AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಆಕ್ಸಿಜನ್ ದುರಂತ: 3 ವರ್ಷವಾದರೂ ನಿಲ್ಲದ ಸಂತ್ರಸ್ತರ ಗೋಳು, ಸಿಗದ ನ್ಯಾಯ

2021ರ ಮೇ 2ರಂದು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಗೋಳು ಇನ್ನೂ ನಿಂತಿಲ್ಲ. ಮೂರು ವರ್ಷಗಳೆದರೂ ಸಂತ್ರಸ್ತರಿಗೆ ಸರ್ಕಾರಿ ನೌಕರಿ ಸಿಕ್ಕಿಲ್ಲ.

ಚಾಮರಾಜನಗರ ಆಕ್ಸಿಜನ್ ದುರಂತ: 3 ವರ್ಷವಾದರೂ ನಿಲ್ಲದ ಸಂತ್ರಸ್ತರ ಗೋಳು, ಸಿಗದ ನ್ಯಾಯ
ಚಾಮರಾಜನಗರ ಆಕ್ಸಿಜನ್ ದುರಂತ: 3 ವರ್ಷವಾದರೂ ನಿಲ್ಲದ ಸಂತ್ರಸ್ತರ ಗೋಳು, ಸಿಗದ ನ್ಯಾಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jul 02, 2024 | 10:52 AM

Share

ಚಾಮರಾಜನಗರ, ಜುಲೈ 02: ಮೂರು ವರ್ಷಗಳ ಹಿಂದೆ ಚಾಮರಾಜನಗರ (Chamarajanagar) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್​ ದುರಂತದಲ್ಲಿ (Oxygen tragedy) ಮೃತಪಟ್ಟವರ ಕುಟುಂಬದ ಸದಸ್ಯರು ವೇತನ, ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದಾರೆ. ವೇತನ ಇಲ್ಲದೆ ನಾಲ್ಕು ತಿಂಗಳಿಂದ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಮೂರು ವರ್ಷಗಳ ಹಿಂದೆ 2021ರ ಮೇ 2ರಂದು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. 2022ರ ಸೆಪ್ಟೆಂಬರ್​ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಭಾರತ್​ ಜೋಡೋ ಪಾದಯಾತ್ರೆಗಾಗಿ ಗುಂಡ್ಲುಪೇಟೆಗೆ ಬಂದಾಗ, ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿದ್ದರು.

ಬಳಿಕ, ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂತು. ಉದ್ಯೋಗ, ಪರಿಹಾರದ ನಿರೀಕ್ಷೆಯಲ್ಲಿದ ಸಂತ್ರಸ್ತರ ಕಡೆ ಸರ್ಕಾರ ತಲೆ ಹಾಕಲಿಲ್ಲ. ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವುದಾಗಿ ನೀಡಿದ್ದ ಭರವಸೆ ಮರಿಚಿಕೆಯಾಯಿತು.

ಬಳಿಕ ಸಂತ್ರಸ್ತರ ಹೋರಾಟದ ನಂತರ ಕೇವಲ 10 ಮಂದಿಗೆ ಜಿಲ್ಲಾಡಳಿತ ಐದು ತಿಂಗಳ ಹಿಂದೆ ಹೊರಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್‌ ನೌಕರಿ ನೀಡಿತು. ಆದರೆ, ಫೆಬ್ರುವರಿ ಹೊರತುಪಡಿಸಿ ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿಲ್ಲ. ಉದ್ಯೋಗ ಭದ್ರತೆಯನ್ನು ಕೂಡ ನೀಡಿಲ್ಲ. ಕೇವಲ ಮೌಖಿಕ ಸೂಚನೆ ಮೇರೆಗೆ ವಿವಿಧ ಇಲಾಖೆ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸಂತ್ರಸ್ತರು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 36 ಜನ ಸಾವು: ಸರ್ಕಾರಿ ನೌಕರಿ ನೀಡುವಂತೆ ಮೃತ ಕುಟುಂಬಸ್ಥರ ಮನವಿ

​ಅಧಿಕಾರಕ್ಕೆ ಬಂದ ಹೊಸತರಲ್ಲಿ ಆಕ್ಸಿಜನ್ ದುರಂತದ ಪ್ರಕರಣ ಮರು ತನಿಖೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದರು. ಆದರೆ ಇನ್ನೂವರೆಗೂ ಮರು ತನಿಖೆ ಆರಂಭವಾಗಿಲ್ಲ.

ಆಕ್ಸಿಜನ್ ಕೊರತೆಯಿಂದ 36 ಜನ ಮೃತ

2021ರ ಮೇ 2ರಂದು ಚಾಮರಾಜನಗರ ಜಿಲ್ಲೆಯ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿಂದ ಆಕ್ಸಿಜನ್ ಬರಲೇ ಇಲ್ಲ, ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೇ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ವೆಂಟಿಲೇಟರ್‌, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು.

ದುರ್ಘಟನೆಯಲ್ಲಿ ಸರಕಾರದ ಅಂಕಿಅಂಶಗಳ ಪ್ರಕಾರ 24 ಮಂದಿ ಮೃತಪಟ್ಟಿದ್ದಾರೆ ಎಂದಿತ್ತು. ಆದರೆ ಪ್ರಕರಣದ ತನಿಖೆಗಾಗಿ ಹೈಕೋರ್ಟ್‌ ನೇಮಿಸಿದ್ದ ತನಿಖಾ ಸಮಿತಿ 36 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ನೀಡಿತ್ತು. ಹೈಕೋರ್ಟ್‌ನ ಸೂಚನೆಯಂತೆ, ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ಕಳೆದ ವರ್ಷ 2021ರಲ್ಲಿ ಜೂನ್‌ ತಿಂಗಳ ಆರಂಭದಲ್ಲಿ ತಲಾ 2 ಲಕ್ಷ ರೂ ಹಾಗೂ ಆಗಸ್ಟ್‌ ಎರಡನೇ ವಾರದಲ್ಲಿ 13 ಮಂದಿಗೆ ಹೆಚ್ಚುವರಿಯಾಗಿ ತಲಾ 3 ಲಕ್ಷ ಹಣವನ್ನು ತಾತ್ಕಾಲಿಕ ಪರಿಹಾರವಾಗಿ ಜಿಲ್ಲಾಡಳಿತ ವಿತರಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:51 am, Tue, 2 July 24