Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಕಾಂಗ್ರೆಸ್​ ಕಚೇರಿ ಮುಂದೆ ಸಾಯ್ತೀನಿ, ಅಭಿಮಾನಿಯ ಪತ್ರ ವೈರಲ್​

ಉಪ್ಪಾರ ಸಮುದಾಯದ ಶಾಸಕ ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಭಿಮಾನಿಯೋರ್ವನ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಕಾಂಗ್ರೆಸ್​ ಕಚೇರಿ ಮುಂದೆ ಸಾಯ್ತೀನಿ, ಅಭಿಮಾನಿಯ ಪತ್ರ ವೈರಲ್​
ಪುಟ್ಟರಂಗಶೆಟ್ಟಿ ಅಭಿಮಾನಿ ಪತ್ರ ವೈರಲ್
Follow us
ರಮೇಶ್ ಬಿ. ಜವಳಗೇರಾ
|

Updated on: May 27, 2023 | 12:44 PM

ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ( C Puttarangashetty) ಸಚಿವ ಸ್ಥಾನ ಕೈತಪ್ಪಿದ್ದರಿಂದ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಅಭಿಮಾನಿಯೋರ್ವನ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಾಮರಾಜನಗರ ತಾಲೂಕು ನಲ್ಲೂರುಮೋಳೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಸಿ.ಪುಟ್ಟರಂಗಶೆಟ್ಟಿ ಅಭಿಮಾನಿಯಾಗಿರುವ ಚಂದ್ರಶೇಖರ್ ಎನ್ನುವವರು ಪತ್ರ ಬರೆದಿದ್ದು,  ಜಿಲ್ಲಾ ಅಥವಾ ಕೆಪಿಸಿಸಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನ್ನ ಆತ್ಮಹತ್ಯೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಕಾರಣ ಎಂದು ಪತ್ರದಲ್ಲಿ ಬರೆದಿದ್ದು, ಇದೀಗ ಆ ಪತ್ರ ವೈರಲ್ ಆಗಿದೆ.

ಇದನ್ನೂ ಓದಿ: ಶಾಸಕರು ಅಲ್ಲ, ಎಂಎಲ್​ಸಿಯೂ ಅಲ್ಲ ಆದರೂ ಬೋಸರಾಜ್​ಗೆ ಸಚಿವ ಸ್ಥಾನ ಸಿಕ್ಕಿದ್ದೇಗೆ? ಇಲ್ಲಿದೆ ಅಸಲಿ ಕಾರಣ

ಪತ್ರದಲ್ಲೇನಿದೆ?

‘ ನಾನು ಚಂದ್ರಶೇಖರ್ s/o ನಂಜುಂಡಶೆಟ್ಟಿ ನಲ್ಲೂರುಮೋಳೆ ಕಾಂಗ್ರೆಸ್ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದು. ನಂಬಿಕೆ ದ್ರೋಹದ ಕೆಲಸವನ್ನು ಕಾಂಗ್ರೆಸ್ ಮತ್ತು ಹೈಕಮಾಂಡ್ ಮಾಡಿದೆ.‌ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ‌ ಕೊಟ್ಟಿಲ್ಲದಿದ್ದರಿಂದ ಜಿಲ್ಲಾ ಅಥವಾ ಕೆಪಿಸಿಸಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ.

ನನ್ನ ಆತ್ಮಹತ್ಯೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರೇ ಕಾರಣಕರ್ತರು. ನನ್ನ‌ ಸಾವಿನಲ್ಲೂ ಸಹ ನಮ್ಮ ಉಪ್ಪಾರ ಸಮಾಜ ನಿಮ್ಮ ಪಕ್ಷವನ್ನು ಬಿಟ್ಟು ಉಗ್ರ ಹೋರಾಟ ಮಾಡುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಈ ಬಗ್ಗೆ ಮಾತನಾಡಿರುವ 21 ವರ್ಷದ ಚಂದ್ರಶೇಖರ್, ನಾನು ಪುಟ್ಟರಂಗಶೆಟ್ಟಿ ಅವರ ಪಕ್ಕಾ ಅಭಿಮಾನಿ. ಇಂದು ಬೆಳಗ್ಗೆ ಕಾಂಗ್ರೆಸ್ ಕಚೇರಿಗೆ ನನ್ನ ಪತ್ರವನ್ನು ತಲುಪಿಸುತ್ತೇನೆ. ಉಪಸಭಾಪತಿ ಸ್ಥಾನಬೇಡ. ಉಪ್ಪಾರ ಸಮಾಜದಲ್ಲಿ ನಾಲ್ಕು, ಐದು ಶಾಸಕರಿದ್ದಿದ್ದರೆ‌ ಈ ಸ್ಥಾನ ಸ್ವೀಕಾರ ಮಾಡಬಹುದಿತ್ತು. ಆದರೆ‌ ಒಬ್ಬರೇ ಇರುವುದರಿಂದ ಸಚಿನ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಚಾಮರಾಜನಗರದಲ್ಲಿ ಉಪ್ಪಾರ ಸಮಾಜ ಮುಖಂಡರಿಂದ ಪ್ರತಿಭಟನೆ

ಇನ್ನು ಪುಟ್ಟರಂಗಶೆಟ್ಟಿ ಅವರಿಗೆ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಉಪ್ಪಾರ ಸಮುದಾಯ ಅಸಮಾಧಾನಗೊಂಡಿದ್ದು, ಚಾಮರಾಜನಗರದಲ್ಲಿ ಇಂದು (ಮೇ 27) ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಉಪ್ಪಾರ ಸಮುದಾಯದ ಏಕೈಕ ಶಾಸಕ ಪುಟ್ಟರಂಗಶೆಟ್ಟಿ. ನಾಲ್ಕು ಬಾರಿ ಗೆದ್ದಿದ್ದಾರೆ. ಈ ಬಾರಿ ಪ್ರಭಾವಿ ಸೋಮಣ್ಣ ವಿರುದ್ಧ ಅಧಿಕ ಮತಗಳಿಂದ ಗೆದ್ದರೂ ಪುಟ್ಟರಂಗಶೆಟ್ಟಿ ಅವರನ್ನು ಕಡೆಗಣನೆ ಮಾಡಲಾಗಿದೆ ಎಂದು ಆರೋಪಿಸಿ ನಗರದ ಭುವನೇಶ್ವರಿ ವೃತ್ತದಲ್ಲಿ ಕಾಂಗ್ರೆಸ್​ ಹೈಕಮಾಂಡ್ ನಡೆಗೆ ಉಪ್ಪಾರ ಸಮುದಾಯ ಪ್ರತಿಭಟಿಸಿತು.

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ