ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಜಿಲ್ಲಾಧಿಕಾರಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದವನ ವಿರುದ್ಧ FIR, ಅಪರಿಚಿತನಿಗಾಗಿ ಹುಡುಕಾಟ

ಪ್ರಧಾನಮಂತ್ರಿ ಕಚೇರಿ ಹೆಸರು ದುರುಪಯೋಗ ಆರೋಪ ಹಿನ್ನೆಲೆ ವಂಚಿಸಲು ಯತ್ನಿಸಿರುವ ಅಪರಿಚಿತ ವ್ಯಕ್ತಿ ವಿರುದ್ದ ಎಫ್.ಐ.ಆರ್ ದಾಖಲಾಗಿದೆ. ಅಪರಿಚಿತ ವ್ಯಕ್ತಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಜಿಲ್ಲಾಧಿಕಾರಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದವನ ವಿರುದ್ಧ FIR, ಅಪರಿಚಿತನಿಗಾಗಿ ಹುಡುಕಾಟ
ಸಾಂದರ್ಭಿಕ ಚಿತ್ರ
Edited By: ಆಯೇಷಾ ಬಾನು

Updated on: Jul 04, 2022 | 12:32 PM

ಚಾಮರಾಜನಗರ: ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಜಿಲ್ಲಾಧಿಕಾರಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದ ನಕಲಿ ಅಧಿಕಾರಿ ವಿರುದ್ಧ FIR ದಾಖಲಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ತನಗೆ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ, ದೇವರ ದರ್ಶನ, ದೊಡ್ಡಸಂಪಿಗೆ ಮರದ ವೀಕ್ಷಣೆಗೆ ವ್ಯವಸ್ಥೆ, ಜಂಗಲ್ ಸಫಾರಿಗೆ ವ್ಯವಸ್ಥೆ ಮಾಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಈ ಬಗ್ಗೆ ಅನುಮಾನ ಬಂದ ಕೂಡಲೆ ದೂರ ನೀಡಲಾಗಿದ್ದು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ವಾಸ್ತವ್ಯ, ಜಂಗಲ್ ಸಫಾರಿ, ದೇವರ ದರ್ಶನ ದೊಡ್ಡಸಂಪಿಗೆ ಮರದ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ರಾವ್ ಎಂಬ ಹೆಸರಿನಲ್ಲಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದರು. ಈ ವೇಳೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿಖರ ಹುದ್ದೆ ಕೇಳಿದ್ದಾರೆ. ಆಗ ರಾವ್ ಹೆಸರಿನ ವಂಚಿತ ವ್ಯಕ್ತಿ, ಹೆಸರು ಹಾಗೂ ಹುದ್ದೆ ಬಹಿರಂಗಪಡಿಸಬಾರದೆಂದು ತಿಳಿಸಿದ್ದಾರೆ. ಇದನ್ನು ಕೇಳಿ ಅನುಮಾನಗೊಂಡ ಜಿಲ್ಲಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಧಾನಮಂತ್ರಿ ಕಚೇರಿ ಹೆಸರು ದುರುಪಯೋಗ ಆರೋಪ ಹಿನ್ನೆಲೆ ವಂಚಿಸಲು ಯತ್ನಿಸಿರುವ ಅಪರಿಚಿತ ವ್ಯಕ್ತಿ ವಿರುದ್ದ ಎಫ್.ಐ.ಆರ್ ದಾಖಲಾಗಿದೆ. ಅಪರಿಚಿತ ವ್ಯಕ್ತಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮೈಸೂರು ಮೂಲದ ವ್ಯಕ್ತಿ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಶಾಲೆ ಆರಂಭದ ಬೆನ್ನಲ್ಲೆ ಶಿಕ್ಷಕರ ಟಾರ್ಚರ್ ಆರಂಭ; ಶಿಕ್ಷಕನ ಏಟಿಗೆ ಐಸಿಯುಗೆ ದಾಖಲಾದ 6ನೇ ತರಗತಿ ವಿದ್ಯಾರ್ಥಿ!

Loading...
Unable to load recommendations.
Follow Us