ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ಫಿಕ್ಸ್

ಹಿಂದುಳಿದ ಜಿಲ್ಲೆ, ಅಭಿವೃದ್ಧಿ ಕಾಣದ ನಗರ, ಅಧಿಕಾರದಲ್ಲಿದ್ದವರು ಈ ಜಿಲ್ಲೆಗೆ ಭೇಟಿ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಹಣೆ ಪಟ್ಟಿ ಪಡೆದ ಚಾಮರಾಜನಗರ ಜಿಲ್ಲೆಯಲ್ಲಿ ಕೊನೆಗೂ ಸಚಿವ ಸಂಪುಟ ಸಭೆ ನಡೆಸಲು ಮುಹೂರ್ತ ಫಿಕ್ಸ್ ಆಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟವು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಭೆ ಸೇರಲಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ಫಿಕ್ಸ್
ಮಲೆ ಮಹದೇಶ್ವರ ಬೆಟ್ಟ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma

Updated on: Jan 09, 2025 | 11:37 AM

ಚಾಮರಾಜನಗರ, ಜನವರಿ 9: ಚಾಮರಾಜನಗರ ಜಿಲ್ಲೆ ಎಂದರೆ ಮೂಗು ಮುರಿಯುವರೇ ಹೆಚ್ಚು. ಅಭಿವೃದ್ಧಿ ಕಾಣದ ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಾರಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಯ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ವಿಚಾರವಾಗಿ ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ನಿವಾರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ‌‌. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲ ಸೌಕರ್ಯ, ಹಾಡಿ ಜನರಿಗೆ ಮೂಲ ಸೌಕರ್ಯದ ಕುರಿತು ಪರಿಹಾರ ಸಿಗುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.

ಎಸ್​ಎಂ ಕೃಷ್ಣ ಸಿಎಂ ಆಗಿದ್ದಾಗ ನಡೆದಿತ್ತು ಮಿನಿ ಸಂಪುಟ ಸಭೆ!

ಈ ಹಿಂದೆ ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಮಿನಿ ಸಂಪುಟ ಸಭೆ ನಡೆದಿತ್ತು. ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಎಸ್ಎಂ ಕೃಷ್ಣ ಮಿನಿ ಸಂಪುಟ ಸಭೆ ನಡೆಸಿದ್ದರು‌. ಅರಣ್ಯ, ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆ ಸಚಿವರ ಸಭೆ ನಡೆಸಿ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಂಡಿದ್ದರು.

ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಎರಡು ವರ್ಷಗಳಲ್ಲಿ 24 ಸರ್ಕಾರಿ ಶಾಲೆಗಳಿಗೆ ಬಿತ್ತು ಬೀಗ!

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ತೊಡೆದು ಹಾಕಿದ್ದ ಸಿಎಂ ಸಿದ್ದರಾಮಯ್ಯ ಈಗ ಸಂಪುಟ ಸಭೆ ನಡೆಸಲು ಮುಂದಾಗಿದ್ದಾರೆ. ಸಂಪುಟ ಸಭೆಯಲ್ಲಿ ಸಿಎಂ ವಿಶೇಷ ಪ್ಯಾಕೇಜ್, ವಿಶೇಷ ಯೋಜನೆ ಮೂಲಕ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಳಚಲಿ ಎಂಬುದೇ ಜಿಲ್ಲೆಯ ಜನರ ಆಶಯವಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್