ಚಾಮರಾಜನಗರ: ಇಂದಿನಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನ, ಆಟೋಗಳಿಗೆ ನಿರ್ಬಂಧ

ದೀಪಾವಳಿ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆಯಿಂದ ಬೆಟ್ಟದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಚಾಮರಾಜನಗರ: ಇಂದಿನಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನ, ಆಟೋಗಳಿಗೆ ನಿರ್ಬಂಧ
ಮಲೆ ಮಹದೇಶ್ವರ ಬೆಟ್ಟ
Edited By: Rakesh Nayak Manchi

Updated on: Nov 10, 2023 | 2:54 PM

ಚಾಮರಾಜನಗರ, ನ.10: ದೀಪಾವಳಿ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಹಿನ್ನೆಲೆ ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ದ್ವಿಚಕ್ರ ವಾಹನ ಹಾಗೂ ಆಟೋಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆಯಿಂದ ಬೆಟ್ಟದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಆರಂಭಗೊಂಡ ದೀಪಾವಳಿ ಜಾತ್ರೆ ನವೆಂಬರ್ 14 ರ ವರೆಗೆ ನಡೆಯಲಿದ್ದು, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರವು ಮಹಾ ರಥೋತ್ಸವಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಮಹದೇಶ್ವರನ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ದಾಸೋಹಾ ಕೂಡ ಇರಲಿದೆ.

ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರಿ ಮಳೆ: 108 ಅಡಿ ಉದ್ದದ ಪ್ರತಿಮೆ ಬಳಿ ಮತ್ತೆ ಕುಸಿತ

ಐದು ದಿನಗಳ ಕಾಲ ನಡೆಯುವ ಮಹದೇಶ್ವರನ ಈ ಜಾತ್ರೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಅದರಲ್ಲೂ ಬೆಂಗಳೂರು ಹಾಗೂ ಮೈಸೂರು ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಹೀಗಾಗಿ ಕಿರಿದಾದ ರಸ್ತೆಯಲ್ಲಿ ದ್ವಿಚಕ್ರ ವಾಹನ, ಆಟೋಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆಯಿಂದ ಬೆಟ್ಟದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್​ ಅವರು ಆದೇಶ ಹೊರಡಿಸಿದ್ದಾರೆ.

ಅಲ್ಲದೆ, ದ್ವಿಚಕ್ರ ವಾಹನ, ಆಟೋಗಳನ್ನು ತಾಳುಬೆಟ್ಟದಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ, ದೇವಾಲಯಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಜಿಲ್ಲೆಯ ಎಲ್ಲಾ ಡಿಪ್ಪೋಗಳಿಂದ ಸುಮಾರು 500ಕ್ಕೂ ಹೆಚ್ಚು ಬಸ್ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us