ಮಾದಪ್ಪನ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್; 4 ಹೊಸ ಬಸ್ ಖರೀದಿಸಿದ ಮಲೆ ಮಹದೇಶ್ವರ ಪ್ರಾಧಿಕಾರ

ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಾದಪ್ಪನ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಮಲೆ ಮಹದೇಶ್ವರ ಪ್ರಾಧಿಕಾರ ನಾಲ್ಕು ಹೊಸ ಬಸ್ ಖರೀದಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಮಾದಪ್ಪನ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್; 4 ಹೊಸ ಬಸ್ ಖರೀದಿಸಿದ ಮಲೆ ಮಹದೇಶ್ವರ ಪ್ರಾಧಿಕಾರ
ಪ್ರಾತಿನಿಧಿಕ ಚಿತ್ರ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 06, 2023 | 12:15 PM

ಚಾಮರಾಜನಗರ: ಜಿಲ್ಲೆಯ ಹನೂರು(Hanur)ತಾಲೂಕಿನಲ್ಲಿರುವ ಮಾದಪ್ಪನ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಮಲೆ ಮಹದೇಶ್ವರ (Male Mahadeshwara Hill) ಪ್ರಾಧಿಕಾರ ನಾಲ್ಕು ಹೊಸ ಬಸ್ ಖರೀದಿಸುವ ಮೂಲಕ ಸಿಹಿ ಸುದ್ದಿ ನೀಡಿದೆ. ಅತೀ ಹೆಚ್ಚು ಭಕ್ತರು ಮಾದಪ್ಪನ ದರ್ಶನ ಪಡೆಯಲು ಬರುತ್ತಿದ್ದು, ಈ ಹಿಂದೆ ಇದ್ದ ಬಸ್​ಗಳು ಹಳೆಯದಾಗಿತ್ತು. ಈ ಕುರಿತು ಪ್ರಯಾಣಿಕರು ಸಾಕಷ್ಟು ದೂರು ಕೂಡ ನೀಡಿದ್ದರು. ಈ ಕಾರಣ ನಾಲ್ಕು ಹೊಸ ಬಸ್ ಖರೀದಿ ಮಾಡಿರುವ ಪ್ರಾಧಿಕಾರ, ಶೀಘ್ರದಲ್ಲೇ ಸಂಚಾರ ಆರಂಭಿಸಲಿವೆ. ಇನ್ನು ಹೊಸ ಬಸ್ ಆಗಮನವಾಗುತ್ತಲೇ ಸಾಲೂರು ಮಠದ ಮಲ್ಲಿಕಾರ್ಜುನ ಸ್ವಾಮಿಗಳು ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಗೀತಾ ಹುಡೇದ ಅವರು ಪೂಜೆ ಸಲ್ಲಿಸಿದರು.

ಸಿಎಂ ಸಿದ್ದರಾಮಯ್ಯ ಚಾಲನೆ ನೀಡುವ ಸಾದ್ಯತೆ

ನೂತನ ಬಸ್​ಗಳಿಗೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರಿಂದ ಚಾಲನೆ ನೀಡುವ ಸಾದ್ಯತೆಯಿದೆ. ಇದಾದ ಬಳಿಕ ಬಸ್​ಗಳು ಯಾವ ಮಾರ್ಗದಲ್ಲಿ ಸಂಚರಿಸುತ್ತವೆ ಎಂದು ಪ್ರಾಧಿಕಾರದ ಅಧಿಕಾರಿಗಳು ರೂಟ್ ಫಿಕ್ಸ್ ಮಾಡಲಿದ್ದಾರೆ.

ಇದನ್ನೂ ಓದಿ:Chamrajnagar: ಮಲೆ ಮಹಾದೇಶ್ವರದ ಮಾದಪ್ಪನ ಸನ್ನಿಧಿಯಲ್ಲಿ ಮಹಿಳೆಯರದ್ದೇ ಬಹುಪರಾಕ್​

ಶಿವರಾತ್ರಿ ಜಾತ್ರಾ ಮಹೋತ್ಸವದಂದು ಹರಿದು ಬಂದಿತ್ತು ಕೋಟಿ ಕೋಟಿ ಹಣ

ಇನ್ನು ಇದೇ ವರ್ಷ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದ್ದ ಶಿವರಾತ್ರಿ ಜಾತ್ರಾ ಮಹೋತ್ಸವದಂದು ಹರಕೆ, ಪ್ರಸಾದ ವಿತರಣೆಯಿಂದ ಬರೊಬ್ಬರಿ 2.70 ಕೋಟಿಗೂ ಅಧಿಕ ಹಣ ಹರಿದು ಬಂದಿತ್ತು. ಕರ್ನಾಟಕದಲ್ಲಿ ಅತೀ ಹೆಚ್ಚು ಭಕ್ತರು ಭೇಟಿ ನೀಡುವ ದೇವಸ್ಥಾನಗಳಲ್ಲಿ ಮಲೆ ಮಹದೇಶ್ವರ ಬೆಟ್ಟವು ಒಂದಾಗಿದೆ. ಅದಕ್ಕೆ ಸಾಕ್ಷಿಯೆಂಬಂತೆ ಶಿವರಾತ್ರಿಯಂದು ಕಾಲ್ನಡಿಗೆಯಲ್ಲಿ 10 ಲಕ್ಷಕ್ಕೂ ಅಧಿಕ ಭಕ್ತರು ಬೆಟ್ಟವನ್ನ ಹತ್ತಿ ಮಾದಪ್ಪನ ದರ್ಶನ ಪಡೆದಿದ್ದರು. ಈ ಮೂಲಕ ಬೆಟ್ಟಕ್ಕೆ ಬರುವವರ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೆ ಇದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್