ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 36 ಜನ ಸಾವು: ಸರ್ಕಾರಿ ನೌಕರಿ ನೀಡುವಂತೆ ಮೃತ ಕುಟುಂಬಸ್ಥರ ಮನವಿ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದರು.

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 36 ಜನ ಸಾವು: ಸರ್ಕಾರಿ ನೌಕರಿ ನೀಡುವಂತೆ ಮೃತ ಕುಟುಂಬಸ್ಥರ ಮನವಿ
ಮೃತರ ಕುಟುಂಬಸ್ಥ
Follow us
ವಿವೇಕ ಬಿರಾದಾರ
|

Updated on: Jun 05, 2023 | 3:01 PM

ಚಾಮರಾಜನಗರ: ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ (Chamarajanagar) ಆಕ್ಸಿಜನ್ ದುರಂತ (Chamarajanagar oxygen tragedy) ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ (Oxygen) ಕೊರತೆಯಿಂದ 36 ಜನ ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರು ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನೆ ಸಭೆ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಿಲ್ಲ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಲಿಲ್ಲವೆಂದು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇದಕ್ಕೆ ಎಸ್​ಡಿಪಿಐ ಕೂಡ ಬೆಂಬಲ ಸೂಚಿಸಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಮೃತರ ಕುಟುಂಬಕ್ಕೆ ಪರಿಹಾರ ಹಾಗೂ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಹೀಗಾಗಿ ಸದ್ಯ ಪರಿಹಾರ ಹಣಕ್ಕಿಂತ ನೌಕರಿ ಕೊಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಆಸ್ಪತ್ರೆ ದುರಂತದ ಬಗ್ಗೆ ಹೊಸದಾಗಿ ತನಿಖೆಗೆ ದಿನೇಶ್ ಗುಂಡೂರಾವ್ ಸೂಚನೆ; ಸುಧಾಕರ್​​ಗೆ ಸಂಕಷ್ಟ

ಆಕ್ಸಿಜನ್ ಕೊರತೆಯಿಂದ 36 ಜನ ಮೃತ

ಮೇ 2ರಂದು 2021ರಂದು ಚಾಮರಾಜನಗರ ಜಿಲ್ಲೆಯ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿಂದ ಆಕ್ಸಿಜನ್ ಬರಲೇ ಇಲ್ಲ, ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೇ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ವೆಂಟಿಲೇಟರ್‌, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು.

ದುರ್ಘಟನೆಯಲ್ಲಿ ಸರಕಾರದ ಅಂಕಿಅಂಶಗಳ ಪ್ರಕಾರ 24 ಮಂದಿ ಮೃತಪಟ್ಟಿದ್ದಾರೆ ಎಂದಿತ್ತು. ಆದರೆ ಪ್ರಕರಣದ ತನಿಖೆಗಾಗಿ ಹೈಕೋರ್ಟ್‌ ನೇಮಿಸಿದ್ದ ತನಿಖಾ ಸಮಿತಿ 36 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ನೀಡಿತ್ತು. ಹೈಕೋರ್ಟ್‌ನ ಸೂಚನೆಯಂತೆ, ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ಕಳೆದ ವರ್ಷ 2021ರಲ್ಲಿ ಜೂನ್‌ ತಿಂಗಳ ಆರಂಭದಲ್ಲಿ ತಲಾ 2 ಲಕ್ಷ ರೂ ಹಾಗೂ ಆಗಸ್ಟ್‌ ಎರಡನೇ ವಾರದಲ್ಲಿ 13 ಮಂದಿಗೆ ಹೆಚ್ಚುವರಿಯಾಗಿ ತಲಾ 3 ಲಕ್ಷ ಹಣವನ್ನು ತಾತ್ಕಾಲಿಕ ಪರಿಹಾರವಾಗಿ ಜಿಲ್ಲಾಡಳಿತ ವಿತರಿಸಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?