ಮಹದೇಶ್ವರನ ದರ್ಶನ ಪಡೆದು ವಾಪಸ್ ಬರುವಾಗ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ 

ಮೈಸೂರು ಜಿಲ್ಲೆಯ ಕೆ.ಆರ್​​.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರನ ದರ್ಶನ ಪಡೆದ ಬಳಿಕ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದೆ. ಓರ್ವ ಮೃತಪಟ್ಟಿದ್ದಾರೆ. ಮೂವರನ್ನು ಕೊಳ್ಳೆಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹದೇಶ್ವರನ ದರ್ಶನ ಪಡೆದು ವಾಪಸ್ ಬರುವಾಗ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ 
ಕೊಳ್ಳೇಗಾಲ ಆಸ್ಪತ್ರೆ
Follow us
| Updated By: ವಿವೇಕ ಬಿರಾದಾರ

Updated on:Jun 08, 2024 | 3:28 PM

ಚಾಮರಾಜನಗರ, ಜೂನ್​ 08: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿದ್ದು, ಓರ್ವ ಮೃತಪಟ್ಟಿರುವ ಘಟನೆ ಹನೂರು (Hunur) ತಾಲೂಕಿನ ಮಲೆಮಹದೇಶ್ವರ (Male Mahadeshwara Betta) ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ನಡೆದಿದೆ. ಅಸ್ವಸ್ಥಗೊಂಡ ಮೂವರನ್ನು ಕೊಳ್ಳೇಗಾಲ (Kollegala) ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್​​.ನಗರ ತಾಲೂಕಿನ ಚಂದಗಾಲು ಗ್ರಾಮದ ನಿವಾಸಿ ಮಹದೇವನಾಯಕ (65) ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ (60), ಲೀಲಾವತಿ (45) ಮತ್ತು ರಿಷಿತಾ (21) ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ನಾಲ್ವರೂ ಶುಕ್ರವಾರ (ಜೂ.07) ರಾತ್ರಿ ಮಹದೇಶ್ವರನ ಬೆಟ್ಟಕ್ಕೆ ಬಂದಿದ್ದಾರೆ. ಇಂದು (ಜೂ.08) ಬೆಳಗ್ಗೆ ಮಹದೇಶ್ವರನ ದರ್ಶನ ಪಡೆದಿದ್ದಾರೆ. ಮಹದೇಶ್ವರನ ದರ್ಶನ ಬಳಿಕ ತಾಳಬೆಟ್ಟಕ್ಕೆ ಹೋಗುವುದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಅದರಂತೆ ಕುಟುಂಬ ತಾಳಬೆಟ್ಟಕ್ಕೆ ಹೋಗಿದ್ದಾರೆ. ಅಲ್ಲಿ ನಾಲ್ವರೂ ವಿಷ ಸೇವಿಸಿದ್ದಾರೆ. ನಾಲ್ವರಲ್ಲಿ ಮಹದೇವನಾಯಕ ಎಂಬುವರು ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯಾಯ ಸಿಗದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

K.R.ನಗರ ತಾಲೂಕಿನ ಚೀರನಹಳ್ಳಿಯ ಯುವಕನಿಂದ ಬ್ಲ್ಯಾಕ್​ಮೇಲ್ ಮೃತ ಮಹದೇವನಾಯಕ ಮೊಮ್ಮಗಳನ್ನು‌ ಓರ್ವ ಯುವಕ ಪ್ರೀತಿಸುತ್ತಿದ್ದನು. ಈತ ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಆಕೆಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದನು. ಈ ಬಗ್ಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕುಟಂಬಸ್ಥರು ಮಾನ ಮರ್ಯಾದೆಗೆ ಅಂಜಿ ಮಹದೇಶ್ವರ ದರ್ಶನ ಪಡೆದು ಬಳಿಕ  ತಾಳಬೆಟ್ಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Sat, 8 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್