ಜನರ ಮಧ್ಯೆ ಬೆಂಕಿ ಹಚ್ಚುವ ಪ್ರತಾಪ ಸಿಂಹರನ್ನ ಬಂಧಿಸಿ: ದಲಿತ ಸಂಘಟನೆ ಆಗ್ರಹ

ವಿಶ್ವವಿಖ್ಯಾತ ಮೈಸೂರು ದಸರಾಗೆ ಈಗಾಗಲೇ ಸಿದ್ದತೆಗಳು ಶುರುವಾಗಿದೆ. ಇದರ ನಡುವೆ ಈ ವರ್ಷವೂ ಮಹಿಷ ದಸರಾ ಆಚರಣೆ ಮುನ್ನಲೆಗೆ ಬಂದಿದ್ದು, ಇದಕ್ಕೆ ಮಾಜಿ ಸಂಸದ ಪ್ರತಾಪ್​ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಕೆರಳಿರುವ ದಲಿತ ಸಂಘಟನೆಗಳು, ‘ಸಮಾಜದ ಶಾಂತಿ ಭಂಗ ಮಾಡುತ್ತಿರುವ ಪ್ರತಾಪ್‌ ಸಿಂಹರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನರ ಮಧ್ಯೆ ಬೆಂಕಿ ಹಚ್ಚುವ ಪ್ರತಾಪ ಸಿಂಹರನ್ನ ಬಂಧಿಸಿ: ದಲಿತ ಸಂಘಟನೆ ಆಗ್ರಹ
ಪ್ರತಾಪ ಸಿಂಹ, ದಲಿತ ಸಂಘಟನೆ ಮುಖಂಡರು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 26, 2024 | 4:36 PM

ಚಾಮರಾಜನಗರ, ಸೆ.26: ಮಹಿಷ ದಸರಾ ವಿಚಾರವಾಗಿ ಮಾಜಿ ಸಂಸದ ಪ್ರತಾಪ್‌ ಸಿಂಹ(Prathap Simha) ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಚಾಮರಾಜನಗರ ದಲಿತ ಸಂಘಟನೆ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ, ಸಮಾಜದ ಶಾಂತಿ ಭಂಗ ಮಾಡುತ್ತಿರುವ ಪ್ರತಾಪ್‌ ಸಿಂಹರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಇನ್ನು ಮಹಿಷ ದಸರಾ ಅಚರಣೆ ಬಗ್ಗೆ ಅಪಸ್ವರ ಎತ್ತದೆ ಹಾಲಿ ಸಂಸದ ಯಧುವೀರ್ ತಮ್ಮ ಘನತೆ ಉಳಿಸಿಕೊಂಡಿದ್ದಾರೆ. ಆದರೆ, ಮಾಜಿ ಸಂಸದ ಪ್ರತಾಪ್‌ ಸಿಂಹ ವಿವೇಚನಾರಹಿತವಾಗಿ ಮಾತನಾಡುತ್ತಿದ್ದಾರೆ. ಮಹಿಷಾಸುರ ಮೈಸೂರಿನ ಅಸ್ಮಿತೆಯ ಸಂಕೇತ ಮತ್ತು ಮೈಸೂರಿನ ಆದಿ ಪುರುಷ. ಈ ಹಿನ್ನಲೆ ಮಹಿಷ ದಸರೆ ಆಚರಣೆಗೆ ಚಾಮರಾಜನಗರ ಜಿಲ್ಲೆಯಿಂದ 5 ಸಾವಿರಕ್ಕೂ ಹೆಚ್ಚು ಮಂದಿ ತೆರಳುತ್ತೇವೆ ಎಂದು ದಲಿತ ಸಂಘಟನೆ ಒಕ್ಕೂಟದ ಮುಖಂಡರ ಹೇಳಿದ್ದಾರೆ.

ಇದನ್ನೂ ಓದಿ:ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!

ಪ್ರತಾಪ್​ ಸಿಂಹ ಹೇಳಿದ್ದೇನು?

ಇದೇ ಸೆ.23 ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಮಾತನಾಡಿದ್ದ ಪ್ರತಾಪ್​ ಸಿಂಹ, ‘ಮಹಿಷ ದಸರಾಗೆ ಚಾಮುಂಡಿಬೆಟ್ಟ ಸೂಕ್ತ ಜಾಗವಲ್ಲ, ಮಹಿಷನ ಮೇಲೆ ನಂಬಿಕೆ ಇದ್ದರೆ ನೀವು ಮನೆಯಲ್ಲೇ ಪೂಜೆ ಮಾಡಿಕೊಳ್ಳಿ. ಮಹಿಷಾಸುರ, ಕಂಸ, ರಾವಣ ಯಾರನ್ನಾದರೂ ಮನೆಯಲ್ಲಿ ಆರಾಧಿಸಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ಭಕ್ತರು ಅವಕಾಶ ಮಾಡಿಕೊಡಲ್ಲ. ಮನೆಗಳಲ್ಲಿ ಬೇಕಾದರೆ ಮಹಿಷನ ಫೋಟೋವನ್ನು ಇಟ್ಟುಕೊಳ್ಳಿ. ಮಹಿಷನ ರೀತಿ ಮಗು ಹುಟ್ಟಲಿ ಎಂದು ಪೂಜೆ ಮಾಡಿಕೊಳ್ಳಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ನೀವು ಮಹಿಷ ದಸರಾ ಮಾಡುತ್ತೇವೆ ಅಂದರೆ ಚಾಮುಂಡಿ ಭಕ್ತರು ಅಂದೇ ಚಾಮುಂಡಿ ಬೆಟ್ಟ ಚಲೋ ಮಾಡುತ್ತೇವೆ. ಮಹಿಷ ಭಕ್ತರ ಕೈಮೇಲಾಗುತ್ತಾ, ಚಾಮುಂಡಿ ಭಕ್ತರ ಕೈಮೇಲಾಗುತ್ತಾ ನೋಡೋಣ ಎಂದು ಓಪನ್ ಚಾಲೆಂಜ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್