ಚಾಮರಾಜನಗರ: ಸಾಕು ನಾಯಿ ಕೊಂದಿದ್ದ ಮೂರು ವರ್ಷದ ಹೆಣ್ಣು ಚಿರತೆ (leopard) ಯೊಂದು ಓರ್ವ ವ್ಯಕ್ತಿ ಹತ್ಯೆ ಮಾಡಿರುವಂತಹ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ವ್ಯಾಪ್ತಿಯ ಕೂತನೂರು ಗ್ರಾಮದಲ್ಲಿ ನಡೆದಿದೆ. ಮಲ್ಲಯ್ಯನಪುರ ಗ್ರಾಮದ ರಮೇಶ್ ಎಂಬಾತನಿಂದ ಕೃತ್ಯವೆಸಗಲಾಗಿದೆ. ಜಮೀನು ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ರಮೇಶ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಜಿ.ಆರ್. ಗೋವಿಂದರಾಜು ಎಂಬುವರ ಜಮೀನಿನಲ್ಲಿ ಚಿರತೆ ಕಳೇಬರ ಪತ್ತೆ ಆಗಿದೆ.
ನಾಲ್ಕು ದಿನಗಳ ಹಿಂದೆ ಸಾಕು ನಾಯಿಯನ್ನು ಚಿರತೆ ಕೊಂದು ಹಾಕಿದೆ. ಚಿರತೆ ಮೇಲಿನ ಸೇಡು ತೀರಿಸಿಕೊಳ್ಳಲು ಮೃತ ನಾಯಿಯ ಕಳೇಬರದ ಮೇಲೆ ಕೀಟನಾಶಕ ಔಷಧಿ ಸಿಂಪಡಿಸಿದ್ದ. ಚಿರತೆಯು ಮತ್ತೆ ಬಂದು ಮೃತದೇಹವನ್ನು ತಿಂದಿದ್ದರಿಂದ ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆ ಬಳಿಕ ಚಿರತೆ ಕಳೇಬರವನ್ನು ಅರಣ್ಯಾಧಿಕಾರಿಗಳು ಸುಟ್ಟುಹಾಕಿದ್ದಾರೆ.
ಇದನ್ನೂ ಓದಿ: ಚಾಮರಾಜನಗರದಲ್ಲಿ ಆನೆ, ಚಿಕ್ಕಮಗಳೂರಿನಲ್ಲಿ ಹುಲಿ ಹಾವಳಿ; ಆತಂಕದಲ್ಲಿ ಜನ
ಚಿಕ್ಕಮಗಳೂರು: ಕಾಡಾನೆಗಳಿಂದಾಗಿ ಪ್ರಾಣ ಹಾನಿ ಹಾಗೂ ಬೆಳೆ ನಷ್ಟ ಹೆಚ್ಚಾಗಿದ್ದು, ಹಾಸನದ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲೂಕಿನ ಜನರು ಹೈರಾಣಾಗಿದ್ದಾರೆ. ಇದರ ನಡುವೆ ಕೆಲವೆಡೆ ಹುಲಿ ಕಾಟವೂ ಹೆಚ್ಚಾಗಿದ್ದು, ಇತ್ತೀಚೆಗೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿತ್ತು.
ಹೊರಟ್ಟಿ, ಭಾರತಿಬೈಲು, ಮತ್ತಿಕಟ್ಟೆ ಗ್ರಾಮದಲ್ಲಿ ಹುಲಿ ಸಂಚಾರ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಹುಲಿ ದಾಳಿ ಮಾಡಿದರೆ ಎಂಬ ಆತಂಕ ಗ್ರಾಮಸ್ಥರದ್ದಾಗಿದೆ. ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಲಾಗಿದೆ.
ಇದನ್ನೂ ಓದಿ: ಸಫಾರಿ ಜೀಪನ್ನು ಅಟ್ಟಿಸಿಕೊಂಡುಬಂದ ಕಾಡಾನೆ, ರಿವರ್ಸ್ ಗೇರ್ನಲ್ಲೇ ಜೀಪ್ ಚಲಾಯಿಸಿದ ಚಾಲಕ: ವಿಡಿಯೋ ವೈರಲ್
ನಿರಂತರವಾಗಿ ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡಲಾಗಿತ್ತಿದೆ. ಕಾಫಿ ತೋಟದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಹೀಗಾಗಿ ಹುಲಿ ದಾಳಿ ಆತಂಕ ಗ್ರಾಮಸ್ಥರನ್ನು ಆವರಿಸಿದ್ದು, ಕಾರ್ಮಿಕರು ಜೀವನ ನಡೆಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.