AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಗಲಭೆಯಾಗಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರುಮತದಾನ

ಇಂಡಿಗನತ್ತ ಗ್ರಾಮದ ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರು ಮತದಾನ ನಡೆಯಲಿದೆ.ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಶುಕ್ರವಾರ ಮತದಾನದ ವೇಳೆ ಮತಗಟ್ಟೆ ಬಳಿ ಉಂಟಾದ ಗಲಭೆಯಲ್ಲಿ ಇವಿಎಂ ಧ್ವಂಸಗೊಳಿಸಲಾಗಿತ್ತು.

ಚಾಮರಾಜನಗರ: ಗಲಭೆಯಾಗಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರುಮತದಾನ
ಇಂಡಿಗನತ್ತ ಗ್ರಾಮದ ಮತಗಟ್ಟೆ 146ರಲ್ಲಿ ಶುಕ್ರವಾರ ಮತದಾನದ ವೇಳೆ ನಡೆದಿದ್ದ ಗಲಾಟೆಯಲ್ಲಿ ಮೇಜು, ಕುರ್ಚಿ, ಇವಿಎಂ ಧ್ವಂಸಗೊಂಡಿರುವುದು
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on:Apr 27, 2024 | 4:55 PM

Share

ಚಾಮರಾಜನಗರ, ಏಪ್ರಿಲ್ 27: ಲೋಕಸಭಾ ಚುನಾವಣೆಯ (Lok Sabha Elections) ಕರ್ನಾಟಕದ ಮೊದಲ ಹಂತದ ಮತದಾನದ ವೇಳೆ ಗಲಭೆಗೆ ಸಾಕ್ಷಿಯಾಗಿದ್ದ ಚಾಮರಾಜನಗರ (Chamarajanagar) ಲೋಕಸಭಾ ಕ್ಷೇತ್ರದ ಹನೂರು ತಾಲೂಕಿನ ಇಂಡಿಗನತ್ತ (Indiganatta) ಗ್ರಾಮದ ಒಂದು ಮತಗಟ್ಟೆಯಲ್ಲಿ ಮರುಮತದಾನ ನಡೆಯಲಿದೆ. ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರು ಮತದಾನ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಶುಕ್ರವಾರ ಮತದಾನದ ವೇಳೆ ಮತಗಟ್ಟೆ ಬಳಿ ಉಂಟಾದ ಗಲಭೆಯಲ್ಲಿ ಇವಿಎಂ ಧ್ವಂಸಗೊಳಿಸಲಾಗಿತ್ತು.

ಮತದಾನ ಮಾಡುವ ವಿಚಾರಕ್ಕೆ ಸಂಬಂಧಿಸಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಗಲಾಟೆಯಾಗಿತ್ತು. ಮೂಲ ಸೌಕರ್ಯ ಒದಗಿಸುವವರೆಗೆ ಮತದಾನ ಮಾಡುವುದಿಲ್ಲ ಎಂದಿದ್ದರೂ ಸಹ ಕೆಲವು ಮಂದಿ ಗ್ರಾಮಸ್ಥರನ್ನು ಅಧಿಕಾರಿಗಳು ಮನವೊಲಿಸಿ ಮತದಾನಕ್ಕೆ ಕರೆತಂದಿದ್ದರು. ಇದರಿಂದ ರೊಚ್ಚಿಗೆದ್ದ ಇನ್ನಿತರ ಗ್ರಾಮಸ್ಥರು ಮತಕೇಂದ್ರದ ಮೇಲೆ ದಾಳಿ ಮಾಡಿದ್ದರು.

ಮತದಾನದ ವೇಳೆ ನಡೆದಿದ್ದೇನು?

ಮೂಲ ಸೌಕರ್ಯವನ್ನು ಕಲ್ಪಿಸದ ವಿಚಾರವಾಗಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿದ್ದರು. ಯಾರೊಬ್ಬರೂ ಮತದಾನಕ್ಕೆ ಬಾರದೆ ಇರುವುದರಿಂದ ಶೂನ್ಯ ಮತದಾನವಾಗುವ ಆತಂಕ ಅಧಿಕಾರಿಗಳದ್ದಾಗಿತ್ತು. ಹೀಗಾಗಿ ಅಧಿಕಾರಿಗಳು ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಮುಂದಾಗಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಆಗ್ರಹಿಸಿದ್ದರು. ಈ ವೇಳೆ, ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮೇಜು, ಕುರ್ಚಿ, ಇವಿಎಂ ಧ್ವಂಸ ಮಾಡಿದ್ದರು.

ಇದನ್ನೂ ಓದಿ: ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ: ಅಷ್ಟಕ್ಕೂ ಆಗಿದ್ದೇನು? ಕಾರಣ ಬಿಚ್ಚಿಟ್ಟ ಜಿಲ್ಲಾಧಿಕಾರಿ

ನಂತರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಶಿಲ್ಪಾನಾಗ್, ಘಟನೆ ನಡೆದ ತಕ್ಷಣ ಮುಖ್ಯ ಚುನಾವಣಾಧಿಕಾರಿಗೆ ಮಾಹಿತಿ ನೀಡಿದ್ದೇವೆ. ಎಫ್​ಐಆರ್ ಕಾಪಿ ಸಮೇತ ಈಗಾಗಲೇ ರಿಪೋರ್ಟ್ ಕಳುಹಿಸಲಾಗಿದೆ. ಇಂಡಿಗನತ್ತ ಗ್ರಾಮದಲ್ಲಿ ಬಹುಶಃ ಮರು ಮತದಾನ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Sat, 27 April 24

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ