108 ಅಡಿ ಎತ್ತರದ ಮಾದಪ್ಪನ ಪ್ರತಿಮೆ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

|

Updated on: Mar 18, 2023 | 1:19 PM

ಸಿಎಂ ಬಸವರಾಜ ಬೊಮ್ಮಾಯಿಯವರು ಮಾರ್ಚ್ 18ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ 108 ಅಡಿಯ ಮುಗಿಲೆತ್ತರದ ಮಾದಪ್ಪನ ಪ್ರತಿಮೆ ಲೋಕಾರ್ಪಣೆ ಮಾಡಿದರು.

108 ಅಡಿ ಎತ್ತರದ ಮಾದಪ್ಪನ ಪ್ರತಿಮೆ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಮಾದಪ್ಪನ ಪ್ರತಿಮೆ
Follow us on

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ(Male Mahadeshwara Betta) 108 ಅಡಿ ಎತ್ತರದ ಮಾದಪ್ಪನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಕ್ರೇನ್ ಸಹಾಯದಿಂದ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಮಾದಪ್ಪನ ಬೃಹತ್ ಪ್ರತಿಮೆ ಅನಾವರಣ ಮಾಡಿದರು. ಸಮಾರಂಭದಲ್ಲಿ ಸಚಿವರಾದ ವಿ.ಸೋಮಣ್ಣ, ಎಸ್​.ಟಿ.ಸೋಮಶೇಖರ್, ಶಾಸಕರಾದ ನರೇಂದ್ರ, ಎನ್.ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಾಜಿ ಸಿಎಂ ಯಡಿಯೂರಪ್ಪ ಗೈರಾಗಿದ್ದಾರೆ.

ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಬಳಿ ನಿನ್ನೆ(ಮಾರ್ಚ್ 17) ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಚಿವ ವಿ.ಸೋಮಣ್ಣ, ಸಿಎಂ ಬಸವರಾಜ ಬೊಮ್ಮಾಯಿ ಬರುತ್ತಾರೆ. ಬಿ.ಎಸ್ ಯಡಿಯೂರಪ್ಪ, ಸಿಸಿ ಪಾಟೀಲ್, ಆರ್. ಅಶೋಕ್, ಶಶಿಕಲಾ ಜೊಲ್ಲೆ ಅವರನ್ನು ಆಹ್ವಾನಿಸಿದ್ದೇವೆ. ಆದರೆ ಮಾದಪ್ಪ ಯಾರ್ಯಾರನ್ನ ಕರೆಸಿಕೊಳ್ಳಬೇಕೋ ಕರೆಸಿಕೊಳ್ಳುತ್ತಾನೆ ಎಂದು ಮಾರ್ಮಿಕವಾಗಿ ನುಡಿದಿದ್ದರು. ಇಂದು ಸಿಎಂ ಬೊಮ್ಮಾಯಿ 108 ಅಡಿಯ ಬೃಹತ್ ಪ್ರತಿಮೆ ಅನಾವರಣಗೊಳಿಸಿದ್ದಾರೆ.

ಇದನ್ನೂ ಓದಿ: Chamarajanagara: ಶೀಘ್ರದಲ್ಲಿಯೇ ಮಲೈಮಹದೇಶ್ವರ ಬೆಟ್ಟದ ಮಾದಪ್ಪನಿಗೆ 530 ಕೆ.ಜಿ ತೂಕದ ಬೆಳ್ಳಿ ರಥ

20 ಕೋಟಿ ರೂ. ವೆಚ್ಚದಲ್ಲಿ ಮಹದೇಶ್ವರ ಪ್ರತಿಮೆ

ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ಮಹದೇಶ್ವರ 108 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗಿದೆ. ಮಹದೇಶ್ವರ ಸ್ವಾಮಿ ಜೀವನ ಚರಿತ್ರೆ ಸಾರುವ ಮ್ಯೂಸಿಯಂ, ಪ್ರತಿಮೆಯ ಸ್ಥಳದಲ್ಲಿ ಬಯಲು ರಂಗಮಂದಿರ, ಗಿಡಮೂಲಿಕಾ ವನಗಳ ಅಭಿವೃದ್ಧಿ ಸೇರಿದಂತೆ ಇತರೆ ಕಾಮಗಾರಿಗಳು ಇನ್ನಷ್ಟೇ ನಡೆಯಬೇಕಿದೆ.

ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಕಾರವು ಒಂದು ಎಕರೆ ಜಾಗದಲ್ಲಿ ಪ್ರತಿಮೆ ಹಾಗೂ ವಸ್ತು ಸಂಗ್ರಹಾಲಯಕ್ಕೆ 20 ಕೋಟಿ ರೂ. ವೆಚ್ಚ ಮಾಡಿದೆ. ವಸ್ತು ಸಂಗ್ರಹಾಲಯದ ಕೆಲಸವು ಶೇ.50ಕ್ಕಿಂತಲೂ ಕಡಿಮೆ ಪೂರ್ಣಗೊಂಡಿದ್ದು, ರಸ್ತೆ ಕಾಮಗಾರಿ, ಉದ್ಯಾನವನಗಳು, ಕುಡಿಯುವ ನೀರು, ಶೌಚಾಲಯಗಳು ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳ ಕಾರ್ಯಗಳು ಪೂರ್ಣಗೊಂಡಿಲ್ಲ. ಈ ಕಾರ್ಯಗಳು ಪೂರ್ಣಗೊಳ್ಳಲು ಇನ್ನೂ ಕೆಲವು ತಿಂಗಳುಗಳ ಕಾಲ ಸಮಯ ಬೇಕಾಗುತ್ತದೆ ಎಂದು ತಿಳಿದು ಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:11 pm, Sat, 18 March 23