ಬಂಡೀಪುರದಲ್ಲಿ ವ್ಯಕ್ತಿಯ ಅರ್ಧ ಮೃತದೇಹ ಪತ್ತೆ: ಹುಲಿ ಕೊಂದಿರುವ ಶಂಕೆ

Tiger Attack: ಸಂತ್ರಸ್ತ ವ್ಯಕ್ತಿಯ ಕುಟುಂಬದವರಿಗೆ ಆರ್ಥಿಕ ಪರಿಹಾರ ನೀಡುವ ಕುರಿತು ಸರ್ಕಾರದಿಂದ ಮುಂದಿನ ನಿರ್ದೇಶನವನ್ನು ಕೋರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಮಾನವೀಯತೆಯ ಆಧಾರದ ಮೇಲೆ ಸಂತ್ರಸ್ತ ಕುಟುಂಬಕ್ಕೆ ಬಿಟಿಆರ್ ನಿರ್ದೇಶಕ ಪಿ ರಮೇಶ್ ಕುಮಾರ್ ಅವರು 2 ಲಕ್ಷ ರೂ ಚೆಕ್ ವಿತರಿಸಿದ್ದಾರೆ.

ಬಂಡೀಪುರದಲ್ಲಿ ವ್ಯಕ್ತಿಯ ಅರ್ಧ ಮೃತದೇಹ ಪತ್ತೆ: ಹುಲಿ ಕೊಂದಿರುವ ಶಂಕೆ
ಸಾಂದರ್ಭಿಕ ಚಿತ್ರ
Edited By:

Updated on: Dec 13, 2023 | 9:37 AM

ಚಾಮರಾಜನಗರ, ಡಿಸೆಂಬರ್ 13: ಬುಡಕಟ್ಟು ವ್ಯಕ್ತಿಯೊಬ್ಬರು (Tribal Man) ನಾಪತ್ತೆಯಾದ ಒಂದು ದಿನದ ನಂತರ ಅವರ ಅರ್ಧ ದೇಹವು ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ (BTR) ಪತ್ತೆಯಾಗಿದೆ. ಹುಲಿ ದಾಳಿಯಿಂದ (Tiger Attack) ಅವರು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅರ್ಧ ಮೃತದೇಹ ಪತ್ತೆಯಾಗಿರುವ ಬಗ್ಗೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯನ್ನು ಬಸವ (54) ಎಂದು ಗುರುತಿಸಲಾಗಿದೆ.

ಬಸವ ಅವರು ಚಾಮರಾಜನಗರ ಜಿಲ್ಲೆಯ ಆಡಿನಕಣಿವೆ ಹಾಡಿಯ ಬಳಿ ಬಿಟಿಆರ್ ವ್ಯಾಪ್ತಿಯಲ್ಲಿ ಉರುವಲು ಸಂಗ್ರಹಿಸಲು ಮತ್ತು ಜಾನುವಾರುಗಳನ್ನು ಮೇಯಿಸಲು ಹೋಗಿದ್ದಾಗ ಗುಲಿ ದಾಳಿ ಮಾಡಿರು ಸಾಧ್ಯತೆ ಇದೆ. ಬಸವ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಬಸವನ ಅವರ ಸಾವಿನ ಸುದ್ದಿ ಹೊರಬಿದ್ದ ನಂತರ, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಸವ ಅವರು ಅರಣ್ಯ ಅತಿಕ್ರಮಣ ಮಾಡಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬಕ್ಕೆ ಯಾವುದೇ ಪರಿಹಾರವನ್ನು ಘೋಷಿಸಲು ಅರಣ್ಯಾಧಿಕಾರಿಗಳು ನಿರಾಕರಿಸಿದ್ದರು. ಇದರಿಂದ ಗ್ರಾಮಸ್ಥರು ಅಸಮಾಧಾನಗೊಂಡು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಕ್ರಿಯೆ ವಿಳಂಬವಾಯಿತು.

ಸಂತ್ರಸ್ತ ವ್ಯಕ್ತಿಯ ಕುಟುಂಬದವರಿಗೆ ಆರ್ಥಿಕ ಪರಿಹಾರ ನೀಡುವ ಕುರಿತು ಸರ್ಕಾರದಿಂದ ಮುಂದಿನ ನಿರ್ದೇಶನವನ್ನು ಕೋರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಮಾನವೀಯತೆಯ ಆಧಾರದ ಮೇಲೆ ಸಂತ್ರಸ್ತ ಕುಟುಂಬಕ್ಕೆ ಬಿಟಿಆರ್ ನಿರ್ದೇಶಕ ಪಿ ರಮೇಶ್ ಕುಮಾರ್ ಅವರು 2 ಲಕ್ಷ ರೂ ಚೆಕ್ ವಿತರಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚಾಮರಾಜನಗರ: 2 ಹುಲಿಗಳ ಮೃತದೇಹ ಪತ್ತೆ ಪ್ರಕರಣ; ವಿಷವಿಕ್ಕಿ ಕೊಂದ್ರ ಅಕ್ಕ-ಪಕ್ಕದ ಜಮೀನಿನ ಮಾಲೀಕರು?

ಕಲ್ಲಹಳ್ಳಿಯಲ್ಲಿ ಹುಲಿ ದಾಳಿ

ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿಯಲ್ಲಿ ಮಂಗಳವಾರ ರಾತ್ರಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಕಲ್ಲಹಳ್ಳಿ-ಸಂಪಿಗೆಪುರ ಮಾರ್ಗದಲ್ಲಿ ಹುಲಿ ಸಂಚರಿಸುವ ದೃಶ್ಯ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದೆ. ಪದೇ ಪದೆ ಹುಲಿ ಕಾಣಿಸಿರುವ ಕಾರಣ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us