ಚಾಮರಾಜನಗರ: ಲಾರಿ, ಕಾರು, ದ್ವಿಚಕ್ರ ವಾಹನ ಮಧ್ಯೆ ಸರಣಿ ಅಪಘಾತ, ನಾಲ್ವರು ಬಾಲಕರ ಸಾವು
ಚಾಮರಾಜನಗರದ ಗಾಳಿಪುರ ಬೈಪಾಸ್‌ನಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಒಬ್ಬ ಬಾಲಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೆ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸದ್ಯ ಚಾಮರಾಜನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಚಾಮರಾಜನಗರ, ಸೆಪ್ಟೆಂಬರ್ 07: ಚಾಮರಾಜನಗರದ (Chamarajanagar) ಗಾಳಿಪುರ ಬೈಪಾಸ್‌ನಲ್ಲಿ ಶನಿವಾರ ಸಂಭವಿಸಿದ ಲಾರಿ, ಕಾರು ಮತ್ತು ದ್ವಿಚಕ್ರ ವಾಹನ ನಡುವಿನ ಸರಣಿ ಅಪಘಾತದಲ್ಲಿ (serial accident) ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ. ಮೆರಾನ್, ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್ ಮೃತರು. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರವಾಗಲಿದೆ. ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರಣಿ ಅಪಘಾತದಲ್ಲಿ 10 ವರ್ಷದ ಮೆರಾನ್ ನಿನ್ನೆ ಸ್ಥಳದಲ್ಲೇ ಮೃತಪಟ್ಟಿದ್ದ. ಮೂವರ ಸ್ಥಿತಿ ಗಂಭೀರವಾಗಿತ್ತು. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್ ಮೃತಪಟ್ಟಿದ್ದಾರೆ.
ನಡೆದದ್ದೇನು?
ಈದ್ ಹಬ್ಬ ಸಂಭ್ರಮ ಮನೆ ಮಾಡಿತ್ತು. ಎಲ್ಲರೂ ನಮಾಜ್ ಮಾಡ್ಕೊಂಡು ಹಬ್ಬವನ್ನ ಆಚರಿಸಿದರು. ಶನಿವಾರವಾದ ಕಾರಣ ಶಾಲೆಗೆ ಹೋಗಿರ್ಲಿಲ್ಲ. ಸೋಮವಾರ ಶಾಲೆಗೆ ಹೋಗೋಣ ಅಂತ ಡಿಸೈಡ್ ಮಾಡಿದ್ದರು ಮೆರಾನ್ ಹಾಗೂ ಆತನ ಸಹೋದರ ಹಾಗೂ ಇಬ್ಬರು ಸ್ನೇಹಿತರು.
ಇದನ್ನೂ ಓದಿ: ಯಲ್ಲಾಪುರ: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ; ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು
ಒಟ್ಟು ನಾಲ್ವರು ಟಿವಿಎಸ್ ಎಕ್ಸ್ ಎಲ್ ಬೈಕ್ ತೆಗೆದುಕೊಂಡು ಗಾಳಿಪುರದ ಬಳಿ ಇರುವ ಔಟರ್ ರಿಂಗ್ ರಸ್ತೆಗೆ ಬಂದಿದ್ದು, ಹೈವೆಯಲ್ಲಿ ವೇಗವಾಗಿ ಬರ್ತಾಯಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರು. ಬೈಕ್ ಹಿಂದೆಯೇ ಇದ್ದ ಕಾರು ಕೂಡ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ನಾಲ್ವರು ಸಹ ಹೆಲ್ಮೆಟ್ ಹಾಕಿರ್ಲಿಲ್ಲ, ಪರಿಣಾಮ ನಾಲ್ವರಿಗೂ ಹೆಡ್ ಇಂಜ್ಯುರಿಯಾಗಿ ಮೃತಪಟ್ಟಿದ್ದಾರೆ.
ಅದೇನೆ ಹೇಳಿ ಅಪ್ರಾಪ್ತರ ಕೈಗೆ ಬೈಕ್ ನೀಡಿದ್ದು ಪೋಷಕರ ತಪ್ಪು. ಇತ್ತ ಒಂದೇ ಬೈಕ್ನಲ್ಲಿ ಹುಡುಗಾಟ ಆಡಲು ಹೋಗಿ ಈಗ ನಾಲ್ಕು ಜೀವಗಳು ಬಲಿಯಾಗಿದ್ದು ಮಾತ್ರ ದುರಂತವೇ ಸರಿ.
ನಿಯಂತ್ರಣ ತಪ್ಪಿ ತುಂಗಾನದಿಗೆ ಬಿದ್ದ ಕಾರು: ನಾಲ್ವರಿಗೆ ಗಾಯ
ನಿಯಂತ್ರಣ ತಪ್ಪಿ ತುಂಗಾನದಿಗೆ ಕಾರು ಬಿದ್ದಿದ್ದು, ನಾಲ್ವರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿಮನೆ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ಚಿನ್ನದಂಥ ಪತ್ನಿ ಇದ್ದರೂ ಇನ್ನೊಬ್ಬಳ ಜತೆ ಲವ್ವಿಡವ್ವಿ: ಹೆಂಡ್ತಿ ಪ್ರಶ್ನಿಸಿದ್ದಕ್ಕೆ ನಡೆಯಿತು ಘೋರ ದುರಂತ
ದಾವಣಗೆರೆ ಮೂಲದ ಪ್ರವಾಸಿಗರು ಶೃಂಗೇರಿಗೆ ಪ್ರವಾಸಕ್ಕೆ ಬಂದಿದ್ದರು. ಗಾಯಗೊಂಡ ನಾಲ್ವರಿಗೆ ಶೃಂಗೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:53 am, Sun, 7 September 25



