ಭಾರತ್ ಜೋಡೋ ಯಾತ್ರೆ ಕರ್ನಾಟಕ ಎಂಟ್ರಿಗೆ ಕ್ಷಣಗಣನೆ: ಪೊಲೀಸ್ ಇಲಾಖೆಯಿಂದ ಫುಲ್ ಟೈಟ್ ಸೆಕ್ಯುರಿಟಿ

ರಾಹುಲ್ ಗಾಂಧಿ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶ ಮಾಡಲಿದ್ದು, ಪೊಲೀಸ್ ಭದ್ರತೆ ಬಗ್ಗೆ ಚಾಮರಾನಗರ ಎಸ್​ಪಿ ಮಾಹಿತಿ ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆ  ಕರ್ನಾಟಕ ಎಂಟ್ರಿಗೆ ಕ್ಷಣಗಣನೆ: ಪೊಲೀಸ್ ಇಲಾಖೆಯಿಂದ ಫುಲ್ ಟೈಟ್ ಸೆಕ್ಯುರಿಟಿ
Bharat Jodo
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 29, 2022 | 7:15 PM

ಚಾಮರಾಜನಗರ: ಮುಂದಿನ ಚುನಾವಣೆವಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ರಾಹುಲ್ ಗಾಂಧಿ ಗಾಂಧಿ ನೇತೃತ್ವದಲ್ಲಿ ಭಾರತ್ ಜೊಡೋ ಯಾತ್ರೆ ಆರಂಭಗೊಂಡಿದ್ದು, ಅದು ನಾಳೆ (ಸೆಪ್ಟೆಂಬರ್ 30)ಕ್ಕೆ ಕರ್ನಾಟಕ ಪ್ರವೇಶ ಮಾಡಲಿದೆ. ಕೇರಳದ ವೈನಾಡು ಮೂಲಕ ಕರ್ನಾಟಕದ ಗಡಿ ಭಾಗ ಗುಂಡ್ಲುಪೇಟೆ ತಲುಪುವ ಭಾರತ್ ಜೋಡೋ ಯಾತ್ರೆ ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನಗಳ ಕಾಲ, 510 ಕಿಮೀ ಕೈಪಡೆ ಪಾದಯಾತ್ರೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಯಾತ್ರೆ ಆರಂಭಕ್ಕೂ ಮುನ್ನ ಕಿಡಿಗೇಡಿಗಳು ಭಾರತ್ ಜೋಡೋ ಯಾತ್ರೆಯ ಬ್ಯಾನರ್ ಹರಿದಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲಲ್ಲಿ ಇಂತಹ ಕೃತ್ಯಗಳ ಮರುಕಳಿಸಬಾರದು ಎಂದು ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಹೆಚ್ಚಿನ ಮುತುವರ್ಜಿ ವಹಿಸಿದೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಬ್ಯಾನರ್ ಹರಿದ ಪ್ರಕರಣ: ಪೊಲೀಸ್ ಠಾಣೆಗೆ ಹೋಗಿ ಖಡಕ್ ಎಚ್ಚರಿಕೆ ಕೊಟ್ಟ ಡಿಕೆಶಿ

ಬಂದೋಬಸ್ತ್​ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಮೂವರು ಎಸ್ಪಿ, ಎಂಟು ಜನ ಡಿವೈಎಸ್ಪಿ, 25 ಇನ್ಸ್​ಪೆಕ್ಟರ್, 50 ಜನ ಸಬ್ ಇನ್ಸಫೆಕ್ಟರ್, ಸಾವಿರ ಜನ ಕಾನ್ಟೆಬಲ್, ಕೆಎಸ್ ಆರ್ ಪಿ, 10ಕ್ಕೂ ಅಧಿಕ ಡಿಆರ್ ಸಿಬ್ಬಂದಿ ಮಾಡ್ಕೊಂಡಿದ್ದೇವೆ. ಕಾನೂನು ಬಾಹಿರ ಕೃತ್ಯಕ್ಕೆ ಯಾರೇ ಮುಂದಾದರೂ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿ ನೀಡಿದರು.

ಇನ್ನು ಇದೇ ವೇಳೆ ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ಅವರ ಫ್ಲೆಕ್ಸ್ ಹರಿದ ಘಟನೆ ಬಗ್ಗೆ ಮಾತನಾಡಿ, ಬೆಳಗ್ಗೆ ಕಿಡಿಗೇಡಿಗಳು ಚಾಕುವಿನಿಂದ ಫ್ಲೆಕ್ಸ್ ಹರಿದಿದ್ದಾರೆ. ಈಗಾಗಲೇ ಪ್ರಕರಣ ದಾಖಲಾಗಿದೆ. ಕೆಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಎಲ್ಲ ಸೆರೆಯಾಗಿದೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ಇದನ್ನೂ ಓದಿ: Bharat Jodo Yatra: ಭಾರತ್ ಜೋಡೋ ಯಾತ್ರೆ ಹಿಂದಿ ಬ್ಯಾನರ್​ಗೆ ಮಸಿ ಬಳಿದ ಕನ್ನಡಿಗರು 

ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಎಲ್ಲೆಲ್ಲಿ?

ಮೊದಲ ಹಂತದ ರೂಟ್ ಮ್ಯಾಪ್

ತಮಿಳುನಾಡು ರಾಜ್ಯದಿಂದ ಗುಂಡ್ಲುಪೇಟೆ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶ ಮಾಡಲಿದೆ. ಗುಂಡ್ಲುಪೇಟೆ, ನಂಜನಗೂಡು, ಮೈಸೂರು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ಸಂಚಾರ ಮಾಡಲಿದೆ. ನಂತರ ಮೇಲುಕೋಟೆಯಿಂದ ರಂಗನಾಥಪುರದ ಮೂಲಕ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಲಾಗುತ್ತದೆ.

ರಂಗನಾಥಪುರದಿಂದ ತುಮಕೂರಿನ ತುರುವೇಕೆರೆ ನಂತರ ಇಲ್ಲಿಂದ ಚಿಕ್ಕನಾಯಕನಹಳ್ಳಿ ಹುಳಿಯಾರ್ ಮೂಲಕ ಚಿತ್ರದುರ್ಗ ಹಿರಿಯೂರುಗೆ ಪಾದಯಾತ್ರೆ ತೆರಳಲಿದೆ. ಹಿರಿಯೂರಿನಿಂದ ಚಳ್ಳಕೇರೆಗೆ, ಚಳ್ಳಕೆರೆಯಿಂದ ರಾಯಪುರಕ್ಕೆ ಯಾತ್ರೆ ತೆರಳಲಿದ್ದು, ಅಲ್ಲಿಂದ ಆಂಧ್ರ ಪ್ರವೇಶವನ್ನು ಪಾದಯಾತ್ರೆ ಪ್ರವೇಶಿಸಲಿದೆ.

ಎರಡನೇ ಹಂತದ ರೂಟ್ ಮ್ಯಾಪ್

ಹೀರೆಹಾಳ್‌ ನಿಂದ ಓಬಾಳಪುರ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡಲಾಗುತ್ತದೆ. ಹಲಕುಂಡಿ, ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಸಂಚಾರ ಆರಂಭಗೊಂಡು ಅಲ್ಲಿಂದ ಅಲುರ್ ಮೂಲಕ ಆಂಧ್ರ ಪ್ರವೇಶ ಮಾಡಲಿದೆ.

ಮೂರನೇ ಹಂತದ ರೂಟ್ ಮ್ಯಾಪ್

ಮಾಧವರಂ ಮೂಲಕ‌ ರಾಯಚೂರಿನ ಗಿಲ್ಲೆಸೂಗೂರು ಮೂಲಕ ಪಾದಯಾತ್ರೆ ತಂಡ ಪ್ರವೇಶ ಮಾಡಲಿದೆ. ಗಿಲ್ಲೆಸೂಗೂರು ನಿಂದ ಯರೇಗಾರಕ್ಕೆ ಪಾದಯಾತ್ರೆ ಸಂಚರಿಸಲಿದೆ. ಯರೇಗಾರ ಮೂಲಕ ರಾಯಚೂರು, ರಾಯಚೂರಿನಿಂದ ದೇವಸೂಗೂರುಗೆ ಭಾರತ್ ಜೋಡೋ ಯಾತ್ರೆ ತೆರಳಲಿದೆ. ದೇವಸೂಗೂರಿನಿಂದ ವಿಕಾರಬಾದ್ ಮೂಲಕ ತೆಲಂಗಾಣಕ್ಕೆ ಪ್ರವೇಶ ಮಾಡಲಿದೆ.

Published On - 7:11 pm, Thu, 29 September 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ