ಹೊಸ ವರ್ಷದ ವೇಳೆ ರೂಲ್ಸ್ ಬ್ರೇಕ್ ಮಾಡಿದ್ರೆ ಬೀಳುತ್ತೆ ಕೇಸ್ -ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ವಾರ್ನಿಂಗ್

ಹೊಸ ವರ್ಷದ ಸೆಲೆಬ್ರೇಷನ್ ಮಾಡುವ ವೇಳೆ ರೂಲ್ಸ್ ಬ್ರೇಕ್ ಮಾಡಿದರೆ ಕೇಸ್ ಹಾಕುವುದಾಗಿ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕೇರಳ, ತಮಿಳುನಾಡು ಗಡಿಯಲ್ಲಿ ಪೊಲೀಸರ ಪಿಕೆಟಿಂಗ್ ಪಾಯಿಂಟ್ ಹಾಕಲಾಗಿದೆ.

ಹೊಸ ವರ್ಷದ ವೇಳೆ ರೂಲ್ಸ್ ಬ್ರೇಕ್ ಮಾಡಿದ್ರೆ ಬೀಳುತ್ತೆ ಕೇಸ್ -ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ವಾರ್ನಿಂಗ್
ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು
Follow us
TV9 Web
| Updated By: ಆಯೇಷಾ ಬಾನು

Updated on: Dec 31, 2023 | 12:10 PM

ಚಾಮರಾಜನಗರ, ಡಿ.31: ಡಿ.31ರ ರಾತ್ರಿ ಹೊಸವರ್ಷದ ಸಂಭ್ರಮಾಚರಣೆಗೆ (New Year) ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. ಇನ್ನು ಹೊಸ ವರ್ಷದ ಸೆಲೆಬ್ರೇಷನ್ ಮಾಡುವ ವೇಳೆ ರೂಲ್ಸ್ ಬ್ರೇಕ್ ಮಾಡಿದರೆ ಕೇಸ್ ಹಾಕುವುದಾಗಿ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು (Padmini Sahu) ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕೇರಳ, ತಮಿಳುನಾಡು ಗಡಿಯಲ್ಲಿ ಪೊಲೀಸರ ಪಿಕೆಟಿಂಗ್ ಪಾಯಿಂಟ್ ಹಾಕಲಾಗಿದೆ. ಇಂದು ಚೆಕ್ ಪೋಸ್ಟ್​ಗಳಲ್ಲಿ ರಾತ್ರಿ ಪೂರ ಪೊಲೀಸರು ಗಸ್ತು ತಿರುಗಲಿದ್ದಾರೆ. ರೂಲ್ಸ್ ಬ್ರೇಕ್ ಮಾಡಿದ್ರೆ ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಾರ್ನಿಂಗ್ ಕೊಟ್ಟಿದ್ದಾರೆ.

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಕೊರೊನಾ ಹಾವಳಿ ಕೂಡ ಹೆಚ್ಚಾಗಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ರೆಸಾರ್ಟ್​ಗೆ ಬರುವವರು, ಹೋಗುವವರ ಮೇಲೆ ಖಾಕಿ ಪಡೆ ನಿಗಾ ಇಟ್ಟಿದೆ. ಅತಿ ಹೆಚ್ಚು ಪ್ರವಾಸಿಗರು ಕೇರಳದಿಂದ ರಾಜ್ಯಕ್ಕೆ ಬರಲಿದ್ದಾರೆ. ಹೀಗಾಗಿ ರೆಸಾರ್ಟ್​ಗಳಿಗೆ ಬರುವವರ ಸಂಪೂರ್ಣ ಮಾಹಿತಿ ನೀಡಲು ಹಾಗೂ ಸಮಯದ ಅನುಸಾರ ಹೊಸ ವರ್ಷಾಚರಣೆಗೆ ಎಸ್​ಪಿ ಸೂಚನೆ ನೀಡಿದ್ದಾರೆ. ಗುಂಡ್ಲುಪೇಟೆ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ರಾಜ್ಯಕ್ಕೆ ಕೇರಳಿಗರು ಎಂಟ್ರಿ ಕೊಡುತ್ತಾರೆ. ಕೇರಳದಲ್ಲಿ ಕೋವಿಡ್ ಹೆಚ್ಚಾದ ಹಿನ್ನಲೆ ಪೊಲೀಸರ ಜೊತೆ ಆರೋಗ್ಯ ಇಲಾಖಾ ಸಿಬ್ಬಂದಿ ಹಾಗೂ ಅರಣ್ಯ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆ: ಮಧ್ಯರಾತ್ರಿ 2 ಗಂಟೆವರೆಗೂ ಓಡಲಿವೆ ಬಿಎಂಟಿಸಿ ಬಸ್‌ಗಳು

ರೆಸಾರ್ಟ್ ಮಾಲೀಕರಿಗೆ ಕೇವಲ ಒಳಾಂಗಣ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ನ್ಯೂ ಇಯರ್ ಸೆಲೆಬ್ರೇಷನ್ ಮಾಡಲು ಸೂಚನೆ ನೀಡಲಾಗಿದೆ. ಎಣ್ಣೆ ಏಟಲ್ಲಿ ವೀಲಿಂಗ್ ಮಾಡಿದ್ರೆ ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಲಾಗಿದೆ ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ