ಚಾಮರಾಜನಗರ: ವಿಶ್ವದ ಮೊದಲ ಲಿಯಾನ್ ಬ್ಯಾಟರಿ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ ಡಿಕೆ ಶಿವಕುಮಾರ್

ವಿಶ್ವದ ಮೊದಲ ಕೃತಕ ಬುದ್ದಿ ಮತ್ತೆ (Artificial Intelligence) ಸಂಯೋಜಿತ, ಪರಿಸರ ಸ್ನೇಹಿ ಸ್ಮಾರ್ಟ್ ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪನೆಗೆ ಇಂದು(ಆ.26) ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದಕ್ಕೆ ತಲಾ 500 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದ್ದು, ಚಾಮರಾಜನಗರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗಿದೆ.

ಚಾಮರಾಜನಗರ: ವಿಶ್ವದ ಮೊದಲ ಲಿಯಾನ್ ಬ್ಯಾಟರಿ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ ಡಿಕೆ ಶಿವಕುಮಾರ್
ಡಿ ಕೆ ಶಿವಕುಮಾರ್​
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 26, 2023 | 3:05 PM

ಚಾಮರಾಜನಗರ, ಆ.26: ಭಾರತದಲ್ಲೇ ನಿಮಾರ್ಣವಾಗುತ್ತಿರುವ ಮೊದಲ ಲಿಯಾನ್ ಬ್ಯಾಟರಿ ಘಟಕ ಸ್ಥಾಪನೆಗೆ ಇಂದು(ಆ.26) ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಇದು ಖಾಸಗಿ ಕಂಪನಿಯಿಂದ ಚಾಮರಾಜನಗರ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾಗುತ್ತಿದ್ದು, ವಿಶ್ವದ ಮೊದಲ ಕೃತಕ ಬುದ್ದಿ ಮತ್ತೆ (Artificial Intelligence) ಸಂಯೋಜಿತ, ಪರಿಸರ ಸ್ನೇಹಿ ಸ್ಮಾರ್ಟ್ ಬ್ಯಾಟರಿ ಉತ್ಪಾದನಾ ಘಟಕ ಇದಾಗಿದೆ. ಇಲ್ಲಿ ಸೌರವಿದ್ಯುತ್ ಸಂಗ್ರಹಿಸಿ ಬ್ಯಾಟರಿ ತಯಾರಿಕೆ ಮಾಡುವ ಮೂಲಕ ದೇಶಕ್ಕೆ ಮಾದರಿಯಾಗುವ ಯೋಜನೆಯಾಗಿದೆ ಎಂದರು.

ಚಾಮರಾಜನಗರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಉತ್ಪಾದನಾ ಘಟಕ

ಇದಕ್ಕೆ ತಲಾ 500 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದ್ದು, ಚಾಮರಾಜನಗರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗಿದೆ. ಇನ್ನು ಇದೇ ವೇಳೆ ‘ಆರ್​.ಅಶೋಕ್​ಗೆ ಪ್ರೋಟೊಕಾಲ್(ಶಿಷ್ಠಾಚಾರ) ಗೊತ್ತೆಯಿಲ್ಲ. ನಾವು ಕಾಂಗ್ರೆಸ್​ನವರು ಎಲ್ಲಾ ರೀತಿಯ ಪ್ರೋಟೊಕಾಲ್ ಪಾಲಿಸುತ್ತೇವೆ. ಪ್ರಧಾನಿ ಮೋದಿಯವರು ಆಗಮಿಸಿದ್ದು ಆರ್. ಅಶೋಕ್​ಗೆ ಗೊತ್ತೆಯಿಲ್ಲ. ಏನೋ ಪ್ರಚಾರಕ್ಕೆ ಮಾತಾಡಬೇಕು ಎಂದು ಮಾದ್ಯಮದವರ ಮುಂದೆ ಮಾತನಾಡಿದ್ದಾರೆ ಅಷ್ಟೇ ಎಂದು ಕಾಲೆಳೆದಿದ್ದಾರೆ.

ಇದನ್ನೂ ಓದಿ:ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್​: ವಿವಿಧ ಕಾಮಗಾರಿ ವೀಕ್ಷಣೆ, ಕಣ್ಣೀರು ಹಾಕಿದ ಬೀದಿಬದಿ ವ್ಯಾಪರಸ್ಥರು

ಹೊನ್ನಾಳಿ ಮಾಜಿ ಬಿಜೆಪಿ ಶಾಸಕ ಎಂ.ಪಿ ರೇಣುಕಚಾರ್ಯ ಡಿಕೆಶಿ ಭೇಟಿ ವಿಚಾರ ‘ ಅವರದ್ದು ಕೆಲ ಕುಂದು ಕೊರತೆ ಸ್ಥಳೀಯ ಮಟ್ಟದಲ್ಲಿ ಇರುತ್ತೆ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಿದ್ದೇನೆ ಜೊತೆಗೆ ಡಿಸಿಎಂ ಆಗಿದ್ದೇನೆ. ಹಾಗಾಗಿ ಭೇಟಿ ಮಾಡಿ ಚರ್ಚಿಸಿದ್ದಾರೆ. ನಮಗೆ ಅಪರೇಷನ್ ಹಸ್ತದ ಅವಶ್ಯಕತೆಯಿಲ್ಲ. ಅವರಾಗೆ ಬರುವುದಿದ್ದರೆ ಬರಲಿ ಎಂದರು.

ಇನ್ನು ಇದೇ ವೇಳೆ ಸ್ಥಳೀಯರು ‘ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತ ಕುಟುಂಬದವರಿಗೆ ಕೆಲಸ ಕೊಡಲು ಮನವಿ ಸಲ್ಲಿಸಿದರು. ಜೊತೆಗೆ ಮೇಕೆದಾಟು ಯೋಜನೆ ಶೀಘ್ರ ಆರಂಭಕ್ಕೆ ರೈತರು ಒತ್ತಾಯಿಸಿದರು. ಇವರಿಗೆ ಸಚಿವ ಬೈರತಿ ಸುರೇಶ್, ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸಾಥ್ ನೀಡಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Sat, 26 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ