AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಊರಿನ ಮಕ್ಕಳು ಶಾಲೆಗೆ 14 ಕಿಮೀ ನಡೆದೇ ಹೋಗಬೇಕು! ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ವಿದ್ಯಾರ್ಥಿಗಳುಪ್ರತಿನಿತ್ಯ ಶಾಲೆಗೆ 14 ಕಿ.ಮೀ ನಡೆದೇ ಹೋಗಬೇಕಿದ್ದು, ರಸ್ತೆಯಲ್ಲಿ ಕಾಡಾನೆ, ಚಿರತೆ, ಹುಲಿಗಳ ಕಾಟದಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಈ ಕುರಿತು ವಿದ್ಯರ್ಥಿಗಳು ರಸ್ತೆ, ವಾಹನ ಸೌಲಭ್ಯದ ಕೊರತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕರಿಗೆ ಪತ್ರ ಬರೆದು ಸುರಕ್ಷತೆ ಮತ್ತು ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಈ ಊರಿನ ಮಕ್ಕಳು ಶಾಲೆಗೆ 14 ಕಿಮೀ ನಡೆದೇ ಹೋಗಬೇಕು! ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು
ಚಾಮರಾಜನಗರ: ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Dec 10, 2025 | 8:07 AM

Share

ಚಾಮರಾಜನಗರ, ಡಿಸೆಂಬರ್ 06: ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ,ಚಿರತೆ, ಹುಲಿಗಳ ಕಾಟ ಹೆಚ್ಚಾಗಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಹೀಗಿರುವಾಗ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ರಸ್ತೆಯಲ್ಲಿ ಓಡಾಡುವುದಕ್ಕೂ ಭಯ ಶುರುವಾಗಿದೆ. ಈ ಕಾರಣ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಿಎಂ ಸಿದ್ದರಾಮಯ್ಯ ( Siddaramaiah) ಮತ್ತು ಶಾಸಕ ಮಂಜುನಾಥಗೆ ಪತ್ರ ಬರೆದು ಸುರಕ್ಷತೆ ಒದಗಿಸುವಂತೆ ವಿನಂತಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಪತ್ರದಲ್ಲೇನಿದೆ?

ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಮ್ಮ ದಯನೀಯ ಸ್ಥಿತಿ ಹೇಳಿಕೊಂಡಿರುವ ವಿದ್ಯಾರ್ಥಿಗಳು, ನಮ್ಮ ಗ್ರಾಮದಲ್ಲಿ ರಸ್ತೆ ವ್ಯವಸ್ಥೆ ಸರಿಯಿಲ್ಲ. ಕಾಡಾನೆ, ಚಿರತೆ ಮತ್ತು ಹುಲಿಯಂತಹ ಪ್ರಾಣಿಗಳು ರಸ್ತೆಯಲ್ಲಿಯೇ ಸಂಚರಿಸುತ್ತಿರುತ್ತವೆ. ನಾವು ದಿನ ನಿತ್ಯ ಶಾಲಾ- ಕಾಲೇಜುಗಳಿಗೆ ಹೋಗಲು ಸುಮಾರಯ 14 ಕಿ.ಮೀ ನಡೆಯಬೇಕು. ನಮಗೆ ಶಾಲಾ ವಾಹನ ಅಥವಾ ಬಸ್ಸಿನ ವ್ಯವಸ್ಥೆಯೂ ಇಲ್ಲದ ಕಾರಣ ಕಾಲ್ನಡಿಗೆಯಲ್ಲಿಯೇ ಸಂಚರಿಸಬೇಕಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅವರ ಕಷ್ಟ ಪರಿಹರಿಸಲು ಬಸ್ ಅಥವಾ ವ್ಯಾನ್​ನ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಕೇಳಿಕೊಂಡಿದ್ದಾರೆ. ಜೀವ ಹಾನಿಯ ಅಪಾಯವಿರುವುದರಿಂದ ಆದಷ್ಟು ಬೇಗ ರಸ್ತೆ ಡಂಬೀಕರಣ ಮಾಡಿ, ಬಸ್ ಸಂಚಾರ ಒದಗಿಸುವಂತೆ ವಿನಂತಿಸಿಕೊಂಡಿದ್ದಾರೆ.

ಗಡಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಕಾಟ

ತಮಿಳುನಾಡಿನ ಗಡಿ ಪ್ರದೇಶಗಳಲ್ಲಿ 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದು ಚಾಮರಾಜನಗರದ ಜನರ ಭೀತಿ ಹೆಚ್ಚಿಸಿದೆ. ಚಿರತೆಗಳು, ಹುಲಿಗಳ ಕಾಟದಿಂದ ಪೀಡಿತರಾದ ಗ್ರಾಮಸ್ಥರು ಮನೆಯಿಂದ ಹೊರಬರುವ ಪರಿಸ್ಥಿತಿಯೂ ಎದುರಾಗಿತ್ತು. ಅಷ್ಟೇ ಅಲ್ಲದೆ ಜಿಲ್ಲೆಯಲ್ಲಿ ಮನಷ್ಯರ ಮೇಲೆ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಇದಕ್ಕೆ ಕಡಿವಾಳ ಹಾಕಲು ಮಾನವನ ಮುಖವಾಡವನ್ನು ಧರಿಸುವಂತೆ ಅರಣ್ಯ ಇಲಾಖೆ ಸೂಚಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:06 pm, Sat, 6 December 25

ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ