AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಈ 2 ದಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಬೆಟ್ಟಕ್ಕೆ ಪ್ರತಿದಿನ ನೂರಾರು ಜನರು ಭೇಟಿ ನೀಡಿ, ಪ್ರಕೃತಿ ಸೌಂದರ್ಯವನ್ನು ಆನಂದಿಸುತ್ತಾರೆ. ಆದರೆ, ಇದೀಗ ಈ ಎರಡು ದಿನ ಹಿಮವದ್​ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಕಾರಣ ಇಲ್ಲಿದೆ.

ಚಾಮರಾಜನಗರ: ಈ 2 ದಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ
ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ|

Updated on:Jul 28, 2025 | 9:32 PM

Share

ಚಾಮರಾಜನಗರ, ಜುಲೈ 28: ಚಾಮರಾಜನಗರ (Chamrajnagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ (Himavad Gopalswamy Betta) ರಸ್ತೆಗೆ ಕಟ್ಟಿದ್ದ ತಡೆಗೋಡೆ ಕುಸಿತಗೊಂಡಿದೆ. ಭಾರಿ ಮಳೆಗೆ ತಡೆಗೋಡೆ ಕುಸಿದಿದ್ದರಿಂದ ಕಲ್ಲುಗಳು ರಸ್ತೆಗೆ ಉರುಳಿ ಬಿದ್ದಿವೆ. ಹೀಗಾಗಿ, ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭಕ್ತರು ಮತ್ತು ಪ್ರವಾಸಿಗರ ಪ್ರವೇಶವನ್ನು ಮಂಗಳವಾರದಿಂದ ಎರಡು ದಿನಗಳ ಕಾಲ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಂಗಳವಾರ (ಜು.29) ದಿಂದ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲಿದ್ದಾರೆ. ಎರಡು ದಿನ ದುರಸ್ತಿ ಕಾರ್ಯ ನಡೆಯುವ ಹಿನ್ನೆಲೆಯಲ್ಲಿ ಎಲ್ಲಾ ಮಾದರಿಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಹಚ್ಚ ಹಸಿರಿನಿಂದ ಕೂಡಿದ ಬೆಟ್ಟ

ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಬಂಡೀಪುರ ರಾಷ್ಟ್ರೀಯ ಉದ್ಯಾನದ ಅತಿ ಎತ್ತರದ ಶಿಖರವಾಗಿದೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟವು ವೇಣುಗೋಪಾಲಸ್ವಾಮಿ ದೇವಾಲಯ ಮತ್ತು ಹಚ್ಚ ಹಸಿರಿನಿಂದ ಕೂಡಿದ ನೈಸರ್ಗಿಕ ಪರಿಸರದಿಂದಾಗಿ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಇದನ್ನೂ ನೋಡಿ: ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು: ಹಣದ ಆಸೆಗಾಗಿ ನಿಷೇಧದ ಬಳಿಕವೂ ಬೆಟ್ಟಕ್ಕೆ ಕರೆದೊಯ್ದ ಸಿಬ್ಬಂದಿ

ಇದನ್ನೂ ಓದಿ
Image
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟ್; ವಿವಾದದ ಬಳಿಕ ಉಲ್ಟಾ
Image
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
Image
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧ ವಾಪಸ್
Image
ದಟ್ಟ ಮಂಜಿನಿಂದ ಕೂಡಿದ ಗೋಪಾಲಸ್ವಾಮಿ ಬೆಟ್ಟ ಪ್ರವಾಸಿಗರನ್ನ ಕೈ ಬಿಸಿ ಕರೆಯುತ್ತಿದ್ದು, ಅದರ ಝಲಕ್​ ಇಲ್ಲಿದೆ

ವೇಣುಗೋಪಾಲಸ್ವಾಮಿ ದೇವಸ್ಥಾನ

14 ನೇ ಶತಮಾನದಲ್ಲಿ ಅಗಸ್ತ್ಯ ಋಷಿಮುನಿಗಳು ನಿರ್ಮಿಸಿದ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಭಗವಾನ್ ಕೃಷ್ಣ (ವೇಣುಗೋಪಾಲ ಸ್ವಾಮಿ) ನೃತ್ಯದ ಭಂಗಿಯಲ್ಲಿ ನಿಂತು ತನ್ನ ಕೈಯಲ್ಲಿ ಕೊಳಲು ನುಡಿಸುವ ವಿಗ್ರಹವಿದೆ. ವಿಗ್ರಹದ ಹಿಂದಿನ ಫಲಕವು ಕೃಷ್ಣನ ಪತ್ನಿಯರಾದ ಸತ್ಯಭಾಮ, ರುಕ್ಮಿಣಿ ಮತ್ತು ನೆಚ್ಚಿನ ಪ್ರಾಣಿ ಹಸು ಮತ್ತು ಗೋಪಾಲಕರ ಕೆತ್ತನೆಗಳನ್ನು ಒಳಗೊಂಡಿದೆ.

ವೇಣುಗೋಪಾಲಸ್ವಾಮಿ ದೇವಾಲಯದ ಸುತ್ತಲಿನ ಪ್ರದೇಶವು ಅತ್ಯಂತ ಹಸಿರಾಗಿದ್ದು ನಯನ ಮನೋಹರವಾಗಿದೆ. ಹೆಚ್ಚಿನ ದಿನಗಳಲ್ಲಿ ದೂರದಲ್ಲಿ ಕಾಣುವ ಬಿಳಿ ಮೋಡವು ಮಂಜು ಮುಸುಕಿದ ಅನಿಸಿಕೆ ನೀಡುತ್ತದೆ. ಹಾಗಾಗಿ “ಹಿಮವದ್” ಎಂಬ ಹೆಸರು ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:29 pm, Mon, 28 July 25