ಚಾಮರಾಜನಗರ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಹೋದ ಪತ್ನಿಗೆ ‘ಸಾಮಾಜಿಕ ಬಹಿಷ್ಕಾರ’!

ಚಾಮರಾಜನಗರದ ಹೂಗ್ಯಂ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಅನಾರೋಗ್ಯದ ತಾಯಿಯನ್ನು ನೋಡಲು ತವರಿಗೆ ಹೋದ ಕೆಂಚಮ್ಮ ಎಂಬ ಮಹಿಳೆಗೆ ಗ್ರಾಮದ ಯಜಮಾನರು ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಬಹಿಷ್ಕಾರ ಹಿಂತೆಗೆದುಕೊಳ್ಳಲು ಲಕ್ಷಾಂತರ ರೂಪಾಯಿ ದಂಡ ವಿಧಿಸಿದ್ದು, ಇದರ ಕೆಂಚಮ್ಮ ನ್ಯಾಯಕ್ಕಾಗಿ ದೂರು ನೀಡಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಹೋದ ಪತ್ನಿಗೆ ಸಾಮಾಜಿಕ ಬಹಿಷ್ಕಾರ!
ಸಾಂದರ್ಭಿಕ ಚಿತ್ರ
Edited By:

Updated on: Apr 17, 2026 | 4:05 PM

ಚಾಮರಾಜನಗರ, ಏ.17: ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ನೋಡಲು ತವರು ಮನೆಗೆ ಹೋದ ಮಹಿಳೆಗೆ ಗ್ರಾಮದ ಯಜಮಾನರು ಸಾಮಾಜಿಕ ಬಹಿಷ್ಕಾರ ಹಾಕುವ ಮೂಲಕ ಅನಿಷ್ಠ ಪದ್ಧತಿಯನ್ನು ಮುಂದುವರಿಸಿದ್ದಾರೆ.ಇದೀಗ ಈ ಬಗ್ಗೆ ಭಾರೀ ಅಕ್ರೋಶ ವ್ಯಕ್ತವಾಗಿದೆ. ಯರಂಬಾಡಿ ಮೂಲದ ಕೆಂಚಮ್ಮ ಎಂಬುವವರು ಹೂಗ್ಯಂ ಗ್ರಾಮದ ರಾಮು ಎಂಬುವವರನ್ನು ವಿವಾಹವಾಗಿದ್ದರು. ಇತ್ತೀಚೆಗೆ ಕೆಂಚಮ್ಮ ಅವರ ತಾಯಿಗೆ ಆರೋಗ್ಯ ಕೈಕೊಟ್ಟ ಕಾರಣ, ಅವರನ್ನು ಉಪಚರಿಸಲು ಕೆಂಚಮ್ಮ ತವರು ಮನೆಗೆ ತೆರಳಿದ್ದರು.

ತವರು ಮನೆಯಲ್ಲಿ ಒಂದು ತಿಂಗಳಿಗೂ ಅಧಿಕ ಕಾಲ ಉಳಿದುಕೊಂಡಿದ್ದಕ್ಕೆ ಗ್ರಾಮದ ಯಜಮಾನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಂಚಮ್ಮ ವಾಪಸ್ ಬರುವುದು ತಡವಾಯಿತು ಎಂಬ ಕ್ಷುಲ್ಲಕ ಕಾರಣ ನೀಡಿ ಅವರಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಲಾಗಿದೆ. ಬಹಿಷ್ಕಾರ ಹಿಂತೆಗೆದುಕೊಳ್ಳಬೇಕಾದರೆ ಲಕ್ಷಾಂತರ ರೂಪಾಯಿ ದಂಡ ಪಾವತಿಸಬೇಕು ಎಂದು ಗ್ರಾಮದ ಮುಖಂಡರು ಸೂಚಿಸಿದ್ದಾರೆ ಎನ್ನಲಾಗಿದೆ. ಕೇವಲ ಕೆಂಚಮ್ಮ ಮಾತ್ರವಲ್ಲದೆ, ಗ್ರಾಮದ ಇನ್ನೂ ಮೂರ್ನಾಲ್ಕು ಮಂದಿಗೆ ಇದೇ ರೀತಿ ಬಹಿಷ್ಕಾರ ಹಾಕಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ: ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್

ಗ್ರಾಮದ ಯಜಮಾನರ ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿರುವ ಕೆಂಚಮ್ಮ, ನ್ಯಾಯಕ್ಕಾಗಿ ರಾಮಾಪುರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅಲ್ಲದೆ, ಅನಿಷ್ಠ ಪದ್ಧತಿಯ ವಿರುದ್ಧ ಕಾನೂನು ಹೋರಾಟ ನಡೆಸಲು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Loading...
Unable to load recommendations.
Follow Us