ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಪತ್ತೆಯಾದ ಚಿರತೆ ಮರಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ

ಚಾಮರಾಜನಗರದ ಕಟ್ನವಾಡಿ ಗ್ರಾಮದಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಬೈಕ್​ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಾದರಿಗಿರಯಲ್ಲಿ ನಡೆದ ಬೈಕ್​ಗಳ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ.

ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಪತ್ತೆಯಾದ ಚಿರತೆ ಮರಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ
ಚಾಮನರಾಜನಗರದ ಕಟ್ನವಾಡಿ ಗ್ರಾಮದಲ್ಲಿ ಪತ್ತೆಯಾದ ಚಿರತೆ ಮರಿಗಳು
Follow us
TV9 Web
| Updated By: Rakesh Nayak Manchi

Updated on:Dec 26, 2022 | 10:38 AM

ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆಗಳ ಭೀತಿ (Leopard scare) ಇನ್ನೂ ತಪ್ಪಿಲ್ಲ. ಚಾಮರಾಜನಗರ ತಾಲೂಕಿನ ಕಟ್ನವಾಡಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷ (Leopard Spotted)ಗೊಂಡಿದೆ. ಕಬ್ಬು ಬೆಳೆಗಾರ ಗುರು ಎಂಬವರು ತಮ್ಮ ಜಮೀನಿನಲ್ಲಿ ಬೆಳೆದ ಕಬ್ಬು ಕಟಾವು (Sugarcane harvesting) ಮಾಡುತ್ತಿದ್ದಾಗ ಚಿರತೆ ಮರಿಗಳು (Leopard Cubs) ಪತ್ತೆಯಾಗಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ ಗುರು, ಚಿರತೆ ಮರಿಗಳನ್ನು ಇಲಾಖೆಗೆ ಒಪ್ಪಿಸಿದ್ದಾರೆ. ಸದ್ಯ ತನ್ನ ಮರಿಗಳನ್ನು ಹುಡುಕಿಕೊಂಡು ತಾಯಿ ಚಿರತೆ ಎರಡು-ಮೂರು ದಿನಗಳಲ್ಲಿ ಕಬ್ಬಿನ ಗದ್ದೆಗೆ ವಾಪಸ್ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಇಲಾಖೆಯು ಕ್ಯಾಮರಾ ಟ್ರ್ಯಾಪ್ ಅಳವಡಿಸಿದೆ.

Hassan: ಬೈಕ್​ ಕಳ್ಳತನ ಮಾಡ್ತಿದ್ದ ಆರೋಪಿ ಅರೆಸ್ಟ್

ಹಾಸನ: ಬೈಕ್​ಗಳನ್ನು ಕಳ್ಳತನ ಮಾಡುತ್ತಿದ್ದ ಕತಾರ್ನಾಕ್ ಖದೀಮನನ್ನು ಕಡೂರು ಠಾಣಾ ಪೊಲೀಸರು ಬಂಧೀಸಿದ್ದಾರೆ. ಕಡೂರು ತಾಲೂಕಿನ ಶೆಟ್ಟಿಹಳ್ಳಿ ನಿವಾಸಿ ಮೋಹನ್ ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತನಿಂದ 4 ಲಕ್ಷ ಮೌಲ್ಯದ 11 ಬೈಕ್​​ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕಡೂರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿ ವಿರುದ್ಧ ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ 11 ಪ್ರಕರಣ ದಾಖಲಾಗಿತ್ತು.

ಕಳ್ಳತನ ಮಾಡಿದ ಬೈಕ್​ಗಳನ್ನು ಆರೋಪಿ ಮೋಹನ್ ಕುಮಾರ್ ಕಡಿಮೆ ಬೆಲೆಗೆ ಮಾರಾಟ ಮಾಡಿ ಗಣ ಸಂಪಾದಿಸುತ್ತಿದ್ದನು. ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಮೋಹನ್ ಕುಮಾರ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ.

Crime

ಬೈಕ್ ಕಳ್ಳನನ್ನು ಬಂಧಿಸಿದ ಹಾನಸ ಪೊಲೀಸರು

Yadgir: ಬೈಕ್​ಗಳ ನಡುವೆ ಡಿಕ್ಕೆ; ಮೂವರು ದುರ್ಮರಣ

ಯಾದಗಿರಿ: ಎರಡು ಬೈಕ್​ಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ಹುಣಸಗಿ ಪಟ್ಟಣದ ಕಕ್ಕೆರಾ ಕ್ರಾಸ್ ಬಳಿ ನಿನ್ನೆ ರಾತ್ರಿ ನಡೆದಿದೆ. ಕೋಟೆಗುಡ್ಡದ ಗ್ರಾಮದ ಬಾಲಪ್ಪ (55), ಜಟ್ಟೆಪ್ಪ (60) ಹಾಗೂ ಕೊಡೆಕಲ್ ಗ್ರಾಮದ ಪರಸಪ್ಪ (45) ಮೃತಪಟ್ಟ ಬೈಕ್ ಸವಾರರಾಗಿದ್ದಾರೆ. ಘಟನೆ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:36 am, Mon, 26 December 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ