ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ ಪ್ರಕರಣ: ಪೋಕ್ಸೋ​ ಕೇಸ್​ ದಾಖಲು

ಪತ್ನಿ ನಿಧನದ ಬಳಿಕ ಸೈಕೋ ಆಗಿ ತಿರುಗುತ್ತಿದ್ದವ ಚೆಂದದ ಹುಡಗಿರು ಕಂಡರೆ ಸಾಕು ತನ್ನ ಕಾಮದ ಕಣ್ಣನ್ನು ಬೀರುತ್ತಿದ್ದನು. ಹೀಗಿದ್ದಾತನ ಕಣ್ಣು ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಬಾಲಕಿ ಮೇಲೆ ಬಿದ್ದಿದೆ. ನಂತರ, ಬಾಲಕಿಯ ಅಶ್ಲೀಲ ಫೋಟೊ, ವಿಡಿಯೋ ಸೆರೆ ಹಿಡಿದು ಇನ್ನಿಲ್ಲ ಟಾರ್ಚರ್ ನೀಡಿದ್ದಾನೆ. ಮುಂದೇನಾಯ್ತು ಈ ಸುದ್ದಿ ಓದಿ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ ಪ್ರಕರಣ: ಪೋಕ್ಸೋ​ ಕೇಸ್​ ದಾಖಲು
ಆರೋಪಿ ಲೋಕೇಶ್​
Follow us
| Updated By: ವಿವೇಕ ಬಿರಾದಾರ

Updated on: Jun 09, 2024 | 1:20 PM

ಚಾಮರಾಜನಗರ, ಜೂನ್​ 09: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನಿಸಿದ್ದು, ಓರ್ವ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆ ಮಹದೇಶ್ವರ ಪೊಲೀಸ್ (Police) ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತೆ ಕುಟುಂಬ ದೂರು ಆಧರಿಸಿ ಆರೋಪಿ ಲೋಕೇಶ್ (45 ವರ್ಷ) ವಿರುದ್ಧ ಐಪಿಸಿ ಸೆಕ್ಷನ್ 306, 509 ಹಾಗೂ ಪೋಕ್ಸೋ (POCSO)​ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ

ಬಾಲಕಿ ಈಗತಾನೆ ಮೊದಲನೇ ವರ್ಷದ ಪಿಯುಸಿ ಮುಗಿಸಿ, ದ್ವಿತೀಯ ಪಿಯುಸಿಗೆ ಅಡ್ಮಿಷನ್ ಮಾಡಿಸಿದ್ದಳು. ಬಾಲಕಿ ತಾಯಿಯೊಂದಿಗೆ ಅಜ್ಜಿ-ಅಜ್ಜ ಮನೆಯಲ್ಲಿ ವಾಸವಾಗಿದ್ದಾಳೆ. ಬಾಲಕಿಯ ಅಜ್ಜ ಮಹದೇವನಾಯ್ಕ, ಅಜ್ಜಿ ಗೌರಮ್ಮ, ತಾಯಿ ಲೀಲಾವತಿ. ಉತ್ತಮ ವ್ಯಾಸಾಂಗ ಪಡೆದು ಬಾಲಕಿ ಐಎಎಸ್ ಅಧಿಕಾರಿ ಆಗಬೇಕೆಂದು ಕನಸು ಕಂಡಿದ್ದಳು. ಆದರೆ ಬಾಲಕಿಯ ಬಾಳಲ್ಲಿ ಆರೋಪಿ ಲೋಕೇಶ್​ನ ಪ್ರವೇಶವಾಗಿತ್ತು. ಲೋಕೇಶ್​ನಿಗೆ ಮದವೆಯಾಗಿ ಎರೆಡು ಮಕ್ಕಳಿದ್ದರೂ, ಪ್ರೀತ್ಸೆ ಪ್ರೀತ್ಸೆ ಅಂತ ಬಾಲಕಿ ಹಿಂದೆ ಬಿದ್ದಿದ್ದನು.

ಚೀರನಹಳ್ಳಿಯ ಲೋಕೇಶ್​ ಪತ್ನಿ ಮೃತಪಟ್ಟಿದ್ದು ಇಬ್ಬರು ಮಕ್ಕಳಿದ್ದಾರೆ. ಆದರೆ, ಲೋಕೇಶ್​ಗೆ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಬಾಲಕಿ ಮೇಲೆ ಕಣ್ಣಾಕಿದ್ದಾನೆ. ಆಕೆಯ ಅಶ್ಲೀಲ ವಿಡಿಯೋ, ಫೋಟೋಗಳನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದಾನೆ. ಈ ವಿಚಾರ ಬಾಲಕಿಯ ಮನೆಯವರಿಗೆ ತಿಳಿದಿದೆ. ಆಗ, ಬಾಲಕಿ ಕುಟುಂಬಸ್ಥರು ಕೆ.ಆರ್​ ನಗರ ಪೊಲೀಸ್ ಠಾಣೆಗೆ ದೂರು ನೀಡಿಲು ಎರಡೆರಡು ಬಾರಿ ತೆರಳಿದರೂ ಪಿಎಸ್ಐ ಹಾಗೂ ಇನ್ಸ್​ಪೆಕ್ಟರ್ ದೂರು ದಾಖಲಿಸಿಕೊಳ್ಳದೆ ವಾಪಸ್​​ ಕಳುಹಿಸಿದ್ದಾರೆ.

ಇದನ್ನೂ ಓದಿ: ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಯಾವಾಗ ಪೊಲೀಸ್ ಠಾಣೆ ಮೆಟ್ಟಿಲೇರಿದರು ಆಗ ಲೋಕೇಶ್​, ಬಾಲಕಿ ವಾಸವಾಗಿದ್ದ ತಂದಗಾಲು ಗ್ರಾಮಕ್ಕೆ ತೆರಳಿ ಆಕೆಯ ಮನೆ ಮುಂದೆ ಗಲಾಟೆ ಮಾಡಿದ್ದಾನೆ. ಇದರಿಂದ ಮನನೊಂದ ಕುಟುಂಬಸ್ಥರು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ಬಳಿಕ ತಾಳಬೆಟ್ಟಕ್ಕೆ ಹೋಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಪ್ರಾಶಾಣದಿಂದ ಅಜ್ಜಿ ಲೀಲಾವತಿ, ತಾಯಿ ಗೌರಮ್ಮ, ಹಾಗೂ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಅತ್ತ ಮಹದೇವನಾಯ್ಕ ಮೃತ ಪಟ್ಟಿದ್ದಾರೆ. ಸದ್ಯ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ಮಹದೇವನಾಯ್ಕರ ಮೃತಪಟ್ಟಿದ್ದಾರೆ. ಬಾಲಕಿ ಕೋಮಾಗೆ ಜಾರಿದ್ದು, ಆರೋಗ್ಯದಲ್ಲಿ ಏರುಪೇರಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್