ಚಾಮರಾಜನಗರ: ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕಲಬೆರಕೆ ಪೆಟ್ರೋಲಿಯಂ ಉತ್ಪನ್ನ ಮಾರಾಟ ಜಾಲ ಪತ್ತೆ ಹಚ್ಚಿದ್ದಾರೆ. ಕ್ವಾರಿಗಳಿಗೆ ಕಲಬೆರಕೆ ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆ ಮಾಡುತ್ತಿದ್ದ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಕೃಷ್ಣ ಗ್ರಾನೈಟ್ ಗೆ ಡಿಸೇಲ್ ಇಳಿಸುವಾಗ ಆಹಾರ ಇಲಾಖೆ ಉಪ ನಿರ್ದೇಶಕ ಯೋಗಾನಂದ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಕರಿಕಲ್ಲು ಕ್ವಾರಿಗಳಿಗೆ ಕಲಬೆರಕೆ ಪೆಟ್ರೋಲಿಯಂ ಉತ್ಪನ್ನ ಸಪ್ಲೈ ಮಾಡುತ್ತಿರುವುದು ಬೆಳಕಿಗೆ ಬಂದಿದೆ. 5,000 ಲೀ. ಡೀಸೆಲ್ ತುಂಬಿದ ಟ್ಯಾಂಕರ್ ಮತ್ತು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಕ್ವಾರಿಗಳಿಗೆ ಕಲಬೆರಕೆ ಪೆಟ್ರೋಲಿಯಂ ಉತ್ಪನ್ನ ಮಾರಾಟ ಜಾಲ ಪತ್ತೆ; 5,000 ಲೀ. ಡೀಸೆಲ್ ತುಂಬಿದ ಟ್ಯಾಂಕರ್, ಚಾಲಕ ವಶ
ತಮಿಳುನಾಡಿನಿಂದ ಚಾಮರಾಜನಗರಕ್ಕೆ ಡೀಸೆಲ್ ಪುರೈಕೆಯಾಗ್ತಿತ್ತು ಎಂದು ತಿಳಿದು ಬಂದಿದ್ದು ಘಟನೆ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ 6 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.
ಇದನ್ನೂ ಓದಿ: Cheteshwar Pujara: ಆಫ್ರಿಕಾ ವಿರುದ್ಧದ ಅಗ್ನಿಪರೀಕ್ಷೆಗೂ ಮುನ್ನ ಮಹತ್ವದ ಮತುಗಳನ್ನಾಡಿದ ಚೇತೇಶ್ವರ್ ಪೂಜಾರ