AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: 9 ಗ್ರಾಮಗಳಲ್ಲಿ ಪ್ರವಾಹದ ಭೀತಿ, ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ

ಕೊಡಗು, ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ 9 ಗ್ರಾಮಗಳಲ್ಲಿ ಪ್ರವಾಹದ ಆತಂಕದ ಛಾಯೆ ಆವರಿಸಿದೆ. ನದಿ ಪಾತ್ರದ ಗ್ರಾಮಗಳು ಮುಳುಗಡೆ ಭೀತಿಯಲ್ಲಿ 28 ಕಡೆ ಗಂಜೀ ಕೇಂದ್ರ ತೆರೆಯಲು ಜಿಲ್ಲಾಡಳಿತ ಸಿದ್ದತೆ ಈ ಕುರಿತಾದ ವರದಿ ಇಲ್ಲಿದೆ.

ಚಾಮರಾಜನಗರ: 9 ಗ್ರಾಮಗಳಲ್ಲಿ ಪ್ರವಾಹದ ಭೀತಿ, ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ
ಮನೆಗೆ ನುಗ್ಗಿದ ಪ್ರವಾಹ
TV9 Web
| Edited By: |

Updated on: Jul 29, 2024 | 8:20 AM

Share

ಚಾಮರಾಜನಗರ, ಜುಲೈ 29: ಕಬಿನಿ ಜಲಾಶಯದಿಂದ (Kabini Dam) ಅಪಾರ ಪ್ರಮಾಣದಲ್ಲಿ ನೀರು ಹೊರಕ್ಕೆ ಬಿಡಲಾಗುತ್ತಿರುವುದರಿಂದ ಕೊಳ್ಳೇಗಾಲ (Kollegala) ತಾಲೂಕಿನ ದಾಸನಪುರ ಗ್ರಾಮ ಸೇರಿದಂತೆ 9 ಗ್ರಾಮಸ್ಥರಲ್ಲಿ ಪ್ರವಾಹದ ಆತಂಕ ಮನೆ ಮಾಡಿದೆ. ಈಗಾಗಲೆ ಹಳೆ ಹಂಪಾಪುರ ಗ್ರಾಮದ ನೂರಾರು ಎಕರೆ ಜಮೀನು ನೀರಿನಲ್ಲಿ ಮುಳುಗಿ ಹೋಗಿದೆ. ಇತ್ತ ದಾಸನಪುರ ಗ್ರಾಮದ ನದಿಯ ತಟದಲ್ಲಿರುವ ದೇವಾಲಯದ ಮೆಟ್ಟಿಲುಗಳು ಸಹ ಮುಳುಗಿ ಹೋಗಿವೆ. ಕಬಿನಿಯಿಂದ ಹೊರ ಹರಿವು ಹೆಚ್ಚಾದರೆ ಕೊಳ್ಳೇಗಾಲ ತಾಲೂಕಿನ 9 ಗ್ರಾಮಗಳು ಮುಳುಗಡೆಯಾಗುವ ಸಾಧ್ಯತೆ ಇದೆ. ಈಗಾಗಲೆ ಜಿಲ್ಲಾಡಳಿತ ಕೂಡ 28 ಕಡೆ ಕಾಳಜಿ ಕೇಂದ್ರ ತೆರೆಯುವುದಕ್ಕೆ ಸ್ಥಳ ಗುರುತಿಸಿದ್ದು ಗ್ರಾಮಗಳಿಗೆ ನೀರು ನುಗ್ಗಿದರೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾಳಾಗುವ ಸಂಭವ ಇದೆ.

ಇಷ್ಟೆಲ್ಲ ಅವಾಂತರಕ್ಕೆ 9 ಗ್ರಾಮಗಳ ನದಿ ಪಾತ್ರದಲ್ಲಿ ತಡೆಗೋಡೆ ನಿರ್ಮಾಣ ಆಗದೆ ಇರುವುದೆ ಕಾರಣ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಸದ್ಯ ಕೆಲ ಹಾಟ್​ಸ್ಪಾಟ್​ಗಳನ್ನ ಗುರುತಿಸಿ ತಡೆಗೋಡೆ ನಿರ್ಮಾಣ ಮಾಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಬಿಟ್ಟು ಬಿಡದೆ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದ ಕೊಳ್ಳೆಗಾಲ ತಾಲೂಕಿನ ಬೆಟ್ಟದ ಮಾದಹಳ್ಳಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮನೆಯ ಮೇಲ್ಚಾವಣಿ ಹಾಗೂ ಗೋಡೆಗಳು ಶಿಥಿಲಗೊಂಡಿವೆ. ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಸಂತ್ರಸ್ಥರ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್