ಮಂತ್ರಾಲಯಕ್ಕೆ ಹೋಗುವುದು ಅವರ ಕನಸಾಗಿತ್ತು: ಹರಕೆ ತೀರಿಸಿ ರಾಯರ ದರ್ಶನ ಪಡೆಯಲು ಹೋದ ವ್ಯಕ್ತಿ ನಾಪತ್ತೆ

ಚಾಮರಾಜನಗರದ ದೊರೆಸ್ವಾಮಿ ಎಂಬ ರಾಯರ ಭಕ್ತರು ಮಂತ್ರಾಲಯಕ್ಕೆ ಹರಕೆ ತೀರಿಸಲು ಹೋಗಿ ಫೆಬ್ರವರಿ 9ರಿಂದ ನಾಪತ್ತೆಯಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಪ್ರತಿ ಗುರುವಾರ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡುತ್ತಿದ್ದರು. ಅವರ ಪುತ್ರ ರೈಲ್ವೆ ಟಿಕೆಟ್ ನೀಡಿ ಕಳುಹಿಸಿಕೊಟ್ಟಿದ್ದರು. ಈಗ ಕುಟುಂಬಸ್ಥರು ಮಂತ್ರಾಲಯದಲ್ಲಿ ಹುಡುಕಾಡಿದ್ದು, ಚಾಮರಾಜನಗರ ಟೌನ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಮಂತ್ರಾಲಯಕ್ಕೆ ಹೋಗುವುದು ಅವರ ಕನಸಾಗಿತ್ತು: ಹರಕೆ ತೀರಿಸಿ ರಾಯರ ದರ್ಶನ ಪಡೆಯಲು ಹೋದ ವ್ಯಕ್ತಿ ನಾಪತ್ತೆ
ಚಾಮರಾಜನಗರ ದೊರೆಸ್ವಾಮಿ
Edited By:

Updated on: Feb 28, 2026 | 6:21 PM

ಚಾಮರಾಜನಗರ, ಫೆ.28: ರಾಯರನ್ನು ನೋಡಲು ಸಾವಿರಾರೂ ಭಕ್ತರು ಪ್ರತಿದಿನ ಬರುತ್ತಾರೆ. ಅದೊಂದು ಕಾರ್ಣಿಕದ ಸ್ಥಳ, ನೆಮ್ಮದಿ, ಸಂಕಷ್ಟಕ್ಕೆ ಮುಕ್ತಿ ನೀಡುವ ಸ್ಥಳ, ಹೀಗೆ ರಾಯರ ಮೇಲೆ ಅಪಾರ ಭಕ್ತಿ ಹೊಂದಿದ್ದ ವ್ಯಕ್ತಿಯೊಬ್ಬರು ಹರಕೆ ತೀರಿಸಲು ಮಂತ್ರಾಲಯಕ್ಕೆ ಹೋಗಿ ಈಗ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಚಾಮರಾಜನಗರದ ಗಾಳಿಪುರ ಬಡಾವಣೆಯ ನಿವಾಸಿ ದೊರೆಸ್ವಾಮಿ (55) ನಾಪತ್ತೆಯಾದ ದುರ್ದೈವಿ. ದೊರೆಸ್ವಾಮಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರೂ ಪ್ರತಿ ಗುರುವಾರ ತಪ್ಪದೇ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡುತ್ತಿದ್ದರು. ಜೀವನದಲ್ಲಿ ಒಮ್ಮೆಯಾದರೂ ಮಂತ್ರಾಲಯಕ್ಕೆ ಹೋಗಿ ಮುಡಿ ಕೊಟ್ಟು (ಹರಕೆ ತೀರಿಸಿ) ರಾಯರ ದರ್ಶನ ಪಡೆಯಬೇಕು ಎಂಬುದು ಅವರ ದೊಡ್ಡ ಕನಸಾಗಿತ್ತು.

ಫೆಬ್ರವರಿ 9ರಂದು ದೊರೆಸ್ವಾಮಿ ಅವರು ಚಾಮರಾಜನಗರದಿಂದ ರೈಲಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ಅವರ ಪುತ್ರ ತೇಜಸ್ ಅವರೇ ಸ್ವತಃ ರೈಲ್ವೆ ಟಿಕೆಟ್ ತೆಗೆಸಿಕೊಟ್ಟು, ತಂದೆಯ ಖರ್ಚಿಗೆ 2 ಸಾವಿರ ರೂಪಾಯಿ ಹಣ ನೀಡಿ ಪ್ರೀತಿಯಿಂದ ಕಳುಹಿಸಿಕೊಟ್ಟಿದ್ದರು. “ಮೂರು ದಿನಗಳಲ್ಲಿ ದರ್ಶನ ಮುಗಿಸಿ ವಾಪಸ್ ಬರುತ್ತೇನೆ” ಎಂದು ಹೋದವರು ಫೆಬ್ರವರಿ 28 ಕಳೆದರೂ ವಾಪಸ್ ಬಂದಿಲ್ಲ. ಅವರು ಮೊಬೈಲ್ ಕೂಡ ಬಳಸದ ಕಾರಣ ಕುಟುಂಬಸ್ಥರಿಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್

ದೊರೆಸ್ವಾಮಿ ಅವರ ಸುಳಿವು ಸಿಗದ ಹಿನ್ನೆಲೆಯಲ್ಲಿ ಅವರ ಪತ್ನಿ ರೇಖಾ ಮತ್ತು ಮಗ ತೇಜಸ್ ಮಂತ್ರಾಲಯಕ್ಕೆ ತೆರಳಿ ರೈಲ್ವೆ ನಿಲ್ದಾಣ ಹಾಗೂ ಮಠದ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದಾರೆ. ಆರ್‌ಪಿಎಫ್ (RPF) ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ. ಸದ್ಯ ಚಾಮರಾಜನಗರ ಟೌನ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ (Missing Case) ದಾಖಲಾಗಿದ್ದು, ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us