AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ವಿರಕ್ತ ಮಠಕ್ಕೆ ಮುಸಲ್ಮಾನ ಪೀಠಾಧಿಪತಿ: ಒಂದುವರೆ ತಿಂಗಳ ಬಳಿಕ ಸತ್ಯ  ಬಹಿರಂಗ

ಅದು ಲಿಂಗಾಯಿತ ವಿರಕ್ತಮಠ. ಮಠಕ್ಕೆ ಓರ್ವ ಯುವ ಸ್ವಾಮೀಜಿಯನ್ನು ಪೀಠಾಧಿಪತಿಯಾಗಿ ನೇಮಿಸಬೇಕೆಂದು ಗ್ರಾಮಸ್ಥರು ನಿರ್ಧಾರ ಮಾಡಿದ್ದರು. ಅದರಂತೆ ಯಾದಗಿರಿಯಿಂದ ಓರ್ವ ಸ್ವಾಮೀಜಿಯನ್ನು ಕರೆತಂದು ಪೀಠಾಧಿಪತಿ ಮಾಡಿದ್ದರು. ಸ್ವಾಮೀಜಿ ಕೂಡ ಅತ್ಯುತ್ತಮವಾಗಿ ಬಸವ ತತ್ವ ಬೋಧಿಸುತ್ತಿದ್ದರು. ಆದರೆ ಸ್ವಾಮೀಜಿಗಳ ಪೂರ್ವಾಶ್ರಮದಲ್ಲಿ ಮುಸ್ಲಿಂ ಧರ್ಮಕ್ಕೆ ಸೇರಿದವರು ಎಂದು ತಿಳಿದು ಈಗ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಲಿಂಗಾಯತ ವಿರಕ್ತ ಮಠಕ್ಕೆ ಮುಸಲ್ಮಾನ ಪೀಠಾಧಿಪತಿ: ಒಂದುವರೆ ತಿಂಗಳ ಬಳಿಕ ಸತ್ಯ  ಬಹಿರಂಗ
ನಿಜಲಿಂಗಸ್ವಾಮೀಜಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 04, 2025 | 4:36 PM

Share

ಚಾಮರಾಜನಗರ, ಆಗಸ್ಟ್ 04: ಲಿಂಗದೀಕ್ಷೆ (Linga Dikshe) ಪಡೆದು ಮಠಾಧೀಶರಾಗಿದ್ದ ಮುಸ್ಲಿಂ (Muslim) ವ್ಯಕ್ತಿಯೊಬ್ಬರು ತಮ್ಮ ಮೂಲ ಧರ್ಮದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡದೇ ಹಾಗೂ ತಮ್ಮ ದಾಖಲಾತಿಗಳಲ್ಲಿ ತಮ್ಮ ಮೂಲಧರ್ಮದ ಹೆಸರನ್ನೇ ಉಳಿಸಿಕೊಂಡಿರುವುದು ಬಹಿರಂಗವಾಗಿದೆ. ತಮ್ಮ ಮೂಲಧರ್ಮದ ಬಗ್ಗೆ ಮರೆಮಾಚಿದ ಸ್ವಾಮೀಜಿಯವರ (Swamiji) ನಡೆ ಬಗ್ಗೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ (Chamrajnagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಚೌಡಹಳ್ಳಿ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ ಸ್ವಾಮೀಜಿ ಪೀಠತ್ಯಾಗ ಮಾಡಿ ಮಠದಿಂದ ಹೊರ ನಡೆದಿದ್ದಾರೆ.

ಯಾದಗಿರಿ ಜಿಲ್ಲೆ ಶಹಪುರ ಮೂಲದ ನಿಜಲಿಂಗ ಸ್ವಾಮೀಜಿ ಪೂರ್ವಾಶ್ರಮದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದರು. ಪೂರ್ವಾಶ್ರಮದಲ್ಲಿ ಇವರ ಹೆಸರು ಮಹಮದ್ ನಿಸಾರ್‌ ಎಂದು ಇತ್ತು. ಮಹಮದ್ ನಿಸಾರ್‌ ಅವರು ವಿಶ್ವಗುರು ಬಸವಣ್ಣನವರ ತತ್ವ ಚಿಂತನೆಗಳಿಂದ ಪ್ರಭಾವಿತರಾಗಿ ಕಳೆದ ವರ್ಷ ಬಸವಕಲ್ಯಾಣದ ಬಸವಪ್ರಭು ಸ್ವಾಮೀಜಿಯಿಂದ ಜಂಗಮ ದೀಕ್ಷೆ ಪಡೆದಿದ್ದರು. ಲಿಂಗದೀಕ್ಷೆ ಪಡೆದ ಬಳಿಕ ಮಹಮದ್ ನಿಸಾರ್‌ ಅವರಿಗೆ ನಿಜಲಿಂಗ ಸ್ವಾಮೀಜಿ ಅಂತ ಮರುನಾಮಕರಣ ಮಾಡಲಾಗಿತ್ತು.

ಬಸವ ತತ್ವ ಪ್ರಚಾರಕರಾಗಿದ್ದ ನಿಜಲಿಂಗ ಸ್ವಾಮೀಜಿ ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಚೌಡಹಳ್ಳಿ ಗ್ರಾಮದಲ್ಲಿನ ಗುರುಮಲ್ಲೇಶ್ವರ ಶಾಖಾಮಠಕ್ಕೆ ಪೀಠಾಧಿಪತಿ ಮಾಡಲಾಗಿತ್ತು. ಶಾಖಾಮಠ ಮಠದ ನೂತನ ಕಟ್ಟಡ ಕಟ್ಟಿಸಿದ್ದ ಮಹದೇವ ಪ್ರಸಾದ್ ಎಂಬುವರು ಒಂದುವರೆ ತಿಂಗಳ ಹಿಂದೆ ಸ್ವಾಮೀಜಿಯೊಬ್ಬರ ಶಿಫಾರಿಸ್ಸಿನ ಮೇರೆಗೆ ನಿಜಲಿಂಗ ಸ್ವಾಮೀಜಿ ಅವರನ್ನು ಕರೆತಂದು ಮಠಾಧೀಶರನ್ನಾಗಿ ಮಾಡಿದ್ದರು.

ಕಳೆದ ಒಂದುವರೆ ತಿಂಗಳಿಂದ ಚೌಡಹಳ್ಳಿಯ ಗುರುಮಲ್ಲೇಶ್ವರ ಮಠದಲ್ಲಿ ಪ್ರವಚನ ಧಾರ್ಮಿಕ ಕಾರ್ಯ ನಡೆಸಿಕೊಂಡು ಬರುತ್ತಿದ್ದರು. ನಿಜಲಿಂಗ ಸ್ವಾಮೀಜಿ ತಾವು ಮ‌ೂಲತಃ ಮುಸ್ಲಿಂ ಧರ್ಮದ ವ್ಯಕ್ತಿ ಎಂಬುದನ್ನು ಗ್ರಾಮಸ್ಥರಿಗೆ ತಿಳಿಸಿರಲಿಲ್ಲ. ಆದರೆ, ಮಠದ ಭಕ್ತರೊಬ್ಬರಿಗೆ ತಮ್ಮ ಮೊಬೈಲ್ ನೀಡಿದ್ದ ಸಂದರ್ಭದಲ್ಲಿ ಸತ್ಯ ಬಯಲಾಗಿತ್ತು.

ಭಕ್ತ ಸ್ವಾಮೀಜಿಯ ಮೊಬೈಲ್​ನಲ್ಲಿನ ಎಸ್​ಎಸ್​ಎಲ್​ಸಿ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್‌ ನೋಡಿದಾಗ, ಅದರಲ್ಲಿ ನಿಸಾರ್ ಮಹಮದ್ ಎಂದು ಇತ್ತು. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ವಾಮೀಜಿಯ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೂಲತಃ ಮುಸ್ಲಿಂ ಧರ್ಮಕ್ಕೆ ಸೇರಿದವರು ಎಂಬುವುದನ್ನು ಮುಚ್ಚಿಟ್ಟಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ: ಮೊಯ್ಲಿ ಕಾರ್ಯಕ್ರಮದಲ್ಲಿ ಜಗಳಬಂದಿ

“ನಾನು ಅನ್ಯ ಧರ್ಮದವನಾದರೂ ಬಸವತತ್ವ ದಿಂದ ಆಕರ್ಷಿತನಾಗಿ ಜಂಗಮ ದೀಕ್ಷೆ ಪಡೆದಿದ್ದೇನೆ ಎಂದು ನಿಜಲಿಂಗ ಸ್ವಾಮೀಜಿ ಹೇಳಿದರು. ಆದರೆ, ತಾವು ಮುಸ್ಲಿಂ ಧರ್ಮದಿಂದ ಮತಾಂತರವಾಗಿರುವ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದ ಬಗ್ಗೆ ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದರು. ಬಳಿಕ ಗುಂಡ್ಲುಪೇಟೆ ಪೊಲೀಸರ ಮದ್ಯಸ್ಥಿಕೆಯಲ್ಲಿ ಸಭೆ ನಡೆಯಿತು. “ಗ್ರಾಮಸ್ಥರಿಗೆ ಇಷ್ಟವಿಲ್ಲದಿದ್ದರೆ ತಾವು ಪೀಠದಲ್ಲಿ ಮುಂದುವರಿಯುವುದಿಲ್ಲ ಪೀಠತ್ಯಾಗ ಮಾಡುತ್ತೇನೆ ಎಂದು ನಿಜಲಿಂಗ ಸ್ವಾಮೀಜಿ ಯಾದಗಿರಿಗೆ ವಾಪಸ್ ತೆರಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Mon, 4 August 25

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್