ಚಾಮರಾಜನಗರದ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ, ಇಲ್ಲಿ ಹಬ್ಬ ಆಚರಿಸುವುದು ಬುಧವಾರ ಮಾತ್ರ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ, ವೀರನಪುರ, ಬನ್ನಿತಾಳಪುರ, ಮಾಡ್ರಹಳ್ಳಿ, ನಲ್ಲೂರು, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿಲ್ಲ. ಇದಕ್ಕೆ ಕಾರಣ ದೀಪಾವಳಿಯ ಬಲಿಪಾಡ್ಯಮಿ ಮಂಗಳವಾರ ಬಂದಿರುವುದು.

ಚಾಮರಾಜನಗರದ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ, ಇಲ್ಲಿ ಹಬ್ಬ ಆಚರಿಸುವುದು ಬುಧವಾರ ಮಾತ್ರ
ದೀಪಾವಳಿ ಆಚರಿಸದ ಗ್ರಾಮ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ

Updated on: Nov 12, 2023 | 3:15 PM

ಚಾಮರಾಜನಗರ ನ.12:  ದೇಶಾದ್ಯಂತ ದೀಪ ಬೆಳಗಿಸಿ ಸಡಗರ ಸಂಭ್ರಮದಿಂದ ದೀಪಾವಳಿ (Deepavali) ಹಬ್ಬವನ್ನು ಆಚರಿಸಲಾಗುತ್ತಿದೆ. ಆದರೆ ಚಾಮರಾಜನಗರದ (Chamrajnagar) ಏಳು ಗ್ರಾಮಗಳಲ್ಲಿ ದೀಪಾವಳಿಯ ಸಡಗರ ಸಂಭ್ರಮ ಯಾವುದೂ ಕಾಣುತ್ತಿಲ್ಲ. ಇದಕ್ಕೆ ಕಾರಣ ಮಂಗಳವಾರ ಹಬ್ಬ ಬಂದಿರುವುದು. ಹಾಗಾದರೆ ಈ ಗ್ರಾಮಗಳಲ್ಲಿ ದೀಪಾವಳಿ ಹಬ್ಬ ಯಾವಾಗ ಆಚರಿಸುತ್ತಾರೆ ಯಾಕೆ ಬುಧವಾರದ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಹಬ್ಬ ಆಚರಿಸಲ್ಲ ಅಂತೀರಾ‌ ಈ ಸ್ಟೋರಿ ನೋಡಿ.

ದೀಪದಿಂದ ದೀಪವನ್ನು ಹಚ್ಚುತ್ತಾ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿ ಮಾಡುವುದೇ ದೀಪಾವಳಿ. ದೇಶಾದ್ಯಂತ ಸಂಭ್ರಮ, ಸಡಗರದಿಂದ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಆದರೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ, ವೀರನಪುರ, ಬನ್ನಿತಾಳಪುರ, ಮಾಡ್ರಹಳ್ಳಿ, ನಲ್ಲೂರು, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿಲ್ಲ. ಇದಕ್ಕೆ ಕಾರಣ ದೀಪಾವಳಿಯ ಬಲಿಪಾಡ್ಯಮಿ ಮಂಗಳವಾರ ಬಂದಿರುವುದು.

ಈ 7 ಗ್ರಾಮಗಳಲ್ಲಿ ಹಿಂದಿನ ಕಾಲದಿಂದಲೂ ದೀಪಾವಳಿಯ ಬಲಿಪಾಡ್ಯಮಿ ಬುಧವಾರ ಬಿಟ್ಟು ವಾರದ ಬೇರೆ ಯಾವುದೇ ದಿನಗಳಲ್ಲಿ ಬಂದರು ಆಚರಿಸಿಕೊಂಡು ಬರುತ್ತಿಲ್ಲ. ಬುಧವಾರದಂದು ಹೊಸ ಬಟ್ಟೆ ತೊಟ್ಟು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ರಾಸುಗಳಿಗೆ ಸ್ನಾನ ಮಾಡಿಸಿ ಮನೆಯಲ್ಲಿ ಸಿಹಿ ಊಟ ಮಾಡುತ್ತಾರೆ. ಕಳೆದ ಮೂರು ತಲೆಮಾರುಗಳಿಂದ ಈ ಏಳು ಗ್ರಾಮದವರು ಬುಧವಾರವೇ ಹಬ್ಬ ಆಚರಿಸುವ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದಾರೆ. ಅಷ್ಟಕ್ಕೂ ಬುಧವಾರವೇ ಏಕೆ ಹಬ್ಬ ಆಚರಿಸಬೇಕು ಎಂಬ ಪ್ರಶ್ನೆಗೆ ಗ್ರಾಮಸ್ಥರ ಉತ್ತರ ಹೀಗಿದೆ.

ಇದನ್ನೂ ಓದಿ: ದಾವಣಗೆರೆಯ ಈ ಗ್ರಾಮದಲ್ಲಿ ದೀಪಾವಳಿ ಹಬ್ಬ ಆಚರಿಸೋಲ್ಲ, ಕಾರಣವೇನು?

ಬುಧವಾರ ಹೊರತುಪಡಿಸಿ ಬೇರೆ ಯಾವುದೇ ದಿನಗಳಲ್ಲಿ ಹಬ್ಬ ಆಚರಿಸಿದರೇ ಊರಿಗೆ ಕೆಡಕಾಗುತ್ತೆ, ಜಾನುವಾರುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತವೆ ಎಂಬುವುದು ಗ್ರಾಮಸ್ಥರ ನಂಬಿಕೆ ಇದೆ. ಹೀಗಾಗಿ ದೀಪಾವಳಿ ಹಬ್ಬ ಬುಧವಾರ ಹೊರತುಪಡಿಸಿ ಇನ್ಯಾವುದೇ ದಿನಗಳಲ್ಲಿ ಬಂದರೇ ಈ 7 ಗ್ರಾಮಗಳ ಜನರು ಆಚರಿಸುವುದಿಲ್ಲ. ಬುಧವಾರದಂದು ದೇವಸ್ಥಾನದಿಂದ ತೀರ್ಥ ತಂದು ಹಸುಗಳಿಗೆ ಸಂಪಡಿಸಿ, ಪೂಜೆ ಮಾಡಿ, ಬಳಿಕ ಹಸುಗಳನ್ನು ಊರಿನ ಸುತ್ತ ಒಂದು ಸುತ್ತು ಹಾಕಿಸುತ್ತಾರೆ.

ಒಟ್ಟಾರೆ ಆಧುನಿಕ ಕಾಲದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಆಚಾರ, ವಿಚಾರಗಳು ಮಾತ್ರ ಬದಲಾಗಲು ಸಾಧ್ಯವಿಲ್ಲ ಎನ್ನುವುದಕ್ಕೆ ಈ ಗ್ರಾಮಗಳಲ್ಲಿ ನಡೆಯುತ್ತಿರುವ ಹಬ್ಬದ ಪದ್ಧತಿಗಳೇ ಸಾಕ್ಷಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ