ಆಧಾರ್, ರೇಷನ್ ಕಾರ್ಡ್ ಇಲ್ಲದೆ ಪರದಾಟ: ಮೂಲಭೂತ ಸೌಕರ್ಯಗಳಿಲ್ಲದೆ ವಂಚಿತರಾದ ಹಾಡಿ ಸಮುದಾಯ

Chamarajanagar: ಮೂಲಭೂತ ಸೌಕರ್ಯಗಳು ಸಿಗದೆ ಚಾಮರಾಜನಗರದ ಕಾಡಂಚಿನ ಜನರು ಪರದಾಟುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಧಾರ್, ರೇಷನ್ ಕಾರ್ಡ್, ಓಟರ್ ಐಡಿ ಇಲ್ಲದೇ ಹಾಡಿ ಜನರು ಮೂಲ ಸೌಕರ್ಯಗಳು ಸಿಗದೆ ವಂಚಿತರಾಗಿದ್ದಾರೆ. ದಾಖಲೆಗಳನ್ನು ಒದಗಿಸಿಕೊಡುವಂತೆ ಸರ್ಕಾರಕ್ಕೆ ಹಾಡಿ ಜನರು ಮನವಿ ಮಾಡಿದ್ದಾರೆ. 

ಆಧಾರ್, ರೇಷನ್ ಕಾರ್ಡ್ ಇಲ್ಲದೆ ಪರದಾಟ: ಮೂಲಭೂತ ಸೌಕರ್ಯಗಳಿಲ್ಲದೆ ವಂಚಿತರಾದ ಹಾಡಿ ಸಮುದಾಯ
ಹಾಡಿ ಜನರು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Dec 29, 2023 | 4:47 PM

ಚಾಮರಾಜನಗರ, ಡಿಸೆಂಬರ್​ 29: ಸ್ವಾತಂತ್ರ ಬಂದು 75 ವರ್ಷ ಕಳೆದರು ಇನ್ನು ಕಾಡಂಚಿನ ಜನರಿಗೆ ಮೂಲಭೂತ ಸೌಕರ್ಯ (basic amenities) ಸಿಕ್ಕಿಲ್ಲ. ಆಧಾರ್, ರೇಷನ್ ಕಾರ್ಡ್, ಓಟರ್ ಐಡಿ ಇಲ್ಲದೇ ಹಾಡಿ ಜನರು ಪರದಾಡುವಂತಾಗಿದೆ. ದಾಖಲೆಗಳಿಲ್ಲದೆ ಸರ್ಕಾರಿ ಸವಲತ್ತಿನಿಂದ ವಂಚಿತರಾಗಿದ್ದಾರೆ. ದಾಖಲೆಗಳನ್ನು ಒದಗಿಸಿಕೊಡುವಂತೆ ಸರ್ಕಾರಕ್ಕೆ ಹಾಡಿ ಜನರು ಮನವಿ ಮಾಡಿದ್ದಾರೆ.

ಸೋಲಿಗರು, ಜೇನು ಕುರುಬರು, ಬೆಟ್ಟ ಕುರುಬರು ಹಾಗೂ ಇತರೆ ಸೌಲಭ್ಯದಿಂದ ವಂಚಿತರಾಗಿದ್ದಾರೆ. 5 ಸಾವಿರಕ್ಕೂ ಹೆಚ್ಚು ಜನರು ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪಡೆದಿಲ್ಲವೆಂಬುದು ಬಹಿರಂಗವಾಗಿದೆ. ಸಾವಿರಕ್ಕೂ ಹೆಚ್ಚು ಕುಟುಂಬ ರೇಷನ್ ಕಾರ್ಡ್​ನಿಂದ ವಂಚಿತವಾಗಿವೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕನ್ನಡ ಶಾಲೆಗಳಿಗಿಲ್ಲ ಶಿಕ್ಷಕರ ನೇಮಕಾತಿ, ಮೂಲಭೂತ ಸೌಕರ್ಯ! ನಡೆಯುತ್ತಿದೆ ವ್ಯವಸ್ಥಿತ ಸಂಚು

ಆರೋಗ್ಯ, ಅನ್ನಭಾಗ್ಯ, ಸರ್ಕಾರದ ಗ್ಯಾರಂಟಿ ಯೋಜನೆಗೂ ಕೂಡ ಅರ್ಹತೆಯಿಲ್ಲ. ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸದ್ಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 158 ಹಾಡಿಗಳಲ್ಲಿ ಈಗಾಗಲೇ 138 ಹಾಡಿಯಲ್ಲಿ ಸಮೀಕ್ಷೆ ಮಾಡಲಾಗಿದೆ. ಶಿಬಿರ ಆಯೋಜಿಸಿ ರೇಷನ್, ಆಧಾರ್ ಕಾರ್ಡ್ ಮಾಡಿಕೊಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿನೂತ ಪ್ರತಿಭಟನೆ

ಚಾಮರಾಜನಗರ ತಾಲೂಕಿನ ಆಲೂರು ಗ್ರಾಮಕ್ಕೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಇತ್ತೀಚೆಗೆ ಸ್ಥಳೀಯ ನಿವಾಸಿಗಳು ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿನೂತ ಪ್ರತಿಭಟನೆ ಮಾಡಿದ್ದರು. ಆಲೂರು ಗ್ರಾಮದ ಹಲವು ಬಡಾವಣೆಗಳಲ್ಲಿ ರಸ್ತೆಗಳಿಲ್ಲದೆ ಮಳೆ ಬಂದ ವೇಳೆ ತಿರುಗಾಡಲು ಸಾಧ್ಯವಾಗುತ್ತಿಲ್ಲ. ರಸ್ತೆ ನಿರ್ಮಾಣ ಮಾಡುವಂತೆ ಹಲವು ಬಾರಿ ಜನಪ್ರತಿನಿಧಿಗಳನ್ನ ಕೇಳಿದರೆ ಯಾರೊಬ್ಬರು ಸ್ಪಂಧಿಸುತ್ತಿಲ್ಲ. ಹೀಗಾಗಿ ಗ್ರಾಮದ ರಸ್ತೆಗಳು ಕೆಸಲು ಗದ್ದೆಯಾಗಿವೆ ಎಂದು ಭತ್ತದ ಪೈರನ್ನ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಟಿವಿ9 ವರದಿಯ ಬಿಗ್​ ಇಂಪ್ಯಾಕ್ಟ್ : ಅರಣ್ಯ ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಎಲ್ಲಾ 12 ಶಾಲೆಗಳು ಓಪನ್ ಮಾಡುವಂತೆ ಸರ್ಕಾರದ ಸೂಚನೆ

ಕಳೆದ ನಾಲ್ಕು ವರ್ಷಗಳ ಹಿಂದೆ ಗ್ರಾಮದಲ್ಲಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಿದ್ದರೂ ಇಲ್ಲಿಯವರೆಗೂ ನೀರು ಕೊಟ್ಟಿಲ್ಲ. ವರ್ಷ ಕಳೆದರೂ ಗ್ರಾಮದ ಚರಂಡಿ ಸ್ವಚ್ಚಗೊಳಿಸುವ ಕಾರ್ಯ ಆಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದರು. ತಕ್ಷಣ ಅಧಿಕಾರಿಗಲು ರಸ್ತೆ ನಿರ್ಮಾಣ ಮಾಡಬೇಕು, ಚರಂಡಿಯಲ್ಲಿ ಹೂಳೆತ್ತಬೇಕು ಮತ್ತು ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಗ್ರಾಮಸ್ಥರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ