯಿಂದ ನಿರ್ದೇಶನ ಬಾರದೆ ಅಸಹಾಯಕರಾಗಿದ್ದರು. ವಿಷಯ ಗೊತ್ತಾದ ತಕ್ಷಣ ಹೋಗಿ ಹುಲಿಗೆ ಚಿಕಿತ್ಸೆ ಕೊಡಿಸಬಹುದಿತ್ತು. ರಮೇಶ್‌ಕುಮಾರ್ ಯಾವುದೇ ಪ್ರಯತ್ನವನ್ನೂ ಮಾಡದೆ ಹುಲಿ ಸಾವಿಗೆ ಕಾರಣರಾಗಿದ್ದಾರೆ. ಕೂಡಲೇ ಅವರನ್ನು ಅಮಾನತ್ತು ಮಾಡಿ ಬಂಧಿಸಬೇಕು. ರಮೇಶ್‌ಕುಮಾರ್ ಮುಂದುವರಿದರೆ ಇನ್ನೇನು ತೊಂದರೆಗಳಾಗುತ್ತೋ, ಅವರ ಮೇಲೆ ಕ್ರಮವಹಿಸದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಪರಿಸರವಾದಿ ಜೋಸೆಫ್ ಹ್ಯೂವರ್ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ:ಮೈಸೂರು: ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ, ರೈತ ಸ್ಥಳದಲ್ಲೇ ಸಾವು

ಘಟನೆ ವಿವರ

ಬಂಡೀಪುರ ಹುಲಿ ಸಂರಕ್ಷಣಾ ವ್ಯಾಪ್ತಿಯ ಮದ್ದೂರು ವಲಯದ ದೊಡ್ಡಕರಿಯಯ್ಯ ಎಂಬುವವರ ಹೊಲದಲ್ಲಿ ಶುಕ್ರವಾರ ಮೂರು ವರ್ಷದ ಹುಲಿಯೊಂದು ಸಾವನ್ನಪ್ಪಿದ ಘಟನೆ ನಡೆದಿತ್ತು. ಕಾಡಿನೊಳಗೆ ವನ್ಯಪ್ರಾಣಿಗಳ ಕಾದಾಟದಿಂದ ಹುಲಿಯ ತಲೆ ಸೇರಿದಂತೆ ಹಲವು ಕಡೆಗಳಲ್ಲಿ ತೀವ್ರ ಗಾಯವಾಗಿತ್ತು. ಇದರಿಂದ ನಿತ್ರಾಣಗೊಂಡು ನಡೆಯಲಾರದಂತಹ ಸ್ಥಿತಿಗೆ ತಲುಪಿತ್ತು. ಇದಕ್ಕೆ ಚಿಕಿತ್ಸೆ ನೀಡಲು ಅರಣ್ಯಾಧಿಕಾರಿಗಳು ಹುಲಿಯ ಸೆರೆಗೆ ಬಲೆ ಬಿಸಿದ್ದರು. ಆದರೆ, ರಕ್ಷಣೆ ಮಾಡುವ ಮುಂಚೆಯೇ ಹುಲಿ ಕೊನೆಯುಸಿರೆಳೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Sun, 26 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್