ಖಾಸಗಿ ಶಾಲೆಗಳಿಗೆ ಗುಡ್​ ಬೈ: ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ

ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯುವವರೇ ಹೆಚ್ಚಾಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಶಾಲೆಗಳಿಗೆ ಬೀಗ ಬಿದ್ದಿದೆ. ಆದರೆ ಈ ವರ್ಷ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

ಖಾಸಗಿ ಶಾಲೆಗಳಿಗೆ ಗುಡ್​ ಬೈ: ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ
ಸರ್ಕಾರಿ ಶಾಲೆ
Edited By: ವಿವೇಕ ಬಿರಾದಾರ

Updated on: Jun 11, 2025 | 8:23 PM

ಚಾಮರಾಜನಗರ, ಜೂನ್​ 11: ಸರ್ಕಾರಿ ಶಾಲೆಗಳಲ್ಲಿ (Government School) ಮೂಲಭೂತ ಸೌಕರ್ಯ ಕೊರತೆ ಇರುತ್ತದೆ, ಮಕ್ಕಳಿಗೆ ಕ್ವಾಲಿಟಿ ಶಿಕ್ಷಣ ಸಿಗಲ್ಲ ಎಂಬ ಕಾರಣದಿಂದ ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದಾರೆ. ಆದರೆ, ಗಡಿ ಜಿಲ್ಲೆ ಚಾಮರಾಜನಗರದಲ್ಲಿ (Chamrajanagar) ಇದಕ್ಕೆ ತದ್ವಿರುದ್ಧ ಎಂಬ ರೀತಿಯಲ್ಲಿ ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಪಡೆದಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮುಚ್ಚಿದ್ದವು. ಕಟ್ಟಡದ ಕೊರತೆ, ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯ ಕೊರತೆಯಿದೆ ಎಂದು ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದರು. ಆದರೆ, ಈ ಬಾರಿ ಪರಿಸ್ಥಿತಿ ಸ್ವಲ್ಪ ಬದಲಾಗಿದ್ದು, ಸರ್ಕಾರಿ ಶಾಲೆಗಳತ್ತ ಪೋಷಕರು ಸ್ವಲ್ಪ ಮಟ್ಟಿಗೆ ಒಲವು ತೋರಿದ್ದಾರೆ.

ಸರ್ಕಾರಿ ಶಾಲೆಗಳತ್ತ ಮಕ್ಕಳು ಬರಲು, ಪೋಷಕರು ಒಲವು ತೋರಲು ಅನೇಕ ಕಾರಣಗಳಿಗಳಿವೆ. ಇದಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಿರುವುದು ಪ್ರಮುಖ ಕಾರಣವಾಗಿದೆ. ಅಲ್ಲದೆ, ಸಾಕಷ್ಟು ಶಾಲೆಗಳನ್ನು ಸಿಆರ್​ಎಸ್ ಫಂಡ್ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಶಿಕ್ಷಕರ ಕೊರತೆ ಕೂಡ ನೀಗಿಸುವ ಕೆಲಸವಾಗಿದೆ. ಶಾಲೆಗಳ ಕಟ್ಟಡ ದುರಸ್ತಿ ಪಡಿಸಿಕೊಡಲಾಗಿದೆ. ಈ ಎಲ್ಲ ಕಾರಣಗಳಿಂದ ಮಕ್ಕಳು ಸರ್ಕಾರಿ ಶಾಲೆಗಳಿಗೆ ಬರುತ್ತಿದ್ದಾರೆ.

ಇದನ್ನೂ ಓದಿ
ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ: ಸಚಿವ ಮಧು ಬಂಗಾರಪ್ಪ ಘೋಷಣೆ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
KCET Exam ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡಿ
ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಕೆಇಎ ಹೊಸ ನಿಯಮ

ಇದನ್ನೂ ಓದಿ: ಸರ್ಕಾರಿ ಶಾಲೆ ಹಾಜರಾತಿ , ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​ ಅಪ್ಡೇಟ್​ ನೀಡಿದ ಶಿಕ್ಷಣ ಸಚಿವ

ಸರ್ಕಾರಿ ಶಾಲೆ ಅಂದ್ರೆ ಸಾಕು ಈಗಿನ ಪೋಷಕರು ಮಕ್ಕಳನ್ನು ದಾಖಲು ಮಾಡಲು ಹಿಂದೇಟು ಹಾಕುತ್ತಿರುವವರ ನಡುವೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗಕ್ಕೆ ಮಕ್ಕಳನ್ನು ಹೆಚ್ಚು ದಾಖಲಾತಿ ಮಾಡುತ್ತಿರುವುದು ಮಾತ್ರ ಒಂದು ಆಶಾದಾಯಕ ಬೆಳವಣಿಗೆಯೇ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us