AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಚುನಾವಣೆ ತರಬೇತಿಯಲ್ಲಿದ್ದ ನೌಕರ ಏಕಾಏಕಿ ಕುಸಿದು ಬಿದ್ದು ಸಾವು

ಚುನಾವಣೆ ತರಬೇತಿಯಲ್ಲಿದ್ದ ನೌಕರ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ: ಚುನಾವಣೆ ತರಬೇತಿಯಲ್ಲಿದ್ದ ನೌಕರ ಏಕಾಏಕಿ ಕುಸಿದು ಬಿದ್ದು ಸಾವು
ಚುನಾವಣೆ ತರಬೇತಿಯಲ್ಲಿದ್ದ ನೌಕರ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on:Apr 18, 2023 | 1:10 PM

Share

ಮುಖ್ಯಾಂಶಗಳು

  • ಚುನಾವಣೆ ತರಬೇತಿಯಲ್ಲಿದ್ದ ನೌಕರ ಎದೆನೋವಿನಿಂದ ಕುಸಿದು ಬಿದ್ದು ಸಾವು
  • ಮೃತ ಜಗದೀಶ್ ತಾಲೂಕು ಖಜಾನೆಯಲ್ಲಿ ಕೆಲಸ ಮಾಡುತ್ತಿದ್ದರು
  • ಸ್ಥಳಕ್ಕೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಭೇಟಿ

ಚಾಮರಾಜನಗರ: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ದಿನಾಂಕ ಘೋಷಣೆಯಾಗಿದ್ದು ಮೇ 10ರಂದು ಮತದಾನ ನಡೆಯಲಿದೆ. ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಸರ್ಕಾರಿ ನೌಕರರಿಗೆ ಚುನಾವಣೆ ತರಬೇತಿ ನೀಡಲಾಗುತ್ತಿದೆ. ಈ ರೀತಿ ಚುನಾವಣೆ ತರಬೇತಿಯಲ್ಲಿದ್ದ ನೌಕರ ಹೃದಯಾಘಾತದಿಂದ(Heart Attack) ಮೃತಪಟ್ಟ ಘಟನೆ ನಡೆದಿದೆ. ಜಗದೀಶ್ (40) ಮೃತ ನೌಕರ.

ಹನೂರಿನ ವಿವೇಕಾನಂದ ಶಾಲೆಯಲ್ಲಿ ಏರ್ಪಡಿಸಿದ್ದ ತರಬೇತಿ ಆರಂಭವಾಗುತ್ತಿದ್ದಂತೆ ಎದೆನೋವಿನಿಂದ ಕುಸಿದು ಬಿದ್ದ ಜಗದೀಶ್, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಉಸಿರು ನಿಲ್ಲಿಸಿದ್ದಾರೆ. ಜಗದೀಶ್ ತಾಲೂಕು ಖಜಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಟಿಎಂಗೆ ಹಣ ಹಾಕುವ ವಾಹನದಲ್ಲಿ ಸಿಕ್ತು 2 ಕೋಟಿ ರೂ

ರಾಮನಗರ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಸದ್ಯ ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಗಂಟಕನದೊಡ್ಡಿ ಚೆಕ್​ಪೋಸ್ಟ್​ನಲ್ಲಿ ಚುನಾವಣಾಧಿಕಾರಿಗಳು ದಾಖಲೆ ಇಲ್ಲದ ವಾಹನದಲ್ಲಿ ಸಾಗಿಸುತ್ತಿದ್ದ 2 ಕೋಟಿ ಹಣ ಜಪ್ತಿ ಮಾಡಿದ್ದಾರೆ. ರಾಮನಗರ ಜಿಲ್ಲಾ ವರಿಷ್ಠಾಧಿಕಾರಿ ಕಾರ್ತಿಕ್ ಹಾಗು ಚುನಾವಣೆ ಅಧಿಕಾರಿ ಅವಿನಾಶ್ ಮೆನನ್ ರಾಜೇಂದ್ರ ನೇತೃತ್ವದಲ್ಲಿ ಎಟಿಎಂಗೆ ಹಣ ಹಾಕುವ ವಾಹನದಲ್ಲಿ ತೆಗೆದುಕೊಂಡು‌ ಹೋಗುತ್ತಿದ್ದ ಎರಡು ಕೋಟಿ ಹಣ ಜಪ್ತಿ ಮಾಡಲಾಗಿದೆ.

ಎಟಿಎಂಗೆ ಹಣ ಹಾಕುವ ವಾಹನದಲ್ಲಿ ದಾಖಲೆ ಇಲ್ಲದೆ ಸಂಜೆ 6 ಗಂಟೆ ಬಳಿಕ ಹಣ ಸಾಗಿಸುತ್ತಿದ್ದರಿಂದ ಅನುಮಾನಗೊಂಡ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆಗ ಹಣ ಸಿಕ್ಕಿದೆ.ಸಾಗಿಸಲಾಗುತ್ತಿದ್ದ ಹಣಕ್ಕೆ ಅಗತ್ಯ ದಾಖಲೆ ಇಲ್ಲದ ಹಿನ್ನೆಲೆ ಹಣವನ್ನು ವಶಕ್ಕೆ ಪಡೆಯಲಾಗಿದೆ. ಗನ್​ಮ್ಯಾನ್ ಇಲ್ಲದೆ ವಾಹನದಲ್ಲಿ ಹಣ ಸಾಗಿಸುತ್ತಿದ್ದ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:30 pm, Tue, 18 April 23

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು