ಚಾಮರಾಜನಗರ ಆಕ್ಸಿಜನ್ ದುರಂತ: ದಯಾಮರಣ ಕೋರಿ ಸಂತ್ರಸ್ತೆಯರಿಂದ ರಾಷ್ಟ್ರಪತಿಗೆ ಪತ್ರ

2021ರ ಮೇ 2ರಂದು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಗೋಳು ಇನ್ನೂ ನಿಂತಿಲ್ಲ. ಇದೀಗ ಸಂತ್ರಸ್ತೆಯರು ದಯಾಮರಣ ಕೂರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ: ದಯಾಮರಣ ಕೋರಿ ಸಂತ್ರಸ್ತೆಯರಿಂದ ರಾಷ್ಟ್ರಪತಿಗೆ ಪತ್ರ
ಚಾಮರಾಜನಗರ ಆಕ್ಸಿಜನ್ ದುರಂತ: ದಯಾಮರಣ ಕೋರಿ ಸಂತ್ರಸ್ತೆಯರಿಂದ ರಾಷ್ಟ್ರಪತಿಗೆ ಪತ್ರ
Edited By: ವಿವೇಕ ಬಿರಾದಾರ

Updated on: Jul 09, 2024 | 1:22 PM

ಚಾಮರಾಜನಗರ, ಜುಲೈ 09: ಮೂರು ವರ್ಷಗಳ ಹಿಂದೆ ಚಾಮರಾಜನಗರ (Chamarajanagar) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್​ ದುರಂತದಲ್ಲಿ (Oxygen tragedy) ಮೃತಪಟ್ಟವರ ಕುಟುಂಬದ ಸದಸ್ಯರು ವೇತನ, ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ (Presedent of India) ಪತ್ರ ಬರೆದಿದ್ದಾರೆ.

ನೆಪ ಮಾತ್ರಕ್ಕೆ ಒಂಬತ್ತು ಮಂದಿಗೆ ಹೊರಗುತ್ತಿಗೆ ಆಧಾರದ ಡಿ ಗ್ರೂಪ್​ ನೌಕರಿ ನೀಡಲಾಗಿದೆ. ಆದರೆ ಯಾವುದೇ ಆದೇಶ ಪ್ರತಿ ನೀಡದೆ ಬರಿ ಮೌಖಿಕ ಆದೇಶದ ಮೇಲೆ ಜಿಲ್ಲಾಡಳಿತ ಕೆಲಸ ನೀಡಿದೆ. ಕೇವಲ ಮೂರು ತಿಂಗಳ ವೇತನವನ್ನು ಮಾತ್ರ ನೀಡಿ, ಇನ್ನೂ ಎರಡು ತಿಂಗಳ ವೇತನವನ್ನು ಜಿಲ್ಲಾಡಳಿತ ಬಾಕಿ ಉಳಿಸಿ ಕೊಂಡಿದೆ. ಅತ್ತ ಕೂಲಿ ಕೆಲಸಕ್ಕೂ ಹೋಗಲಾಗದೆ, ಇತ್ತ ಹೊರ ಗುತ್ತಿಗೆ ಕೆಲಸವನ್ನು ಮಾಡಲಾಗದೆ ಪರಿತಪ್ಪಿಸುತ್ತಿದ್ದೇವೆ. ಹೀಗಾಗಿ ನಮಗೆ ದಯಾ ಮರಣ ಕರುಣಿಸಿ ಎಂದು ಸಂತ್ರಸ್ತೆಯರು ಕಣ್ಣೀರಿಟ್ಟರು.

ಇದನ್ನೂ ಓದಿ: ಚಾಮರಾಜನಗರ ನಗರಸಭೆಯಿಂದ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ: 8 ಕೋಟಿ ರೂ ಖರ್ಚಾದ್ರೂ ಮುಗಿಲಿಲ್ಲ ರಸ್ತೆ 

ಏನಿದು ಪ್ರಕರಣ

ಮೂರು ವರ್ಷಗಳ ಹಿಂದೆ 2021ರ ಮೇ 2ರಂದು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. 2022ರ ಸೆಪ್ಟೆಂಬರ್​ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಭಾರತ್​ ಜೋಡೋ ಪಾದಯಾತ್ರೆಗಾಗಿ ಗುಂಡ್ಲುಪೇಟೆಗೆ ಬಂದಾಗ, ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿದ್ದರು.

ಬಳಿಕ, ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂತು. ಉದ್ಯೋಗ, ಪರಿಹಾರದ ನಿರೀಕ್ಷೆಯಲ್ಲಿದ ಸಂತ್ರಸ್ತರ ಕಡೆ ಸರ್ಕಾರ ತಲೆ ಹಾಕಲಿಲ್ಲ. ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವುದಾಗಿ ನೀಡಿದ್ದ ಭರವಸೆ ಮರಿಚಿಕೆಯಾಯಿತು.

ಬಳಿಕ ಸಂತ್ರಸ್ತರ ಹೋರಾಟದ ನಂತರ ಕೇವಲ 10 ಮಂದಿಗೆ ಜಿಲ್ಲಾಡಳಿತ ಐದು ತಿಂಗಳ ಹಿಂದೆ ಹೊರಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್‌ ನೌಕರಿ ನೀಡಿತು. ಆದರೆ, ಫೆಬ್ರುವರಿ ಹೊರತುಪಡಿಸಿ ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿಲ್ಲ. ಉದ್ಯೋಗ ಭದ್ರತೆಯನ್ನು ಕೂಡ ನೀಡಿಲ್ಲ. ಕೇವಲ ಮೌಖಿಕ ಸೂಚನೆ ಮೇರೆಗೆ ವಿವಿಧ ಇಲಾಖೆ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸಂತ್ರಸ್ತರು ಕೆಲಸ ಮಾಡುತ್ತಿದ್ದಾರೆ.

ಆಕ್ಸಿಜನ್ ಕೊರತೆಯಿಂದ 36 ಜನ ಮೃತ

2021ರ ಮೇ 2ರಂದು ಚಾಮರಾಜನಗರ ಜಿಲ್ಲೆಯ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿಂದ ಆಕ್ಸಿಜನ್ ಬರಲೇ ಇಲ್ಲ, ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೇ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ವೆಂಟಿಲೇಟರ್‌, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು.

ದುರ್ಘಟನೆಯಲ್ಲಿ ಸರಕಾರದ ಅಂಕಿಅಂಶಗಳ ಪ್ರಕಾರ 24 ಮಂದಿ ಮೃತಪಟ್ಟಿದ್ದಾರೆ ಎಂದಿತ್ತು. ಆದರೆ ಪ್ರಕರಣದ ತನಿಖೆಗಾಗಿ ಹೈಕೋರ್ಟ್‌ ನೇಮಿಸಿದ್ದ ತನಿಖಾ ಸಮಿತಿ 36 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ನೀಡಿತ್ತು. ಹೈಕೋರ್ಟ್‌ನ ಸೂಚನೆಯಂತೆ, ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ಕಳೆದ ವರ್ಷ 2021ರಲ್ಲಿ ಜೂನ್‌ ತಿಂಗಳ ಆರಂಭದಲ್ಲಿ ತಲಾ 2 ಲಕ್ಷ ರೂ ಹಾಗೂ ಆಗಸ್ಟ್‌ ಎರಡನೇ ವಾರದಲ್ಲಿ 13 ಮಂದಿಗೆ ಹೆಚ್ಚುವರಿಯಾಗಿ ತಲಾ 3 ಲಕ್ಷ ಹಣವನ್ನು ತಾತ್ಕಾಲಿಕ ಪರಿಹಾರವಾಗಿ ಜಿಲ್ಲಾಡಳಿತ ವಿತರಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us