ವನ್ಯಜೀವಿ ಪ್ರಿಯರಿಗೆ ಬಿಗ್ ಅಪ್‌ಡೇಟ್: ಸಫಾರಿಗಳಲ್ಲಿ ಇನ್ಮುಂದೆ ಮೊಬೈಲ್ ಫೋನ್ ಸಂಪೂರ್ಣ ನಿಷೇಧ!

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಚಾಮರಾಜನಗರದ ಬಂಡೀಪುರ ಮತ್ತು ಕೆ. ಗುಡಿ ವನ್ಯಜೀವಿ ಸಫಾರಿಗಳಲ್ಲಿ ಪ್ರವಾಸಿಗರು ಹಾಗೂ ಸಿಬ್ಬಂದಿ ಮೊಬೈಲ್ ಫೋನ್ ಬಳಸುವುದನ್ನು ಅರಣ್ಯ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ತುರ್ತು ಸಂಪರ್ಕಕ್ಕಾಗಿ ವಾಹನಗಳಲ್ಲಿ ನಿಸ್ತಂತು ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ. ಜಿಲ್ಲೆಯ ಬಂಡೀಪುರ, ಕೆ.ಗುಡಿ ಹಾಗೂ ಪಿ.ಜಿ.ಪಾಳ್ಯ ಸಫಾರಿಗಳಲ್ಲಿ ಈ ನಿಯಮ ಕಟ್ಟುನಿಟ್ಟಾಗಿ ಜಾರಿಯಾಗಿದೆ.

ವನ್ಯಜೀವಿ ಪ್ರಿಯರಿಗೆ ಬಿಗ್ ಅಪ್‌ಡೇಟ್: ಸಫಾರಿಗಳಲ್ಲಿ ಇನ್ಮುಂದೆ ಮೊಬೈಲ್ ಫೋನ್ ಸಂಪೂರ್ಣ ನಿಷೇಧ!
ಸಾಂದರ್ಭಿಕ ಚಿತ್ರ
Image Credit source: gettyimages.com
Edited By:

Updated on: Oct 10, 2026 | 1:23 PM

ಮುಖ್ಯಾಂಶಗಳು

  • ಸುಪ್ರೀಂ ಕೋರ್ಟ್ ಆದೇಶದಂತೆ ಸಫಾರಿಯಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣ ನಿಷೇಧ.
  • ಚಾಮರಾಜನಗರದ ಬಂಡೀಪುರ, ಕೆ.ಗುಡಿ ಹಾಗೂ ಪಿ.ಜಿ.ಪಾಳ್ಯ ಸಫಾರಿಗಳಲ್ಲಿ ಕಟ್ಟುನಿಟ್ಟಿನ ಜಾರಿ.
  • ತುರ್ತು ಸಂಪರ್ಕಕ್ಕಾಗಿ ಎಲ್ಲಾ ಸಫಾರಿ ವಾಹನಗಳಲ್ಲಿ ವೈರ್‌ಲೆಸ್ ವ್ಯವಸ್ಥೆ ಕಡ್ಡಾಯ.

ಚಾಮರಾಜನಗರ, ಅಕ್ಟೋಬರ್ 10: ಜಿಲ್ಲೆಯ ವನ್ಯಜೀವಿ ಧಾಮಗಳಲ್ಲಿ ಸಫಾರಿಗೆ ತೆರಳುವ ಪ್ರವಾಸಿಗರಿಗೆ ಅರಣ್ಯ ಇಲಾಖೆಯು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ಮುಂದೆ ಸಫಾರಿ ವೇಳೆ ಪ್ರವಾಸಿಗರು, ವಾಹನ ಚಾಲಕರು ಹಾಗೂ ಮಾರ್ಗದರ್ಶಕರು ಮೊಬೈಲ್ ಫೋನ್‌ಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಅರಣ್ಯ ಇಲಾಖೆಯ ಅಧಿಕೃತ ಆದೇಶದ ಪ್ರತಿಯಲ್ಲಿ ಏನಿದೆ?

  • ಸುಪ್ರೀಂ ಕೋರ್ಟ್ ಆದೇಶ: ಮಾನ್ಯ ಸುಪ್ರೀಂ ಕೋರ್ಟ್‌ನ ದಿನಾಂಕ 17-11-2025ರ ಆದೇಶದ ಪ್ಯಾರಾ 48.5ರ ಅನ್ವಯ, ಹುಲಿ ಸಂರಕ್ಷಿತ ಪ್ರದೇಶಗಳ ಕೋರ್ ಭಾಗಗಳ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಮೊಬೈಲ್ ಫೋನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ಪ್ರತಿಬಂಧಿಸಲಾಗಿದೆ.
  • ಮಾರ್ಗಸೂಚಿಗಳು ಮತ್ತು ಸುರಕ್ಷತೆ: ಪ್ರವಾಸಿಗರು, ವಾಹನ ಚಾಲಕರು ಹಾಗೂ ನೇಚರ್ ಗೈಡ್‌ಗಳು ಸಫಾರಿಗೆ ತೆರಳುವ ಮುನ್ನ ತಮ್ಮ ಮೊಬೈಲ್ ಫೋನ್‌ಗಳನ್ನು ಸೂಕ್ತ ಸ್ಥಳಗಳಲ್ಲಿ ಇಡಲು ಹಾಗೂ ಸಫಾರಿ ವಾಹನಗಳಲ್ಲಿ ‘Airplane mode’ನಲ್ಲಿ ಬಳಸಲು ವಿಭಾಗಾಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು.
  • ಎಚ್ಚರಿಕೆ ಫಲಕಗಳು: ಮೊಬೈಲ್ ಬಳಕೆ ನಿಷೇಧಿಸಿರುವ ಬಗ್ಗೆ ಎಲ್ಲಾ ಸಫಾರಿ ವಾಹನಗಳಲ್ಲಿ ಮತ್ತು ಆರಂಭಿಕ ಸ್ಥಳದಲ್ಲಿ ಸ್ಪಷ್ಟ ಸೂಚನಾ ಫಲಕಗಳನ್ನು ಅಳವಡಿಸಬೇಕು ಹಾಗೂ ಪ್ರವಾಸಿಗರಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು.
  • ವೈರ್​ಲೆಸ್ ಸಂಪರ್ಕ: ಪ್ರವಾಸಿಗರು ಮತ್ತು ಸಿಬ್ಬಂದಿಗಳ ಭದ್ರತೆಗಾಗಿ ಎಲ್ಲಾ ಸಫಾರಿ ವಾಹನಗಳಲ್ಲಿ ಮೊಬೈಲ್ ನಿಸ್ತಂತು ಸಂಪರ್ಕ ವ್ಯವಸ್ಥೆಯನ್ನು (Mobile Wireless Set) ಕಡ್ಡಾಯವಾಗಿ ಅಳವಡಿಸಿ ಕಾರ್ಯನಿರ್ವಹಿಸುವಂತೆ ಖಚಿತಪಡಿಸಿಕೊಳ್ಳಬೇಕು.
  • ಅರಿವು ಮೂಡಿಸುವುದು: ಮೊಬೈಲ್ ಬದಲಿಗೆ ನಿಯಮಾನುಸಾರ ಕ್ಯಾಮೆರಾಗಳನ್ನು ಬಳಸಬಹುದಾದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಟಿಕೆಟ್ ಬುಕಿಂಗ್ ತಂತ್ರಾಂಶದ ಮೂಲಕ ಸೂಕ್ತ ಸೂಚನೆ ನೀಡಬೇಕು.

ಮೊಬೈಲ್ ಬಿಡಿ, ಕ್ಯಾಮೆರಾ ಬಳಸಿ

ಒಟ್ಟಾರೆಯಾಗಿ, ವನ್ಯಜೀವಿಗಳ ಸಂರಕ್ಷಣೆ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸಫಾರಿ ವೇಳೆ ಮೊಬೈಲ್ ಬಳಕೆ ನಿಷೇಧಿಸಿರುವುದು ಮಹತ್ವದ ಹೆಜ್ಜೆಯಾಗಿದೆ. ಇದರ ಕಟ್ಟುನಿಟ್ಟಿನ ಪಾಲನೆಯಿಂದ ಪ್ರಾಣಿಗಳಿಗೆ ಉಂಟಾಗುವ ತೊಂದರೆ ತಪ್ಪಲಿದ್ದು, ಪ್ರವಾಸಿಗರು ಪ್ರಕೃತಿಯನ್ನು ಕ್ಯಾಮೆರಾ ಮೂಲಕ ಆನಂದಿಸಲು ಹೊಸ ಮಾರ್ಗಸೂಚಿ ಸಹಕಾರಿಯಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Sat, 10 October 26

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us