ಚಾಮರಾಜನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕೆಎಸ್ಆರ್ಟಿಸಿ ಬಸ್: ಮೂವರ ಸಾವು, ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರ
ಸೇತುವೆ ಕೆಳಗಿನ ಕಾಲುವೆಗೆ ಬಸ್ ಬಿದ್ದಿದೆ. ಕಾಲುವೆಯಲ್ಲಿನ ನೀರಿಗೆ ಬಸ್ ಬಿದ್ದ ಕಾರಣ ಸದ್ಯ ಸ್ಥಳೀಯರು ಪ್ರಯಾಣಿಕರ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಕ್ಕೆ ಬಿದ್ದಿದ್ದು ಮೂವರು ಮೃತಪಟ್ಟಿದ್ದಾರೆ. ಹಾಗೂ ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕುಡುವಾಳೆ ಬಳಿ ನಡೆದಿದೆ. ಕೊಳ್ಳೇಗಾಲದಿಂದ ಪಿ.ಜಿ.ಪಾಳ್ಯಕ್ಕೆ ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.
ಸೇತುವೆ ಕೆಳಗಿನ ಕಾಲುವೆಗೆ ಬಸ್ ಬಿದ್ದಿದೆ. ಕಾಲುವೆಯಲ್ಲಿನ ನೀರಿಗೆ ಬಸ್ ಬಿದ್ದ ಕಾರಣ ಸದ್ಯ ಸ್ಥಳೀಯರು ಪ್ರಯಾಣಿಕರ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮಾಳಿಗನತ್ತ ಗ್ರಾಮದ ಶಿವಮ್ಮ(70), ಪಿ.ಜಿ.ಪಾಳ್ಯದ ರಮೇಶ್(28), ಆಸ್ಪತ್ರೆಗೆ ಸಾಗಿಸ್ತಿದ್ದಾಗ ಮಾರ್ಗಮಧ್ಯೆ ಸಣ್ಣರಾಯಪ್ಪ(60) ಮೃತಪಟ್ಟಿದ್ದಾರೆ. ಶಿವಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ರಮೇಶ್ ಕಾಮಗೆರೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಾತನಾಡಿದ ಚಾಮರಾಜನಗರ ಡಿಎಚ್‌ಓ ಡಾ.ವಿಶ್ವೇಶ್ವರಯ್ಯ, ಈಗಾಗಲೇ ಪಿಜಿ ಪಾಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಕೊಳ್ಳೆಗಾಲ ಆಸ್ಪತ್ರೆಗೆ ಕರೆತಂದು ಸಂಪೂರ್ಣ ಚಿಕಿತ್ಸೆ ನೀಡಲಾಗಿದೆ. ಮೂಳೆ ಮುರಿತಗೊಂಡು ಗಂಭೀರ ಗಾಯಗೊಂಡಿರುವ 6 ಜನರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಯಾರೂ ಸಹಾ ಭಯಪಡುವ ಅಗತ್ಯವಿಲ್ಲ ಎಂದರು.
ಗದಗದಲ್ಲಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಜನರಿಗೆ ಗಾಯ ಇನ್ನು ಮತ್ತೊಂದೆಡೆ ಗದಗದಲ್ಲಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿದೆ. ಗದಗ ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಸಾರಿಗೆ ಸಂಸ್ಥೆಯ ಬಸ್ ಇದಾಗಿದ್ದು ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಪೈಕಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ತುಮಕೂರು: ಕ್ರಷರ್ ನಿಲ್ಲಿಸುವಂತೆ ಗ್ರಾಮಸ್ಥರು, ನೂರಾರು ರೈತರಿಂದ ಪ್ರತಿಭಟನೆ
Fact Check: ‘ದಿ ಕಾಶ್ಮೀರ್ ಫೈಲ್ಸ್’ ನೋಡಿ ಅಡ್ವಾಣಿ ಅತ್ತರು ಅನ್ನೋದು ಸುಳ್ಳು; ಇಲ್ಲಿದೆ ಅಸಲಿ ವಿಷಯ
Published On - 4:01 pm, Mon, 14 March 22