AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸಿನ ಕೊರತೆಯಿಂದ ಕೆಲಸ ಮಾಡಲು ಕಷ್ಟ: ಆರ್ಥಿಕ ಕೊರತೆ ಬಗ್ಗೆ ಒಪ್ಪಿಕೊಂಡ್ರಾ ಕಾಂಗ್ರೆಸ್ ಶಾಸಕ?

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸದ ಮೇಲೆ ಒತ್ತಡ ಉಂಟಾಗಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹೇಳಿದ್ದಾರೆ. ಆ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದಲ್ಲಿ ತೀವ್ರ ಹಣಕಾಸಿನ ಕೊರತೆ ಬಗ್ಗೆ ಒಪ್ಪಿಕೊಂಡಿದ್ರಾ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಹಣಕಾಸಿನ ಕೊರತೆಯಿಂದ ಕೆಲಸ ಮಾಡಲು ಕಷ್ಟ: ಆರ್ಥಿಕ ಕೊರತೆ ಬಗ್ಗೆ ಒಪ್ಪಿಕೊಂಡ್ರಾ ಕಾಂಗ್ರೆಸ್ ಶಾಸಕ?
ಹಣಕಾಸಿನ ಕೊರತೆಯಿಂದ ಕೆಲಸ ಮಾಡಲು ಕಷ್ಟ: ಆರ್ಥಿಕ ಕೊರತೆ ಬಗ್ಗೆ ಒಪ್ಪಿಕೊಂಡ್ರಾ ಕಾಂಗ್ರೆಸ್ ಶಾಸಕ?
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Mar 02, 2025 | 3:57 PM

Share

ಚಾಮರಾಜನಗರ, ಮಾರ್ಚ್​​ 02: ಸೆಸ್ಕ್​​ನಲ್ಲಿ ಕೆಲಸ ಮಾಡಲು ಹಣಕಾಸಿನ ಕೊರತೆಯಿಂದ ಕಷ್ಟವಾಗುತ್ತದೆ. ಹೀಗಾಗಿ ಟ್ರೈಬಲ್ ಇಲಾಖೆಯಿಂದ ಉಳಿಕೆ ಕೆಲಸ ಮಾಡಿದ ಹಣವನ್ನು ಕೊಡಿಸಿ ಎಂದು ವೇದಿಕೆ ಮೇಲೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ, ಶಾಸಕ ರಮೇಶ್ ಬಂಡಿಸಿದ್ದೇಗೌಡ (ramesh bandisiddegowda) ಅಚ್ಚರಿ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ಹನೂರು ತಾಲೂಕಿನ ಪಾಲಾರ್ ಗ್ರಾಮದಲ್ಲಿ ಸೆಸ್ಕ್ ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಇಂದು ಹಾಡಿಗಳಿಗೆ ವಿದ್ಯುತ್ ಸೌಕರ್ಯ ನೀಡಲಾಗಿದೆ. ಆ ಮೂಲಕ ಇತಿಹಾಸದಲ್ಲಿ ಮೊದಲ ಬಾರಿಗೆ ಪಾಲಾರ್ ಹಾಡಿಗೆ ವಿದ್ಯುತ್ ಸಿಕ್ಕಿದೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ದುಡ್ಡು ಜನರಿಂದಲೇ ವಸೂಲಿ ಆರೋಪ: ಸ್ಪಷ್ಟನೆ ನೀಡಿದ ಬೆಸ್ಕಾಂ ಎಂಡಿ

ಇದನ್ನೂ ಓದಿ
Image
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
Image
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
Image
ಗೃಹಜ್ಯೋತಿ ದುಡ್ಡು ಜನರಿಂದಲೇ ವಸೂಲಿ ಆರೋಪ: ಸ್ಪಷ್ಟನೆ ನೀಡಿದ ಬೆಸ್ಕಾಂ ಎಂಡಿ
Image
ಗೃಹಜ್ಯೋತಿ ದುಡ್ಡು ಸರ್ಕಾರ ಕೊಡದಿದ್ರೆ ಜನರಿಂದಲೇ ವಸೂಲಿ? ಬಿಜೆಪಿ ಆಕ್ರೋಶ

ಹಾಡಿಗಳಿಗೆ ವಿದ್ಯುತ್ ಕೊಡಲೂ ಆರ್ಥಿಕ ಮುಗ್ಗಟ್ಟು ಬಗೆಹರಿಸಿಕೊಂಡು, ಕೇಂದ್ರ ಸರ್ಕಾರದ 18 ಕೋಟಿ ರೂ. ಅನುದಾನದಲ್ಲಿ ಕೆಲಸ ಮಾಡುತ್ತೀದ್ದೇವೆ. ಸೆಸ್ಕ್​​ನಲ್ಲಿ ಕೆಲಸ ಮಾಡಲೂ ಹಣಕಾಸಿನ ಕೊರತೆಯಿಂದ ಕಷ್ಟವಾಗುತ್ತದೆ. ಟ್ರೈಬಲ್ ಇಲಾಖೆಯಿಂದ ಉಳಿಕೆ ಕೆಲಸ ಮಾಡಿದ ಹಣವನ್ನು ಕೊಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಸೆಸ್ಕ್​​ನಲ್ಲಿ ಹಣದ ಕೊರತೆ ಬಗ್ಗೆ ಒಪ್ಪಿಕೊಂಡರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಇನ್ನು ಗೃಹಜ್ಯೋತಿ ಹಣ ಸರ್ಕಾರ ಪಾವತಿಸದಿದ್ದರೆ ಗ್ರಾಹಕರಿಂದ ವಸೂಲಿ ವಿಚಾರ ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದರು. ಬಳಿಕ ಗ್ರಾಹಕರು ಬಿಲ್ ಪಾವತಿಸಬೇಕಾದ ಪ್ರಮೇಯ ಬರುವುದಿಲ್ಲ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದರು.

ಪಶುಸಂಗೋಪನೆ ಸಚಿವ ವೆಂಕಟೇಶ್ ಹೇಳಿದ್ದಿಷ್ಟು 

ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣ ಹೆಚ್ಚಳ ಹಿನ್ನೆಲೆ ನಮ್ಮ ಇಲಾಖೆಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗೃಹಜ್ಯೋತಿ ದುಡ್ಡು ಸರ್ಕಾರ ಕೊಡದಿದ್ರೆ ಜನರಿಂದಲೇ ವಸೂಲಿ? ಎಸ್ಕಾಂಗಳ ಪ್ರಸ್ತಾವಕ್ಕೆ ಬಿಜೆಪಿ ಕಿಡಿ

ಕೋಳಿಗಳನ್ನು ಕೊಂದು ಆಳವಾಗಿ ಗುಂಡಿ ಮಾಡಿ ಹೂತು ಹಾಕಲಾಗಿದೆ. ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿಯ ಒಂದು ಭಾಗದಲ್ಲಿ ಹೆಚ್ಚಾಗಿದೆ. ಈಗಾಗಲೇ ಎಲ್ಲಾ ಅಧಿಕಾರಿಗಳಿಗೂ ನಾನು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:55 pm, Sun, 2 March 25

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ