Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಲ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, ಶಾಸಕ ನಿರಂಜನ್ ಕುಮಾರ್ಗೆ ಮುಖಭಂಗ

ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ (ಚಾಮುಲ್) ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಶಾಸಕ ನಿರಂಜನ್ ಕುಮಾರ್ಗೆ ಮುಖಭಂಗವಾಗಿದೆ.

ಚಾಮುಲ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, ಶಾಸಕ ನಿರಂಜನ್ ಕುಮಾರ್ಗೆ ಮುಖಭಂಗ
ಚಾಮುಲ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
Follow us
TV9 Web
| Updated By: ಆಯೇಷಾ ಬಾನು

Updated on:Jun 14, 2022 | 10:42 PM

ಚಾಮರಾಜನಗರ: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ (ಚಾಮುಲ್) ಆಡಳಿತ ಮಂಡಳಿ ಚುನಾವಣೆ ಮುಗಿದಿದ್ದು ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ 4, ಬಿಜೆಪಿ 2, ಪಕ್ಷೇತರ 2, ಜೆಡಿಎಸ್ 1 ಸ್ಥಾನ ಪಡೆದಿದೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಶಾಸಕ ನಿರಂಜನ್ ಕುಮಾರ್ಗೆ ಮುಖಭಂಗವಾಗಿದೆ. ಬಂಡಾಯ ಬಿಜೆಪಿ ಅಭ್ಯರ್ಥಿ ಸುನಿಲ್, ಕಾಂಗ್ರೆಸ್ನ ನಂಜುಂಡ ಪ್ರಸಾದ್ಗೆ ಜಯ ಸಿಕ್ಕಿದೆ. ಮಹಿಳಾ ಕ್ಷೇತ್ರದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಪುತ್ರಿ ಶೀಲಾಗೆ ಗೆಲುವಾಗಿದೆ.

ಸಹಕಾರಿ ಕ್ಷೇತ್ರದ ಚುನಾವಣೆಗಳು ಪಕ್ಷದ ಚಿಹ್ನೆಯ ಮೇಲೆ ನಡೆಯದಿದ್ದರು ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನ ಕಣಕ್ಕಿಳಿಸುವುದರಿಂದ ಇತ್ತೀಚೆಗೆ ಈ ಚುನಾವಣೆಗಳು ಸಾಕಷ್ಟು ಜಿದ್ದಾ ಜಿದ್ದಾನಿಂದ ನಡೆಯುತ್ತವೆ. ಸದ್ಯ ಮೈಸೂರು ಜಿಲ್ಲಾ ಹಾಲು ಒಕ್ಕೂಟದಿಂದ ಬೇರ್ಪಟ್ಟ ಬಳಿಕ ಎರಡನೇ ಬಾರಿಗೆ ನಡೆದ ಚುನಾವಣೆ ಇದಾಗಿದೆ. ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಹನೂರು ತಾಲ್ಲೂಕುಗಳ ತಲಾ ಎರಡು, ಯಳಂದೂರು ಹಾಗೂ ಕೊಳ್ಳೇಗಾಲ ತಾಲ್ಲೂಕಿನ ತಲಾ ಒಂದು ಸಾಮಾನ್ಯ ಸ್ಥಾನಗಳಿಗೆ ಹಾಗೂ ಒಂದು ಮಹಿಳಾ ಮೀಸಲು ಸ್ಥಾನ ಸೇರಿ ಒಟ್ಟು ಒಂಬತ್ತು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿತ್ತು.‌ 9 ಸ್ಥಾನಗಳಲ್ಲಿ 4 ಸ್ಥಾನಗಳನ್ನ ಕಾಂಗ್ರೆಸ್ ಗೆದ್ದರೆ, 2 ಸ್ಥಾನ‌ ಬಿಜೆಪಿ, 2 ಸ್ಥಾನ ಪಕ್ಷೇತರರು ಹಾಗೂ ಒಂದು ಸ್ಥಾನವನ್ನ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದುಕೊಂಡಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ಕರೆದಿರುವ ಸಭೆಯಲ್ಲಿ ಹೆಚ್.ಡಿ. ದೇವೆಗೌಡ ಮತ್ತು ಹೆಚ್​​. ಡಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ

ಸದ್ಯ ಈ ಚುನಾವಣೆ ತಮ್ಮ ಬೆಂಬಲಿತ ಅಭ್ಯರ್ಥಿಯನ್ನ ಗೆಲ್ಲಿಸಿಕೊಂಡು ಬರಲು ಕ್ಷೇತ್ರದ ಶಾಸಕರುಗಳು ಸಾಕಷ್ಟು ಜಿದ್ದಾಜಿದ್ದಿನ ಪೈಪೋಟಿ ನಡೆಸಿದ್ರು. ಅದರಲ್ಲು ಚಾಮರಾಜನಗರ ಕ್ಷೇತ್ರ ಶಾಸಕ ಪುಟ್ಟರಂಗಶೆಟ್ಟಿ ತಮ್ಮ ಪುತ್ರಿಯನ್ನ ಮಹಿಳಾ ಮೀಸಲು ಸ್ಥಾನದಿಂದ ಕಣಕ್ಕಿಳಿಸಿದ್ದರು. ಇದರಲ್ಲಿ ಶಾಸಕರು ತಮ್ಮ ಪುತ್ರಿ ಶೀಲಾರನ್ನ‌ ಗೆಲ್ಲಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ‌. ಇನ್ನು ಗುಂಡ್ಲುಪೇಟೆ ಕ್ಷೇತ್ರದ ಬಿಜೆಪಿ ಶಾಸಕ ನಿರಂಜನ್ ಕುಮಾರ್ ಗೆ ಈ ಚುನಾವಣೆ ಸಾಕಷ್ಟು ಪ್ರತಿಷ್ಟೆಯಾಗಿತ್ತು. ತಮ್ಮ ರಾಜಕೀಯ ಎದುರಾಳಿಯಾಗಿದ್ದ ಮಾಜಿ ಸಚಿವ ದಿ.ಹೆಚ್.ಎಸ್.ಮಹದೇವ ಪ್ರಸಾದ್ ಸಹೋದರ ನಂಜುಂಡ ಪ್ರಸಾದ್ ಅಭ್ಯರ್ಥಿಯಾಗಿದ್ದರು. ಜೊತೆಗೆ ಬಿಜೆಪಿ ಬಂಡಾಯವಾಗಿ ಮೂಡುಗೂರು ಸುನೀಲ್ ಕಣದಲ್ಲಿದ್ದರು. ಇಬ್ಬರನ್ನು ಶತಾಯಗತಾಯ ಸೋಲಿಸಿ ಕ್ಷೇತ್ರದಲ್ಲಿ ಮತ್ತಷ್ಟು ಹಿಡಿತ ಸಾಧಿಸುವ ಪ್ಲಾನ್ ಮಾಡಿದ್ರು. ಆದ್ರೆ ಶಾಸಕರ ಲೆಕ್ಕಾಚಾರ ಚುನಾವಣೆಯಲ್ಲಿ ಉಲ್ಟಾ ಆಗಿದ್ದು ನಂಜುಂಡ ಪ್ರಸಾದ್ ಹಾಗೂ ಸುನೀಲ್ ಇಬ್ಬರು‌ ಗೆಲುವು ಸಾಧಿಸಿದ್ದಾರೆ.

ವರದಿ: ದಿಲೀಪ್ ಚೌಡಹಳ್ಳಿ, ಟಿವಿ9 ಚಾಮರಾಜನಗರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಾಮರಾಜನಗರ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:34 pm, Tue, 14 June 22

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ