AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡುಹೊಲ ಗ್ರಾಮದಲ್ಲಿ ನಡೆದಿದೆ. ಸದ್ಯ ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ತಂತಿ ತುಳಿದು ರೈತರಿಬ್ಬರು ಸಾವನ್ನಪ್ಪಿದ್ದಾರೆ. 

ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Apr 14, 2025 | 9:31 PM

ಚಾಮರಾಜನಗರ, ಏಪ್ರಿಲ್​ 14: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿ (Mother) ಬಾವಿಗೆ ಹಾರಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟ ಬಳಿಯ ಕಾಡುಹೊಲ ಗ್ರಾಮದಲ್ಲಿ ನಡೆದಿದೆ. ಸುಶೀಲಾ(30), ಪುತ್ರಿ ದಿವ್ಯಾ(11), ಪುತ್ರ ಚಂದ್ರು(8) ಮೃತರು. ಮೊದಲು ಮಕ್ಕಳನ್ನ ಬಾವಿಗೆ ತಳ್ಳಿ ಬಳಿಕ ಸುಶೀಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕ ಬಾವಿಗೆ ನೀರು ತರಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ಮಾಡಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸರಣಿ ಅಪಘಾತ: ಬೈಕ್ ಸವಾರ ಸಾವು

ಸರಣಿ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ಜಾಗ್ವಾರ್ ಕಾರು, ಮಾರುತಿ ಇಕೋ ಕಾರು, ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, KA 09, JF 7962 ಜುಪಿಟರ್ ಬೈಕ್ ಸವಾರ ಶಂಕರ (35) ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಎನ್‌ಕೌಂಟರ್‌ ಕೇಸ್​: ಪಿಎಸ್​ಐ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರ, ಯಾರೀ ಲೇಡಿ ಸಿಂಗಂ?

ಇದನ್ನೂ ಓದಿ
Image
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
Image
ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯ: ಗೃಹ ಸಚಿವ ಪರಮೇಶ್ವರ್
Image
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Image
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ

ಅಪಘಾತದಲ್ಲಿ ಬೈಕ್​ನಿಂದ ಹಾರಿ ಬಿದಿದ್ದ ಶಂಕರನ ತಾಯಿ ಪಾರ್ವತಿ ಅವರು ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದಾರೆ. ಶಂಕರ ಹಾಗೂ ಪಾರ್ವತಿ ಮೈಸೂರಿನ ಕರಕುಶಲನಗರದ ನಿವಾಸಿಗಳು. ಜಾಗ್ವಾರ್ ಕಾರು, ಮಾರುತಿ ಇಕೋ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಬನ್ನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತ ಸಂಬಂಧ ಬನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವನ್ನಪ್ಪಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಮೆದೇಹಳ್ಳಿ ಬಳಿ ದುರ್ಘಟನೆ ನಡೆದಿದೆ. ರೈತ ಶ್ರೀನಿವಾಸ್(45) ಮೃತ ದುರ್ದೈವಿ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷದ ಬಗ್ಗೆ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ದುರ್ಮರಣ ಆರೋಪ ಕೇಳಿಬಂದಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ಪರೀಕ್ಷೆ ಭಯ, 5ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಅದೇ ರೀತಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸಾಬಣ್ಣ ಕೊರವರ(21) ಸಾವನ್ನಪ್ಪಿದ್ದಾರೆ. ಪೊರಕೆ ಹುಲ್ಲು ಕೊಯ್ಯಲು ಹೋಗಿದ್ದಾಗ ಅವಘಡ ಸಂಭವಿಸಿದೆ. ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ವೃದ್ಧೆ ಸಾವು

ಸಿಡಿಲು ಬಡಿದು ವೃದ್ಧೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಇರಗಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ತಹಶೀಲ್ದಾರ್ ಸುದರ್ಶನ ಯಾದವ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.