AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ರಸ್ತೆ ಗದ್ದಲ: ಪ್ರಿಯಾಂಕಾ, ರಾಹುಲ್​ ಲಾಬಿಗೆ ಮಣಿಯಬೇಡಿ: ಲಹರ್‌ ಸಿಂಗ್‌ ಆಗ್ರಹ

Save Bandipur: ಬಂಡೀಪುರ ಅರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧವನ್ನು ತೆಗೆದುಹಾಕಲು ಪ್ರಿಯಾಂಕಾ ಗಾಂಧಿ ಮತ್ತು ಕೇರಳ ಸರ್ಕಾರದ ಒತ್ತಡಕ್ಕೆ ಬಿಜೆಪಿ ಸಂಸದ ಲಹರ್ ಸಿಂಗ್ ವಿರೋಧ ವ್ಯಕ್ತಪಡಿಸಿದ್ದಾರೆ. ವನ್ಯಜೀವಿಗಳ ಸಂರಕ್ಷಣೆಗೆ ಈ ನಿಷೇಧ ಅತ್ಯಗತ್ಯ ಎಂದು ಅವರು ಒತ್ತಾಯಿಸುತ್ತಿದ್ದಾರೆ. ರಾಜಕೀಯ ಒತ್ತಡಗಳಿಗೆ ಮಣಿಯದೆ ನಿಷೇಧವನ್ನು ಮುಂದುವರಿಸಬೇಕೆಂದು ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬಂಡೀಪುರ ರಸ್ತೆ ಗದ್ದಲ: ಪ್ರಿಯಾಂಕಾ, ರಾಹುಲ್​ ಲಾಬಿಗೆ ಮಣಿಯಬೇಡಿ: ಲಹರ್‌ ಸಿಂಗ್‌ ಆಗ್ರಹ
ಲಹರ್‌ ಸಿಂಗ್‌ ಸಿರೋಯಾ, ಬಂಡಿಪುರ
Follow us
ವಿವೇಕ ಬಿರಾದಾರ
|

Updated on: Apr 07, 2025 | 6:42 PM

ಬೆಂಗಳೂರು, ಏಪ್ರಿಲ್‌ 7: ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi), ಮಾಜಿ ವಯನಾಡ್ ಸಂಸದ ರಾಹುಲ್‌ ಗಾಂಧಿ (Rahul Gandhi) ಹಾಗೂ ಕೇರಳ ಸರ್ಕಾರದ (Kerala Government) ಲಾಬಿಗೆ ಮಣಿದು ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ (Bandipura Forest Night Travaling) ಅವಕಾಶ ನೀಡಬಾರದು ಎಂದು ಬಿಜೆಪಿ ಸಂಸದ ಲಹರ್‌ ಸಿಂಗ್‌ ಸಿರೋಯಾ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಲಹರ್ ಸಿಂಗ್, ಎಷ್ಟೇ ರಾಜಕೀಯ ಒತ್ತಡಗಳು ಬಂದರೂ ಕೂಡ ಕರ್ನಾಟಕ ಸರ್ಕಾರ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಎತ್ತಿಹಿಡಿಯಬೇಕು. ಬಂಡೀಪುರವನ್ನು ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಕರ್ನಾಟಕದ ಬಂಡೀಪುರ ಅಭಯಾರಣ್ಯವು ಜೀವವೈವಿಧ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಕೇಂದ್ರವಾಗಿದೆ. ವನ್ಯಜೀವಿ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಯನ ವರದಿ ಪ್ರಕಾರ, 2005 ಮತ್ತು 2007ರ ನಡುವೆ, ಈ ಪ್ರದೇಶದಲ್ಲಿ ವಾಹನ ಅಪಘಾತದಿಂದ 286 ವನ್ಯಜೀವಿಗಳು ಮೃತಪಟ್ಟಿವೆ. 2009ರಲ್ಲಿ ಕರ್ನಾಟಕ ಸರ್ಕಾರ ರಾತ್ರಿ 9 ರಿಂದ ಬೆಳಗ್ಗೆ 6 ರವರೆಗೆ ಬಂಡೀಪುರ ಅಭಯಾರಣ್ಯ ಪ್ರದೇಶದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು ಅದು ಈಗಲೂ ಮುಂದುವರೆದಿದೆ. ಈ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿದೆ ಎಂದರು.

ಇದನ್ನೂ ಓದಿ
Image
ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವು ವಿರೋಧಿಸಿ ಅಭಿಯಾನ ತೀವ್ರ
Image
ಬಂಡೀಪುರ ಸಫಾರಿ: ಪ್ರವಾಸಿಗರ ಕಣ್ಣಿಗೆ ಬಿತ್ತು ಹುಲಿ ಮರಿ ತುಂಟಾಟದ ದೃಶ್ಯ
Image
ಚಾಮರಾಜನಗರ: ಒಂಟಿ ಸಲಗದ ಮುಂದೆ ನಿಂತು ಪ್ರವಾಸಿಗರ ಹುಚ್ಚಾಟ
Image
ಬಂಡೀಪುರದಲ್ಲಿ ರಾತ್ರಿ ಸೀಮಿತ ಸಂಚಾರಕ್ಕೆ ಮಾತ್ರ ಅವಕಾಶ; ಈಶ್ವರ ಖಂಡ್ರೆ

2010 ಮತ್ತು 2018 ರ ನಡುವೆ, ವನ್ಯಜೀವಿಗಳ ಸಾವಿನ ಸಂಖ್ಯೆ 34 ಕ್ಕೆ ಇಳಿದಿತ್ತು. ಅಭಯಾರಣ್ಯದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧದಿಂದ ವನ್ಯಜೀವಿಗಳಿಗೆ ಹಾನಿಯಾಗುವುದು ತಪ್ಪಿದೆ ಎನ್ನುವುದು ಇದರಿಂದ ಸಾಬೀತಾಗಿದೆ. ಕೇರಳವು ನಿಷೇಧವನ್ನು ತೆಗೆದುಹಾಕುವಂತೆ ಅರ್ಜಿ ಸಲ್ಲಿಸಿದ ನಂತರ 2019ರಲ್ಲಿ ಸುಪ್ರೀಂ ಕೋರ್ಟ್ ನಿಷೇಧವನ್ನು ಎತ್ತಿ ಹಿಡಿಯಿತು. ಅನೇಕ ಬಾರಿ ನಡೆದಿರುವ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಚರ್ಚೆ, ಉನ್ನತ ಮಟ್ಟದ ಸಮಿತಿಗಳ ಚರ್ಚೆ ಮತ್ತು ಸಭೆಗಳಲ್ಲಿ ಇದೇ ಅಭಿಪ್ರಾಯ ವ್ಯಕ್ತವಾಗಿತ್ತು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಕೂಡ ಈ ನಿರ್ಬಂಧವನ್ನು ಬೆಂಬಲಿಸಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಸೇರಿದಂತೆ ಕರ್ನಾಟಕದ ಎಲ್ಲ ರಾಜಕೀಯ ಪಕ್ಷಗಳ ಹಿಂದಿನ ಸರ್ಕಾರಗಳು ರಾತ್ರಿ ವಾಹನ ಸಂಚಾರ ನಿಷೇಧವನ್ನು ಬೆಂಬಲಿಸಿವೆ ಎಂದು ಹೇಳಿದರು.

ಆದರೆ ದುರದೃಷ್ಟವಶಾತ್, ಇತ್ತೀಚಿಗೆ ಬಂಡೀಪುರ ಹುಲಿ ಮೀಸಲು ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧವನ್ನು ತೆಗೆದುಹಾಕುವ ಪ್ರಯತ್ನ ಆರಂಭವಾಗಿದೆ. ನವೆಂಬರ್ 2024ರಲ್ಲಿ, ನಿರ್ಬಂಧಗಳನ್ನು ಸಡಿಲಗೊಳಿಸುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು ಆತಂಕ ಉಂಟುಮಾಡಿತ್ತು. ನಿಷೇಧವನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತ್ರದಿಂದ ಈ ಬೇಡಿಕೆಗೆ ಇನ್ನಷ್ಟು ಉತ್ತೇಜನ ದೊರೆಯಿತು. ನಂತರ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅಫಿಡವಿಟ್ ಹಿಂತೆಗೆದುಕೊಂಡಿತು. ಈ ಕ್ರಮಗಳು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ನಿಷೇಧವನ್ನು ತೆಗೆದುಹಾಕಲು ರಾಜಕೀಯ ಒತ್ತಡಕ್ಕೆ ಮಣಿಯುತ್ತಿದೆ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿದ್ದು, ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೇರಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗಳಿಂದ ಇದು ಇನ್ನಷ್ಟು ಸ್ಪಷ್ಟವಾಗಿದೆ ಎಂದಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಇತ್ತೀಚೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನಿಷೇಧ ಸಡಿಲಿಸುವಂತೆ ಸೂಚನೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಬಂಡೀಪುರದ ಗಡಿ ಪ್ರದೇಶದಿಂದ ಸ್ವಲ್ಪ ದೂರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರವಿದೆ. ಅವರು ತಮ್ಮ ಸರ್ಕಾರದ ನಿಲುವಿನ ಬಗ್ಗೆ ಇಲ್ಲಿವರೆಗೂ ಮೌನವಾಗಿದ್ದು, ಸಂರಕ್ಷಣೆಗೆ ಆದ್ಯತೆ ನೀಡುವ ಬದಲು, ಕಾಂಗ್ರೆಸ್ ಸರ್ಕಾರ ಒಂದು ಕುಟುಂಬವನ್ನು ಸಂತೋಷಪಡಿಸುವ ಕಡೆಗೆ ಗಮನಹರಿಸುತ್ತಿರುವುದು ದುರ್ದೈವ ಎಂದು ಹೇಳಿದರು.

ಇದು ರಾಜ್ಯದ ಪರಿಸರಕ್ಕೆ ಮಾತ್ರವಲ್ಲ, ಕಾಂಗ್ರೆಸ್‌ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ವನ್ಯಜೀವಿ ಸಂರಕ್ಷಣೆ ಮತ್ತು ಜೀವವೈವಿಧ್ಯಕ್ಕೆ ತೋರಿದ್ದ ಬದ್ಧತೆಗೂ ಬಗೆಯುವ ದ್ರೋಹವಾಗಿದೆ. ಪ್ರಕೃತಿ ಮತ್ತು ವನ್ಯಜೀವಿ ಸಂರಕ್ಷಣೆಗೆ ಕಾಂಗ್ರೆಸ್‌ ಕುಟುಂಬ ತೋರುವ ಬದ್ಧತೆಯ ಬಗ್ಗೆ ಕಾಂಗ್ರೆಸ್ ನಾಯಕರು ಪುಟಗಟ್ಟಲೆ ಬರೆದುಕೊಂಡಿದ್ದಾರೆ. ಈ ಪರಂಪರೆಯನ್ನು ಈಗ ಏಕೆ ಕೈಬಿಡಲಾಗುತ್ತಿದೆ? ಇದು ಕಾಂಗ್ರೆಸ್‌ನ ಚುನಾವಣಾ ಫಲಿತಾಂಶಗಳನ್ನೂ ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ಪ್ರತಿಫಲನವೇ? ರಾಷ್ಟ್ರೀಯ ಹಿತಾಸಕ್ತಿಗಿಂತ ಚುನಾವಣಾ ಹಿತಾಸಕ್ತಿಯೇ ಹೆಚ್ಚಾಯಿತೇ? ಎಂದು ಪ್ರಶ್ನಿಸಿದರು.

ಇತ್ತೀಚಿನ ಬಜೆಟ್ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲು ನಾನು ಪ್ರಯತ್ನಿಸಿದ್ದೆ. ಆದರೆ ವಿರೋಧ ಪಕ್ಷಗಳಿಂದ ಉಂಟಾದ ಗದ್ದಲ ಮತ್ತು ಪದೇ ಪದೇ ಮುಂದೂಡಿಕೆಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದ್ದರಿಂದ, ಈ ಮೂಲಕ ಮಾಧ್ಯಮಗಳೊಂದಿಗೆ ಈ ವಿಷಯದ ಬಗ್ಗೆ ನನ್ನ ಅಭಿಪ್ರಾಯಗಳನ್ನು ತಿಳಿಸುತ್ತಿದ್ದೇನೆ ಎಂದರು.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ನಿವಾಸಿಗಳು, ಪರಿಸರವಾದಿಗಳು ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕುವ ರಾಜ್ಯ ಸರ್ಕಾರದ ಉದ್ದೇಶವನ್ನು ತೀವ್ರವಾಗಿ ವಿರೋಧಿಸಿ ಬೀದಿಗಿಳಿದಿದ್ದಾರೆ. ಪ್ರತಿಭಟನೆಗಳು, ಪಾದಯಾತ್ರೆಗಳು ಮತ್ತು ಅಭಿಯಾನಗಳ ಮೂಲಕ, ವನ್ಯಜೀವಿ ಸಂರಕ್ಷಣೆ ಮತ್ತು ಪ್ರದೇಶದ ಪರಿಸರ ಮಹತ್ವವನ್ನು ಒತ್ತಿ ಹೇಳುತ್ತಾ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಬಳಿಕ ಪ್ರವಾಸಿಗರ ಸಂಖ್ಯೆ, ಆದಾಯ ಹೆಚ್ಚಳ: ಗಳಿಕೆಯಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನಕ್ಕೇರಿದ ಬಂಡೀಪುರ

ಇದೆಲ್ಲದರ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ರಾತ್ರಿ ಸಂಚಾರ ನಿಷೇಧವನ್ನು ಯಾವುದೇ ಕಾರಣಕ್ಕೂ ತೆಗೆದುಹಾಕಬಾರದು. ಎಲ್ಲಾ ರಾಜಕೀಯ ಒತ್ತಡಗಳನ್ನು ವಿರೋಧಿಸಬೇಕು ಮತ್ತು ಬಂಡೀಪುರವನ್ನು ಉಳಿಸಿಕೊಳ್ಳಬೇಕು ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ