ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು

| Updated By: Ganapathi Sharma

Updated on: Sep 04, 2024 | 2:15 PM

ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ಸಂದರ್ಭದಲ್ಲೇ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಬಿಜೆಪಿಯ ಆರು ಮಂದಿ ಸದಸ್ಯರು ಕಾಂಗ್ರೆಸ್​ಗೆ ಬೆಂಬಲ ಸೂಚಿಸಿದ್ದು, ಇದಕ್ಕಾಗಿ ಅವರಿಗೆ ದೊಡ್ಡ ಆಫರ್ ಕೂಡ ದೊರೆತಿದೆ!

ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು
ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು
Follow us on

ಚಾಮರಾಜನಗರ, ಸೆಪ್ಟೆಂಬರ್ 4: ಗಡಿ ನಾಡು ಚಾಮರಾಜನಗರದಲ್ಲಿ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್​ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. ‘ಆಪರೇಷನ್ ಹಸ್ತ’ದ ಮೂಲಕ 6 ಮಂದಿ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಮಂದಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಆಪರೇಷನ್ ಹಸ್ತದ ಮೂಲಕ ಬಿಜೆಪಿಯ 6 ಮಂದಿ ಕಾಂಗ್ರೆಸ್​​ಗೆ ಬೆಂಬಲ ನೀಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್​​ಗೆ ಬೆಂಬಲ ನೀಡಿದ ಸದಸ್ಯರಿಗೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನವನ್ನೇ ಕಾಂಗ್ರೆಸ್ ಬಿಟ್ಟು ಕೊಟ್ಟಿದೆ.

ಅದ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂದ ಕಿಯಣ್ ಗೌಡ ನಾಮ ನಿರ್ದೇಶನ ಮಾಡಲಾಗಿದ್ದು, ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿಯಿಂದ ಕಾಂಗ್ರೆಸ್​​​ಗೆ ಬೆಂಬಲಿಸಿದ ಹೀನಾ ಕೌಸರ್ ನಾಮಿನೇಷನ್ ಮಾಡಲಾಗಿದೆ. ಅಧ್ಯಕ್ಷ ಸ್ಥಾನ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನ ಸಂಕಷ್ಟದಿಂದ ಪಾರು ಮಾಡುವಂತೆ ಯತೀಂದ್ರ ಬ್ರಿಗೇಡ್​​ನಿಂದ ಮಾದಪ್ಪಗೆ ವಿಶೇಷ ಪೂಜೆ

ಬಿಜೆಪಿಯಿಂದ ನಾಮಿನೇಷನ್ ಮಾಡುವವರೇ ಇಲ್ಲದ ಕಾರಣ ಬಹುತೇಕ ಅಧ್ಯಕ್ಷಸ್ಥಾನ ಅವಿರೋಧ ಆಯ್ಕೆ ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಚುನಾವಣೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ