
ಚಾಮರಾಜನಗರ, ಮಾರ್ಚ್ 02: ಸೆಸ್ಕ್ನಲ್ಲಿ ಕೆಲಸ ಮಾಡಲು ಹಣಕಾಸಿನ ಕೊರತೆಯಿಂದ ಕಷ್ಟವಾಗುತ್ತದೆ. ಹೀಗಾಗಿ ಟ್ರೈಬಲ್ ಇಲಾಖೆಯಿಂದ ಉಳಿಕೆ ಕೆಲಸ ಮಾಡಿದ ಹಣವನ್ನು ಕೊಡಿಸಿ ಎಂದು ವೇದಿಕೆ ಮೇಲೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ, ಶಾಸಕ ರಮೇಶ್ ಬಂಡಿಸಿದ್ದೇಗೌಡ (ramesh bandisiddegowda) ಅಚ್ಚರಿ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಹನೂರು ತಾಲೂಕಿನ ಪಾಲಾರ್ ಗ್ರಾಮದಲ್ಲಿ ಸೆಸ್ಕ್ ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಇಂದು ಹಾಡಿಗಳಿಗೆ ವಿದ್ಯುತ್ ಸೌಕರ್ಯ ನೀಡಲಾಗಿದೆ. ಆ ಮೂಲಕ ಇತಿಹಾಸದಲ್ಲಿ ಮೊದಲ ಬಾರಿಗೆ ಪಾಲಾರ್ ಹಾಡಿಗೆ ವಿದ್ಯುತ್ ಸಿಕ್ಕಿದೆ ಎಂದರು.
ಇದನ್ನೂ ಓದಿ: ಗೃಹಜ್ಯೋತಿ ದುಡ್ಡು ಜನರಿಂದಲೇ ವಸೂಲಿ ಆರೋಪ: ಸ್ಪಷ್ಟನೆ ನೀಡಿದ ಬೆಸ್ಕಾಂ ಎಂಡಿ
ಹಾಡಿಗಳಿಗೆ ವಿದ್ಯುತ್ ಕೊಡಲೂ ಆರ್ಥಿಕ ಮುಗ್ಗಟ್ಟು ಬಗೆಹರಿಸಿಕೊಂಡು, ಕೇಂದ್ರ ಸರ್ಕಾರದ 18 ಕೋಟಿ ರೂ. ಅನುದಾನದಲ್ಲಿ ಕೆಲಸ ಮಾಡುತ್ತೀದ್ದೇವೆ. ಸೆಸ್ಕ್ನಲ್ಲಿ ಕೆಲಸ ಮಾಡಲೂ ಹಣಕಾಸಿನ ಕೊರತೆಯಿಂದ ಕಷ್ಟವಾಗುತ್ತದೆ. ಟ್ರೈಬಲ್ ಇಲಾಖೆಯಿಂದ ಉಳಿಕೆ ಕೆಲಸ ಮಾಡಿದ ಹಣವನ್ನು ಕೊಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಸೆಸ್ಕ್ನಲ್ಲಿ ಹಣದ ಕೊರತೆ ಬಗ್ಗೆ ಒಪ್ಪಿಕೊಂಡರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
ಇನ್ನು ಗೃಹಜ್ಯೋತಿ ಹಣ ಸರ್ಕಾರ ಪಾವತಿಸದಿದ್ದರೆ ಗ್ರಾಹಕರಿಂದ ವಸೂಲಿ ವಿಚಾರ ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದರು. ಬಳಿಕ ಗ್ರಾಹಕರು ಬಿಲ್ ಪಾವತಿಸಬೇಕಾದ ಪ್ರಮೇಯ ಬರುವುದಿಲ್ಲ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದರು.
ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣ ಹೆಚ್ಚಳ ಹಿನ್ನೆಲೆ ನಮ್ಮ ಇಲಾಖೆಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಗೃಹಜ್ಯೋತಿ ದುಡ್ಡು ಸರ್ಕಾರ ಕೊಡದಿದ್ರೆ ಜನರಿಂದಲೇ ವಸೂಲಿ? ಎಸ್ಕಾಂಗಳ ಪ್ರಸ್ತಾವಕ್ಕೆ ಬಿಜೆಪಿ ಕಿಡಿ
ಕೋಳಿಗಳನ್ನು ಕೊಂದು ಆಳವಾಗಿ ಗುಂಡಿ ಮಾಡಿ ಹೂತು ಹಾಕಲಾಗಿದೆ. ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿಯ ಒಂದು ಭಾಗದಲ್ಲಿ ಹೆಚ್ಚಾಗಿದೆ. ಈಗಾಗಲೇ ಎಲ್ಲಾ ಅಧಿಕಾರಿಗಳಿಗೂ ನಾನು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:55 pm, Sun, 2 March 25