ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಭಾರಿ ಗಾತ್ರದ ಲಾರಿ ಸಂಚಾರಕ್ಕೆ ರೈತರ ತೀವ್ರ ವಿರೋಧ

ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆಗಳಲ್ಲಿ ರಾತ್ರಿಯ ಸಮಯದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ಗ್ರೀನ್ ಟ್ಯಾಕ್ಸ್ ಮತ್ತು ಅಕ್ರಮ ಸಾಗಾಟದ ವಿರುದ್ಧವೂ ಪ್ರತಿಭಟನೆ ನಡೆದಿದೆ. ವನ್ಯಜೀವಿಗಳ ರಕ್ಷಣೆ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ರಾತ್ರಿ ಸಂಚಾರ ನಿಷೇಧಿಸಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಭಾರಿ ಗಾತ್ರದ ಲಾರಿ ಸಂಚಾರಕ್ಕೆ ರೈತರ ತೀವ್ರ ವಿರೋಧ
ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಭಾರಿ ಗಾತ್ರದ ಲಾರಿ ಸಂಚಾರಕ್ಕೆ ರೈತರ ತೀವ್ರ ವಿರೋಧ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Nov 26, 2024 | 7:26 PM

ಚಾಮರಾಜನಗರ, ನವೆಂಬರ್​ 26: ಬಂಡೀಪುರ (Bandipur) ಹುಲಿ ಸಂರಕ್ಷಿತಾರಣ್ಯ ಪ್ರದೇಶದ ರಸ್ತೆಗಳಲ್ಲಿ ಅಧಿಕ ಭಾರ ಹೊತ್ತ ಲಾರಿಗಳ ಸಂಚಾರಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾತ್ರಿ 10 ಗಂಟೆ ನಂತರ ಅಕ್ರಮವಾಗಿ ಕೇರಳ, ತಮಿಳುನಾಡಿಗೆ ಲಾರಿಗಳ ಸಂಚಾರ ಆರೋಪ ಮಾಡಿದ್ದು, ಹೀಗಾಗಿ ಅರಣ್ಯ ಇಲಾಖೆ, ಆರ್​ಟಿಒ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ಮಾಡಿದ್ದಾರೆ. ವನ್ಯಜೀವಿಗಳ ಸುರಕ್ಷತೆ ಮತ್ತು ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಅಧಿಕ ಭಾರ ಹೊತ್ತ ಲಾರಿಗಳ ಸಂಚಾರಕ್ಕೆ ವಿರೋಧಿಸಗುತ್ತಿದೆ.

ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್​ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಕೆಲಕಾಲ ರಸ್ತೆ ತಡೆದು  ಪ್ರತಿಭಟಿಸಲಾಗಿದೆ. ಅರಣ್ಯ ಇಲಾಖೆಯ ಗ್ರೀನ್ ಟ್ಯಾಕ್ಸ್ ವಿರುದ್ಧವೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿಯ ಚರ್ಚೆ; ವನ್ಯ ಪ್ರಾಣಿಗಳ ಜೀವಕ್ಕೆ ಕಂಟಕ?

ರಾತ್ರಿ ಸಂಚಾರದಿಂದ ಪ್ರಾಣಿಗಳ ಪ್ರಾಣಕ್ಕೆ ಕುತ್ತು ಬರುತ್ತೆ, ಅಪಘಾತ ಪ್ರಕರಣ ಹಾಗೂ ಟಿಂಬರ್ ಮಾಫಿಯಾದಂತಹ ವಿಚಾರಗಳು ಹೆಚ್ಚುತ್ತೆ ಎನ್ನುವ ನಿಟ್ಟಿನಲ್ಲಿ ಈಗಾಗಲೇ ಬಂಡೀಪುರದಲ್ಲಿ ರಾತ್ರಿ ಸಂಚಾರವನ್ನು ನಿರ್ಬಂಧ ಮಾಡಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ರವರೆಗೂ ತುರ್ತು ಸೇವೆ ವಾಹನಗಳು ಬಿಟ್ಟು ಉಳಿದೆಲ್ಲ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ಯಾವುದೇ ಕಾರಣಕ್ಕೂ ಕೂಡ ರಾತ್ರಿ ಸಂಚಾರಕ್ಕೆ ಅವಕಾಶ ಕೊಡಬಾರದು. ಅವಕಾಶ ಮಾಡಿಕೊಟ್ಟರೆ ಗಡಿಯನ್ನು ಬಂದ್ ಮಾಡಿ ಉಗ್ರ ಹೋರಾಟ ಮಾಡುವುದಾಗಿ ಇತ್ತೀಚೆಗೆ ರೈತರು ಎಚ್ಚರಿಕೆ ಕೊಟ್ಟಿದ್ದರು.

ಇದನ್ನೂ ಓದಿ: ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ ಬಂಡೀಪುರ; ತುಂಬಿದ ಕೆರೆ ಕಟ್ಟೆಗಳು, ಸ್ವಚ್ಛಂದದಿಂದ ವನ್ಯ ಜೀವಿಗಳ ಓಡಾಟ, ಫೋಟೋಸ್ ನೋಡಿ

ಇನ್ನು ಇತ್ತೀಚೆಗೆ ವಯನಾಡು ಲೋಕಸಭಾ ಉಪ ಚುನಾವಣೆ ಪ್ರಚಾರದ ವೇಳೆ ಡಿಸಿಎಂ ಡಿಕೆ ಶಿವಕುಮಾರ್​ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿರ್ಬಂಧ ವಾಪಾಸ್ ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದಿದ್ದರು. ಇದಕ್ಕೆ ಪರಿಸರವಾದಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.