AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಗಾಗಿ ತಂದೆ-ತಾಯಿ ಪಡುತ್ತಿರುವ ಕಷ್ಟ ನೋಡಲಾಗದೇ ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ

ಸಿಎಂ ಸರ್ ನಮ್ಮ ಭಾಗದಲ್ಲಿ ಕುಡಿಯುವ ನೀರಿಗೂ ತುಂಬಾ ಸಮಸ್ಯೆಯಿದೆ.ತಂದೆ ತಾಯಿಗಳು ಕೃಷಿಯಲ್ಲಿ ಅನುಭವಿಸ್ತಿರುವ ನೋವನ್ನು ತಡೆಯಲಾಗುತ್ತಿಲ್ಲ.ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗಬೇಕಿದೆ.ಈ ಭಾಗಕ್ಕೆ ನದಿ ಮೂಲಗಳಿಂದ ಶಾಶ್ವತ ನೀರು ಒದಗಿಸಿ ಎಂದು ಮಕ್ಕಳು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.  ಈ ಬಗ್ಗೆ ನಿಮ್ಮ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆಯೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದಾರೆ.

ನೀರಿಗಾಗಿ ತಂದೆ-ತಾಯಿ ಪಡುತ್ತಿರುವ ಕಷ್ಟ ನೋಡಲಾಗದೇ ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ
Student Letter To Cm
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 08, 2025 | 10:35 PM

Share

ಚಾಮರಾಜನಗರ, (ಜುಲೈ 08): ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ 5ನೇ ತರಗತಿ ಮಗು, ತಮ್ಮ ತಂದೆ-ತಾಯಿಯಂದಿರು ಕೃಷಿಯಲ್ಲಿ ಅನುಭವಿಸುತ್ತಿರುವ ಕಷ್ಟವನ್ನು ಸಹಿಸಲಾಗದೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (siddaramaiah )ಪತ್ರ ಬರೆದು ಗಮನ ಸೆಳೆದಿದ್ದಾರೆ. ತಂದೆ-ತಾಯಿ ನೀರಿಲ್ಲದೇ ದೂರ ಹೋಗಿ ಕೆಲಸ ಮಾಡುತ್ತಾರೆ. ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರು (drinking water) ಸಿಗುತ್ತಿಲ್ಲ ಎಂದು ಕೆಂಪಯ್ಯನಹಟ್ಟಿ ಗ್ರಾಮದ ವಿದ್ಯಾರ್ಥಿನಿ ವರ್ಣಿಕಾ ಪತ್ರ ಬರೆದು ತನ್ನ ಪೋಷಕರ ಕಷ್ಟದ ಬಗ್ಗೆ ತಿಳಿಸಿದ್ದಾರೆ. ಇದನ್ನು ನಿಮ್ಮ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆಯೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದಾರೆ.

ಸಿಎಂಗೆ ಬರೆದ ಪತ್ರದಲ್ಲೇನಿದೆ?

“ಇತ್ತೀಚಿನ ದಿನಗಳಲ್ಲಿ ನಮ್ಮ ಗ್ರಾಮದಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಕುಸಿದಿದೆ.ಈ ಕಾರಣದಿಂದ ಗ್ರಾಮದಲ್ಲಿ ಕೃಷಿ ಚಟುವಟಿಕೆಗಳು ನಿಂತಂತಾಗಿದ್ದು, ಜನರು ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ಇತರೆ ಕಡೆಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ಸ್ಥಿತಿಯನ್ನು ನೋಡಿದಾಗ ನಮ್ಮ ಮನಸ್ಸು ತೀವ್ರವಾಗಿ ದುಃಖಗೊಂಡಿದೆ,” ಎಂದು ತಿಳಿಸಿದ್ದಾರೆ. ಅಲ್ಲದೇ ಹನೂರು ತಾಲೂಕಿನ ರಾಮಾಪುರ ಹೋಬಳಿಯ ಎಲ್ಲ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು ಕೈಗೊಳ್ಳಬೇಕು. ಈ ಮೂಲಕ ಭೂಮಿಯಲ್ಲಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಳೆಗಾಲದಲ್ಲೂ ನೀರಿಗೆ ಹಾಹಾಕಾರ: ನದಿ ತುಂಬಿ ಹರಿಯುತ್ತಿದ್ರೂ ಯಾದಗಿರಿ ಜನಕ್ಕಿಲ್ಲ ಕುಡಿಯುವ ನೀರು

ಇನ್ನೂ ಹನೂರು ಭಾಗದಲ್ಲಿ ನೀರಿನ ಸಮಸ್ಯೆ ಬಗ್ಗೆ ಶಾಸಕ ಮಂಜುನಾಥ್ ಕೂಡ ಒಪ್ಪಿಕೊಂಡಿದ್ದಾರೆ. ಶೇ 40 ರಷ್ಟು ಮಳೆ ಕೊರತೆಯಾಗಿದೆ.ಈಗಾಗಲೇ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದು, ಶಾಶ್ವತ ನೀರಾವರಿಗಾಗಿ ಯೋಜನೆ ರೂಪಿಸಬೇಕಿದೆ. ನಮ್ಮ ಭಾಗದಲ್ಲಿ ಮುಂಗಾರು ಮಳೆಯಾಗುವುದಿಲ್ಲ,ಹಿಂಗಾರು ವೇಳೆ ಮಳೆ ಬೀಳುತ್ತದೆ.ಸದ್ಯ ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕೂಡ ಇಳಿಕೆಯಾಗಿದೆ ಎಂದು ಹೇಳಿದ್ದಾರೆ.

ಗ್ರಾಮಕ್ಕೆ ಅಧಿಕಾರಿಗಳು ದೌಡು

ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಿಇಒ ಮೋನಾರೋತ್ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಭೇಟಿ ನೀಡಿದ್ದು, ಸಮಸ್ಯೆ ಬಗೆಹರಿಸಲು ಸಿಇಒ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದದಾರೆ. ಇನ್ನು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸಿದ ಸಿಇಒ ಮೋನಾರೋತ್, ಕುಡಿಯುವ ನೀರು ಪೂರೈಸಲು ಪ್ರತ್ಯೇಕ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಜೊತೆಗೆ ನದಿಯಿಂದ ನೀರು ತುಂಬಿಸುವ ಬಗ್ಗೆ ಸರ್ಕಾರದ ಜೊತೆಗೆ ಚರ್ಚಿಸುವುದಾಗಿ ತಿಳಿಸಿದರು.

ಒಟ್ಟಿನಲ್ಲಿ ಪುಟ್ಟ ಮಕ್ಕಳ ಚಿಂತನೆ ಜನರಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಸಿಎಂ ಸಿದ್ದರಾಮಯ್ಯ ಮಕ್ಕಳ ಮನವಿ ಸ್ಪಂದಿಸ್ತಾರಾ? ಈ ಭಾಗಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಸಿಗುತ್ತಾ ಎನ್ನುವುದನ್ನು ಕಾದುನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More