AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar News: ಆಕಸ್ಮಿಕ ಬೆಂಕಿ ಅವಘಡ, ಹೊತ್ತಿ ಉರಿದ ಶಾಲೆ: ಪಠ್ಯ ಪುಸ್ತಕ, ಡೆಸ್ಕ್ ಬೆಂಕಿಗಾಹುತಿ​​

ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಕರ್ನಾಟಕ ಪಬ್ಲಿಕ್ ಶಾಲೆ ಹೊತ್ತಿ ಉರಿದಿರುವಂತಹ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

Chamarajanagar News: ಆಕಸ್ಮಿಕ ಬೆಂಕಿ ಅವಘಡ, ಹೊತ್ತಿ ಉರಿದ ಶಾಲೆ: ಪಠ್ಯ ಪುಸ್ತಕ, ಡೆಸ್ಕ್ ಬೆಂಕಿಗಾಹುತಿ​​
ಹೊತ್ತಿ ಉರಿದ ಕರ್ನಾಟಕ ಪಬ್ಲಿಕ್ ಶಾಲೆ
ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 8:52 PM

Share

ಚಾಮರಾಜನಗರ: ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಕರ್ನಾಟಕ ಪಬ್ಲಿಕ್ ಶಾಲೆ (School) ಹೊತ್ತಿ ಉರಿದಿರುವಂತಹ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳಿಂದ ಸಿಗರೇಟ್ ಸೇದಿ ಶಾಲೆಯೊಳಗೆ ಬೀಸಾಡಿರುವ ಶಂಕೆ ವ್ಯಕ್ತವಾಗಿದ್ದು, ಪಠ್ಯ ಪುಸ್ತಕ, ಡೆಸ್ಕ್, ಕೊಠಡಿ, ಕಿಟಕಿ ಬಾಗಿಲುಗಳು ಬೆಂಕಿಗಾಹುತಿ ಆಗಿವೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಕಾವಲು ಅರಣ್ಯದಲ್ಲಿ ಆಕಸ್ಮಿಕ ಬೆಂಕಿ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಬಳಿ ವರವು ಕಾವಲು ಅರಣ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಹಲವು ಗಿಡ, ಮರಗಳು ಬೆಂಕಿಗಾಹುತಿಯಾಗಿದೆ. ತಡರಾತ್ರಿವರೆಗೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪೆಟ್ರೋಲ್ ಬಂಕ್​ನಲ್ಲಿ ಅಗ್ನಿ ಅವಘಡ: ಯುವತಿ ಸಾವು

ತುಮಕೂರು: ಪೆಟ್ರೋಲ್ ಬಂಕ್​ನಲ್ಲಿ ಇಂಧನ ತುಂಬಿಸಿಕೊಳ್ಳುತ್ತಿದ್ದಾಗ ಅಗ್ನಿ ಅವಘಡ ಸಂಭವಿಸಿ 18 ವರ್ಷದ ಯುವತಿ ಮೃತಪಟ್ಟ ದಾರುಣ ಘಟನೆ ಇತ್ತೀಚೆಗೆ ತುಮಕೂರಿನಲ್ಲಿ ಸಂಭವಿಸಿತ್ತು. ಇದೀಗ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಬಹಿರಂಗವಾಗಿದ್ದು, ಹೃದಯ ಕಲಕುವಂತಿತ್ತು. ಮೊಬೈಲ್​ ಫೋನ್​ ಬಳಸುತ್ತಿದ್ದುದರಿಂದ ಬೆಂಕಿ ಹೊತ್ತಿಕೊಂಡಿತ್ತು ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಬಿಎಂಟಿಸಿ ಬಸ್​ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್, ಬೆಂಕಿ ಹೊತ್ತಿಕೊಳ್ಳುವ ಮುನ್ನ ಹಣ ವರ್ಗಾವಣೆ

ಮೃತ ಯುವತಿಯನ್ನು ಭವ್ಯಾ ಎಂದು ಗುರುತಿಸಲಾಗಿತ್ತು. ಜತೆಗೆ ಆಕೆಯ ತಾಯಿ ರತ್ನಮ್ಮ ಕೂಡ ಇದ್ದರು. ಗಂಭೀರ ಗಾಯಗೊಂಡಿರುವ ಅವರು ಚಿಕಿತ್ಸೆ ನೀಡಲಾಗಿತ್ತು. ಭವ್ಯ ಹಾಗೂ ರತ್ನಮ್ಮ ಸಿರಾ ತಾಲೂಕಿನ ನಿವಾಸಿಗಳು.

ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಆಕಸ್ಮಿಕ ಬೆಂಕಿ

ಆನೇಕಲ್: ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ಆನೇಕಲ್ ತಾಲೂಕಿನ ಬಸವನಪುರ ಗೇಟ್​ನಲ್ಲಿ ಇತ್ತೀಚೆಗೆ ನಡೆದಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಳಗಿಳಿದು ಪ್ರಯಾಣಿಕರು ಪಾರಾಗಿದ್ದರು. ತಾಂತ್ರಿಕದೋಷದಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನ ವ್ಯಕ್ತವಾಗಿತ್ತು. ಕೆಎ 57, ಎಫ್​ 0569 ಸಂಖ್ಯೆ ಬಿಎಂಟಿಸಿ ಬಸ್​ ಬೆಂಕಿಗಾಹುತಿ ಆಗಿದ್ದು, ಮೆಜೆಸ್ಟಿಕ್-ಜಿಗಣಿ ನಡುವೆ ಸಂಚರಿಸುತ್ತಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದರು.

ಮತ್ತೊಂದು ಪ್ರಕರಣದಲ್ಲಿ ರಸ್ತೆ ಬದಿ ನಿಂತಿದ್ದ 3 ಖಾಸಗಿ ಬಸ್​ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್​ ಕಾಲೇಜು ಬಳಿ ಇತ್ತೀಚೆಗೆ ನಡೆದಿತ್ತು. ಎಸ್​ಆರ್​ಎಸ್​ ಟ್ರಾವೆಲ್ಸ್​ಗೆ ಸೇರಿದ 3 ಬಸ್​ಗಳು ಹೊತ್ತಿ ಉರಿದಿದ್ದವು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:43 pm, Sun, 4 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ