ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಸ್ವಚ್ಚ : ಚಾಮರಾಜನಗರ ಗ್ರಾಮಾಂತರ ​ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲು

| Updated By: ವಿವೇಕ ಬಿರಾದಾರ

Updated on: Nov 21, 2022 | 12:46 AM

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮಹದೇವಪ್ಪ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ​ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಸ್ವಚ್ಚ : ಚಾಮರಾಜನಗರ ಗ್ರಾಮಾಂತರ ​ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲು
ಚಾಮರಾಜನಗರ ಗ್ರಾಮಾಂತರ ​ಠಾಣೆ
Follow us on

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮಹದೇವಪ್ಪ ಎಂಬುವರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ​ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ದಲಿತ ಗಿರಿಯಪ್ಪ ಎಂಬುವರ ದೂರಿನ ಆಧಾರದ ಮೇರೆಗೆ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ್ದರು

ನ.19 ರಂದು ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದ ಮದುವೆಗೆ ದಲಿತ ಮಹಿಳೆಯೊಬ್ಬರು ಬಂದಿದ್ದರು. ಈ ವೇಳೆ ದಲಿತ ಮಹಿಳೆ ಗ್ರಾಮದ ಟ್ಯಾಂಕ್​​ವೊಂದರ ನಲ್ಲಿಯಲ್ಲಿ ನೀರು ಕುಡಿದಿದ್ದರು. ಆಗ ಓರ್ವ ಗ್ರಾಮಸ್ಥ ಇದು ಬ್ರಾಹ್ಮಣರ ಬೀದಿ‌ ಇಲ್ಲಿ ನೀರು ಕುಡಿಯಬಾರದು ಎಂದಿದ್ದನು. ಬಳಿಕ ಗೋಮೂತ್ರ ಸಿಂಪಡಿಸಿ ಟ್ಯಾಂಕ್​​ ಸ್ವಚ್ಛಗೊಳಿಸಲಾಗಿತ್ತು. ಈ ಬಗ್ಗೆ ತಹಶೀಲ್ದಾರ್ ಬಸವರಾಜುಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಹೀಗಾಗಿ ನ.20 ರಂದು ಹೆಗ್ಗೊಠಾರ ಗ್ರಾಮಕ್ಕೆ ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ, ತಹಶೀಲ್ದಾರ್ ಬಸವರಾಜು​ ಭೇಟಿ ನೀಡಿ ಗ್ರಾಮದ ಎಲ್ಲಾ ಟ್ಯಾಂಕ್​​ನ ನಲ್ಲಿಯಿಂದ ದಲಿತ ಯುವಕರಿಗೆ ನೀರು ಕುಡಿಸಿದ್ದರು.

ಬಳಿಕ ತಹಶೀಲ್ದಾರ್ ಬಸವರಾಜು ಎಲ್ಲಾ ಸಮುದಾಯದ ಮುಖಂಡರ ಸಭೆ ನಡೆಸಿದ್ದಾರೆ. ಟ್ಯಾಂಕ್​​ ಮೇಲೆ ಇದು ಸಾರ್ವಜನಿಕರ ಉಪಯೋಗಕ್ಕಾಗಿ. ಎಲ್ಲಾ ವರ್ಗದವರು ಕೂಡ ಕುಡಿಯಲು ನೀರನ್ನು ಬಳಸಬಹುದೆಂದು ಬರೆಸಿದ್ದಾರೆ. ಇಂತಹ ಘಟನೆ ಮರುಕಳಿಸದಂತೆ ಗ್ರಾಮಸ್ಥರಿಗೆ ತಹಶೀಲ್ದಾರ್ ಎಚ್ಚರಿಕೆ ನೀಡಿದ್ದಾರೆ.