AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ವಾಡಿಯಲ್ಲಿ ಭಾರೀ ದುರಂತ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ, ಜನರಲ್ಲಿ ಆರೋಗ್ಯ ಸಮಸ್ಯೆಗಳ ಸರಮಾಲೆ

ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದ 47 ಜನರಿಗೆ ಕಿಡ್ನಿ ವೈಫಲ್ಯವಾಗಿರುವ ಆಘಾತಕಾರಿ ಮಾಹಿತಿ ‘ಟಿವಿ9’ ಗ್ರೌಂಡ್ ರಿಯಾಲಿಟಿ ಚೆಕ್​ನಲ್ಲಿ ತಿಳಿದುಬಂದಿದೆ. ಹಲವರು ಥೈರಾಯ್ಡ್, ಹೈಪರ್ ಟೆನ್ಷನ್‌ಗಳಿಂದಲೂ ಬಳಲುತ್ತಿದ್ದಾರೆ. ದಶಕಗಳಿಂದಲೂ ಈ ಭಾಗದಲ್ಲಿ ನೀರಿನ ಸಮಸ್ಯೆ ಇದ್ದು, ಆಡಳಿತದಿಂದ ಶಾಶ್ವತ ಪರಿಹಾರ ಸಿಕ್ಕಿಲ್ಲ.

ಸುಳ್ವಾಡಿಯಲ್ಲಿ ಭಾರೀ ದುರಂತ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ, ಜನರಲ್ಲಿ ಆರೋಗ್ಯ ಸಮಸ್ಯೆಗಳ ಸರಮಾಲೆ
‘ಟಿವಿ9’ ಜತೆ ಅಳಲು ತೋಡಿಕೊಂಡ ಗ್ರಾಮಸ್ಥರುImage Credit source: tv9
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 02, 2026 | 12:22 PM

Share

ಚಾಮರಾಜನಗರ, ಫೆಬ್ರವರಿ 2: ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ (Fluoride-contaminated water) ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳ 47 ಜನರಿಗೆ ಕಿಡ್ನಿ ವೈಫಲ್ಯ ಸಂಭವಿಸಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಅಷ್ಟೇ ಅಲ್ಲದೆ, ಈ ಗ್ರಾಮಗಳ ಹತ್ತಾರು ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ‘ಟಿವಿ9’ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಬೆಳಕಿಗೆ ಬಂದಿದೆ. ಮಾರ್ಟಳ್ಳಿ–ಸುಳ್ವಾಡಿ ಗ್ರಾಮಗಳಲ್ಲಿ ಕಳೆದ 30 ವರ್ಷಗಳಿಂದ ಗ್ರಾಮ ಪಂಚಾಯ್ತಿ ಮೂಲಕ ಸರಬರಾಜಾಗುತ್ತಿರುವ ನೀರನ್ನೇ ಕುಡಿಯುತ್ತಿರುವ ಜನರು ಇಂದು ಕಿಡ್ನಿ ವೈಫಲ್ಯ, ಥೈರಾಯ್ಡ್, ಹೈಪರ್ ಟೆನ್ಷನ್, ಸಂದಿವಾತ ಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈ ಎರಡು ಗ್ರಾಮಗಳಲ್ಲಿ ಈಗಾಗಲೇ 47 ಮಂದಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಪ್ರಚುರಪಡಿಸಿದೆ.

ಗ್ರಾಮದಲ್ಲಿ ಅಂತರ್ಜಲದ ತೀವ್ರ ಕೊರತೆಯಿದ್ದು, ಲಭ್ಯವಾಗುತ್ತಿರುವ ನೀರು ಫ್ಲೋರೈಡ್ ಪ್ರಮಾಣ ಅಧಿಕವಾಗಿರುವುದೇ ಆರೋಗ್ಯ ಹಾನಿಗೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಈ ನೀರನ್ನು ಸೇವಿಸುವುದರಿಂದ ಅನೇಕ ಗ್ರಾಮಸ್ಥರ ಹಲ್ಲುಗಳು ಹಳದಿ ಬಣ್ಣಕ್ಕೆ ತಿರುಗಿದ್ದು, ಆರೋಗ್ಯದ ಮೇಲೆ ಬೀರಿರುವ ಪರಿಣಾಮ ಸ್ಪಷ್ಟವಾಗಿ ಗೋಚರಿಸುತ್ತಿದೆ.

ವೀರಪ್ಪನ್ ವಿರುದ್ಧ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರಿಗೂ ಆಗಿತ್ತು ಕಿಡ್ನಿ ವೈಫಲ್ಯ

ಅನೇಕ ವರ್ಷಗಳ ಹಿಂದೆ ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರ ಮೇಲೂ ಈ ಪ್ರದೇಶದ ವಿಷಕಾರಿ ನೀರು ಪರಿಣಾಮ ಬೀರಿತ್ತು. ವೀರಪ್ಪನ್‌ನನ್ನು ಸೆರೆ ಹಿಡಿಯಲು ಕರ್ನಾಟಕ ಪೊಲೀಸರು ಮಾರ್ಟಳ್ಳಿ ಗ್ರಾಮದಲ್ಲಿ ಕ್ಯಾಂಪ್ ಹಾಕಿದ್ದ ಸಂದರ್ಭದಲ್ಲಿ, ಇಬ್ಬರು ಪೊಲೀಸರಿಗೆ ಕಿಡ್ನಿ ವೈಫಲ್ಯ ಕಾಣಿಸಿಕೊಂಡಿತ್ತು. ಆ ವೇಳೆ ನಡೆದ ಪರಿಶೀಲನೆಯಲ್ಲಿ ಗ್ರಾಮದಲ್ಲಿ ಬಳಕೆಯಾಗುತ್ತಿದ್ದ ನೀರಿನಲ್ಲಿ ಅಧಿಕ ಪ್ರಮಾಣದ ಫ್ಲೋರೈಡ್ ಅಂಶ ಇರುವ ವಿಚಾರ ಬಯಲಾಗಿತ್ತು ಎನ್ನಲಾಗಿದೆ.

ಇಷ್ಟಾದರೂ ಜಿಲ್ಲಾಡಳಿತದಿಂದ ಶುದ್ಧ ಕುಡಿಯುವ ನೀರಿನ ಶಾಶ್ವತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ. ಶುದ್ಧ ನೀರಿಗಾಗಿ ಪರಿಪರಿಯಾಗಿ ಬೇಡಿಕೊಂಡರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇರೆ ದಾರಿ ಇಲ್ಲದೆ ತಿಂಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡಿ ಟ್ಯಾಂಕರ್ ನೀರು ತರಸಿಕೊಳ್ಳುವ ಸ್ಥಿತಿಗೆ ಗ್ರಾಮಸ್ಥರು ತಲುಪಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಪೊಲೀಸರಿಗೆ ದೊಡ್ಡ ತಲೆನೋವಾದ ಕೇರಳಿಯನ್ ಮಲ್ಲು ದರೋಡೆ ಗ್ಯಾಂಗ್

‘ಟಿವಿ9’ ನಡೆಸಿದ ಗ್ರೌಂಡ್ ರಿಯಾಲಿಟಿ ಚೆಕ್‌ನಿಂದಾಗಿ ಗ್ರಾಮಸ್ಥರ ಬದುಕಿನ ಕಟು ಸತ್ಯ ಅನಾವರಣಗೊಂಡಿದೆ. ಫ್ಲೋರೈಡ್ ನೀರು ಮತ್ತು ಆಡಳಿತದ ವೈಫಲ್ಯ ಒಟ್ಟಾಗಿ ಜನರ ಜೀವಕ್ಕೆ ಮಾರಕವಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ. ಕೂಡಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ, ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವಂತೆ ಸಾರ್ವಜನಿಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ