AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಕಿಟ್‌ಗಳ ವಿತರಣೆ ವಿಳಂಬ: ಸಂಕಷ್ಟಕ್ಕೆ ಸಿಲುಕಿದ ಆದಿವಾಸಿ ಕುಟುಂಬಗಳಿಂದ ಉದ್ಯೋಗ ಅರಸಿ ವಲಸೆ

ಆಹಾರ ಕಿಟ್‌ಗಳ ವಿತರಣೆಯಲ್ಲಿ ವಿಳಂಬ ಹಾಗೂ ಉದ್ಯೋಗದ ಅಭಾವದಿಂದಾಗಿ ಮೈಸೂರು ಮತ್ತು ಚಾಮರಾಜನಗರದ ಆದಿವಾಸಿ ಕುಟುಂಬಗಳು ವಲಸೆ ಹೋಗುತ್ತಿವೆ. ಟೆಂಡರ್ ಹಾಗೂ ಖರೀದಿ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ವಿತರಣೆ ತಡವಾಗಿದೆ ಎನ್ನಲಾಗಿದ್ದು, ಅಕ್ಟೋಬರ್ ಮೊದಲ ವಾರದೊಳಗೆ ಕಿಟ್ ಪೂರೈಸುವುದಾಗಿ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಆಹಾರ ಕಿಟ್‌ಗಳ ವಿತರಣೆ ವಿಳಂಬ: ಸಂಕಷ್ಟಕ್ಕೆ ಸಿಲುಕಿದ ಆದಿವಾಸಿ ಕುಟುಂಬಗಳಿಂದ ಉದ್ಯೋಗ ಅರಸಿ ವಲಸೆ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on:Sep 28, 2026 | 4:05 PM

Share

ಮೈಸೂರು, ಸೆಪ್ಟೆಂಬರ್​​ 28: ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯಡಿ ಆಹಾರ ಕಿಟ್‌ಗಳ ವಿತರಣೆಯಲ್ಲಿ ವಿಳಂಬವಾಗಿರುವುದು, ಬರ ಪರಿಸ್ಥಿತಿ ಹಾಗೂ ಉದ್ಯೋಗಾವಕಾಶಗಳ ಕೊರತೆಯಿಂದಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಹಲವು ಆದಿವಾಸಿ ಕುಟುಂಬಗಳು ಉದ್ಯೋಗ ಅರಸಿ ವಲಸೆ ಹೊರಟಿವೆ. ಪರ್ಯಾಯ ಜೀವನೋಪಾಯದ ಮೂಲಗಳನ್ನು ಹುಡುಕಿಕೊಂಡು ಬುಡಕಟ್ಟು ಕಾಲೊನಿಗಳ ಕುಟುಂಬಗಳು ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳಕ್ಕೆ ವಲಸೆ ಹೋಗುತ್ತಿವೆ.

ಎರಡೂ ಜಿಲ್ಲೆಗಳಲ್ಲಿ 21,000ಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳಿದ್ದು, ಕಳೆದ ಎಂಟು ತಿಂಗಳಿಂದ ಆಹಾರ ಕಿಟ್‌ಗಳನ್ನು ವಿತರಿಸಲಾಗಿಲ್ಲ. ರಾಜ್ಯ ಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಬುಡಕಟ್ಟು ವ್ಯವಹಾರಗಳ ಇಲಾಖೆ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸದಿರುವುದೇ ಆಹಾರ ಕಿಟ್ ವಿತರಣೆಯಲ್ಲಿ ವಿಳಂಬಕ್ಕೆ ಕಾರಣ ಎನ್ನಲಾಗಿದೆ. ಮೈಸೂರು, ಚಾಮರಾಜನಗರ, ಕೊಡಗು ಮತ್ತು ದಕ್ಷಿಣ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳ ದಟ್ಟ ಅರಣ್ಯ ಹಾಗೂ ಅರಣ್ಯದಂಚಿನ ಗ್ರಾಮಗಳಲ್ಲಿ ವಾಸಿಸುವ ದುರ್ಬಲ ಬುಡಕಟ್ಟು ಸಮುದಾಯಗಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. 2008ರಿಂದ ಜೇನು ಕುರುಬ, ಕಾಡು ಕುರುಬ, ಯರವ ಹಾಗೂ ಸೋಲಿಗ ಸೇರಿದಂತೆ ವಿವಿಧ ಸಮುದಾಯಗಳಿಗೆ ರಾಜ್ಯ ಸರ್ಕಾರ ಆಹಾರ ಕಿಟ್‌ಗಳನ್ನು ವಿತರಿಸುತ್ತಿದೆ.

LIVE TV

ಇದನ್ನೂ ಓದಿ: ಕಬ್ಬು ತುಂಬಿದ್ದ ಲಾರಿ ಅಡ್ಡಗಟ್ಟಿದ ಗಜಪಡೆ, ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ! ವಾಹನ ಸವಾರರು ಕಂಗಾಲು

ಒಂಬತ್ತು ಜಿಲ್ಲೆಗಳ 51,000ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ಈ ಕಿಟ್​​ನ ಪ್ರಯೋಜನ ಪಡೆಯುತ್ತಿವೆ. ಪ್ರತಿ ಕಿಟ್‌ 8 ಕೆಜಿ ಅಕ್ಕಿ, ಬೇಳೆ, ರಾಗಿ, ತುಪ್ಪ, ಎರಡು ಲೀಟರ್ ಅಡುಗೆ ಎಣ್ಣೆ, ಶೇಂಗಾ ಸೇರಿದಂತೆ ಇತರ ಅಗತ್ಯ ವಸ್ತುಗಳನ್ನು ಒಳಗೊಂಡಿರಲಿದೆ. ಹಲವು ಕುಟುಂಬಗಳು ತಮ್ಮ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಮಾಸಿಕ ಆಹಾರ ಕಿಟ್‌ಗಳನ್ನು ಅವಲಂಬಿಸಿವೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಆಹಾರ ಕಿಟ್‌ಗಳ ವಿತರಣೆಯನ್ನು ಪುನರಾರಂಭಿಸಬೇಕು. ಟೆಂಡರ್ ಪ್ರಕ್ರಿಯೆಯನ್ನು ಕೇಂದ್ರೀಕರಿಸುವ ಬದಲು, ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸ್ಥಳೀಯವಾಗಿ ಟೆಂಡರ್ ನೀಡಿ ಕಿಟ್‌ಗಳನ್ನು ಖರೀದಿಸಲು ಅವಕಾಶ ನೀಡಿದರೆ ಉತ್ತಮ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

‘ಅಕ್ಟೋಬರ್ ಮೊದಲ ವಾರದೊಳಗೆ ಕಿಟ್ ವಿತರಣೆ’

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲಾ ಬುಡಕಟ್ಟು ಕಲ್ಯಾಣಾಧಿಕಾರಿ ಬಿಂದಿಯಾ, ಟೆಂಡರ್ ಹಾಗೂ ಖರೀದಿ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ಒಂಬತ್ತು ಜಿಲ್ಲೆಗಳಲ್ಲೂ ಕಳೆದ ಎಂಟು ತಿಂಗಳಿಂದ ಆಹಾರ ಕಿಟ್‌ಗಳ ವಿತರಣೆ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ಟೆಂಡರ್ ಹಾಗೂ ಖರೀದಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಗುರುತಿಸಲಾದ ಎಲ್ಲಾ ಆದಿವಾಸಿ ಫಲಾನುಭವಿ ಕುಟುಂಬಗಳಿಗೆ ಅಕ್ಟೋಬರ್ ಮೊದಲ ವಾರದೊಳಗೆ ಆಹಾರ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿರೋದಾಗಿ ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:00 pm, Mon, 28 September 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!