ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು
ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ಸಂದರ್ಭದಲ್ಲೇ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಬಿಜೆಪಿಯ ಆರು ಮಂದಿ ಸದಸ್ಯರು ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದು, ಇದಕ್ಕಾಗಿ ಅವರಿಗೆ ದೊಡ್ಡ ಆಫರ್ ಕೂಡ ದೊರೆತಿದೆ!
ಚಾಮರಾಜನಗರ, ಸೆಪ್ಟೆಂಬರ್ 4: ಗಡಿ ನಾಡು ಚಾಮರಾಜನಗರದಲ್ಲಿ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. ‘ಆಪರೇಷನ್ ಹಸ್ತ’ದ ಮೂಲಕ 6 ಮಂದಿ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.
13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಮಂದಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಆಪರೇಷನ್ ಹಸ್ತದ ಮೂಲಕ ಬಿಜೆಪಿಯ 6 ಮಂದಿ ಕಾಂಗ್ರೆಸ್ಗೆ ಬೆಂಬಲ ನೀಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ಗೆ ಬೆಂಬಲ ನೀಡಿದ ಸದಸ್ಯರಿಗೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನವನ್ನೇ ಕಾಂಗ್ರೆಸ್ ಬಿಟ್ಟು ಕೊಟ್ಟಿದೆ.
ಅದ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂದ ಕಿಯಣ್ ಗೌಡ ನಾಮ ನಿರ್ದೇಶನ ಮಾಡಲಾಗಿದ್ದು, ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿಯಿಂದ ಕಾಂಗ್ರೆಸ್ಗೆ ಬೆಂಬಲಿಸಿದ ಹೀನಾ ಕೌಸರ್ ನಾಮಿನೇಷನ್ ಮಾಡಲಾಗಿದೆ. ಅಧ್ಯಕ್ಷ ಸ್ಥಾನ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಸಿದ್ದರಾಮಯ್ಯರನ್ನ ಸಂಕಷ್ಟದಿಂದ ಪಾರು ಮಾಡುವಂತೆ ಯತೀಂದ್ರ ಬ್ರಿಗೇಡ್ನಿಂದ ಮಾದಪ್ಪಗೆ ವಿಶೇಷ ಪೂಜೆ
ಬಿಜೆಪಿಯಿಂದ ನಾಮಿನೇಷನ್ ಮಾಡುವವರೇ ಇಲ್ಲದ ಕಾರಣ ಬಹುತೇಕ ಅಧ್ಯಕ್ಷಸ್ಥಾನ ಅವಿರೋಧ ಆಯ್ಕೆ ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಚುನಾವಣೆ ನಡೆಯುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ