AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನೂರು ಶೂಟೌಟ್ ಕೇಸ್: ಕುಟುಂಬಸ್ಥರನ್ನ ಮನವೊಲಿಸುವಲ್ಲಿ ಹನೂರು ಶಾಸಕ ಸಕ್ಸಸ್, ಕೊಟ್ಟ ಭರವಸೆ ಏನು?

ಚಾಮರಾಜನಗರದ ಹಾನೂರು ತಾಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಮಂಗಲ ಬೀಟ್‌ನಲ್ಲಿ ಶನಿವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ತೊಮಿಯರ್ ಪಾಳ್ಯದ ಮೂವರು ಮೃತಪಟ್ಟಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೃತ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಡಿಸಿ, ಪೊಲೀಸ್ ಅಧಿಕಾರಿಗಳ ಮನವಿಗೂ ಕ್ಯಾರೇ ಎನ್ನದೇ ಧರಣೆ ನಡೆಸಿದ್ದು, ಕೊನೆ ಹಾನೂರು ಶಾಸಕ ಕೊಟ್ಟ ಭರವಸೆಯಿಂದಾಗಿ ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.

ಹಾನೂರು ಶೂಟೌಟ್ ಕೇಸ್: ಕುಟುಂಬಸ್ಥರನ್ನ ಮನವೊಲಿಸುವಲ್ಲಿ ಹನೂರು ಶಾಸಕ ಸಕ್ಸಸ್, ಕೊಟ್ಟ ಭರವಸೆ ಏನು?
Chamarajanagara Shootout Case
ರಾಮ್​, ಮೈಸೂರು
| Edited By: |

Updated on: Aug 16, 2026 | 3:31 PM

Share

ಚಾಮರಾಜನಗರ, (ಆಗಸ್ಟ್ 16): ಹಾನೂರು ತಾಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಮಂಗಲ ಬೀಟ್‌ನಲ್ಲಿ ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿನ ದಾಳಿಯಲ್ಲಿ (Chamarajanagara Shootout Case) ತೊಮಿಯರ್ ಪಾಳ್ಯದ ಮೂವರು ಮೃತಪಟ್ಟಿದ್ದು, ಇದನ್ನ ಖಂಡಿಸಿ ಮರತ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ತೀವ್ರ ಸ್ವರೂಪ ಪ್ರತಿಭಟನೆ ನಡೆಸಿದ್ದಾರೆ. ಯಾವ ಅಧಿಕಾರಿಗಳ ಮನವಿಗೂ ಬಗ್ಗದವರು ಕೊನೆಗೆ ಹಾನೂರು ಶಾಸಕ ಮಂಜುನಾಥ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು… ಮೃತ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಜೊತೆಗೆ ಉದ್ಯೋಗದ ಭರವಸೆ ನೀಡಿದ್ದಾರೆ. ಹಾಗೇ ಉನ್ನತ ಮಟ್ಟದ ತನಿಖೆ ನಡೆಸುವ ಆಶ್ವಾಸನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.

ನಿಮ್ಮ ಬೇಡಿಕೆ ಈಡೇರಿಸುತ್ತೇವೆ. 2 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದೀರಿ. ಈಗ ಸದ್ಯಕ್ಕೆ 15 ಲಕ್ಷ ರೂ. ಕೊಡಿಸುತ್ತೇನೆ. ಸರ್ಕಾರಿ ಉದ್ಯೋಗದ ಕುರಿತು ಕೂಡ ಸರ್ಕಾರದ ಬಳಿ ಮಾತನಾಡುತ್ತೇನೆ. ನಿಮ್ಮ ಜೊತೆ ನಾನು ಇರುತ್ತೇನೆ. ಪೋಸ್ಟ್ ಮಾರ್ಟಂ ಮುಗಿಸಿ ಮೃತದೇಹ ತನ್ನಿ ಎಂದು ಮನವಿ ಮಾಡಿದರು. ಶಾಸಕರ ಈ ಮನವಿಗೆ ಕುಟುಂಬಸ್ಥರು ಒಪ್ಪಿಕೊಂಡು ಪ್ರತಿಭಟನೆ ಕೈಬಿಟ್ಟು ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಒಪ್ಪಿದ್ದಾರೆ. ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳ ಮಾತಿಗೂ ಜಗ್ಗದೇ ಧರಣೆ ನಡೆಸುತ್ತಿದ್ದವರನ್ಉ ಶಾಸಕನ ಮಂಜುನಾಥ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಕೇಸ್: ಮ್ಯಾಜಿಸ್ಟ್ರೇಟ್ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ 

ಚಾಮರಾಜನಗರ ಜಿಲ್ಲೆಯ ಹನೂರು ಬಳಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದ್ದು, ಕ್ಷೇತ್ರದಲ್ಲಿ ಉದ್ವಿಗ್ನತೆ ಮತ್ತು ಪ್ರತಿಭಟನೆಗಳು ಮುಂದುವರಿದಿದ್ದರಿಂದ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ ಹನೂರಲ್ಲಿಯೇ ಮೊಕ್ಕಾಂ ಹೂಡಿದ್ದು, ಇತ್ತ ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ 3 ಮೃತದೇಹದ ಪಂಚನಾಮೆಗೆ ಸಿದ್ಧತೆ ನಡೆದಿದೆ. ಇನ್ನು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ವಿಪಕ್ಷಗಳ ನಾಯಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ