AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ; ಹಿಟ್ ಆ್ಯಂಡ್ ರನ್​​ಗೆ ಬೈಕ್ ಸವಾರರಿಬ್ಬರು ಸಾವು

Chamarajanagar Hit-and-Run: ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರದ ಹನೂರು ತಾಲೂಕಿನ ಕೋಣನಕೆರೆ ಬಳಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಾಮಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ; ಹಿಟ್ ಆ್ಯಂಡ್ ರನ್​​ಗೆ ಬೈಕ್ ಸವಾರರಿಬ್ಬರು ಸಾವು
ಪ್ರಾತಿನಿಧಿಕ ಚಿತ್ರImage Credit source: Getty images
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 09, 2026 | 3:53 PM

Share

ಚಾಮರಾಜನಗರ, ಆಗಸ್ಟ್​​ 09: ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದ ಬಳಿ ಭಾನುವಾರ ಭೀಕರ ಹಿಟ್ ಆ್ಯಂಡ್ ರನ್ (Hit and Run) ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವ ಘಟನೆ ನಡೆದಿದೆ. ಯುವರಾಜ್(50) ಮತ್ತು ಶಶಾಂಕ್(25) ಮೃತ ಬೈಕ್ ಸವಾರರು. ರಾಮಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ನಿವಾಸಿ ಯುವರಾಜ್ (50) ಹಾಗೂ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಮೂಲದ ಶಶಾಂಕ್ (25) ಇಬ್ಬರು ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಭರ್ಜರಿ ಕಾರ್ಯಾಚರಣೆ, 40 ಮಂದಿ ವಶಕ್ಕೆ

ಕೋಣನಕೆರೆ ಗ್ರಾಮದ ಬಳಿ ಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತವೆಸಗಿದ ತಕ್ಷಣ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ.

ಚಾಲಕನ ಪತ್ತೆಗಾಗಿ ಪೊಲೀಸರು ಶೋಧ

ಇನ್ನು ಘಟನಾ ಸ್ಥಳಕ್ಕೆ ರಾಮಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಪರಾರಿಯಾಗಿರುವ ಅಪರಿಚಿತ ವಾಹನ ಹಾಗೂ ಚಾಲಕನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

ಗಸ್ತು ವೇಳೆ ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸಾವು

ಗಸ್ತು ವೇಳೆ ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿಧಾಮದ ಪೊನ್ನಾಚಿ ವಲಯದ ಹುಣಸೆ ಬಯಲು ಅರಣ್ಯದಲ್ಲಿ ನಡೆದಿದೆ. ಮಲೆಮಹದೇಶ್ವರ ಬೆಟ್ಟ ನಿವಾಸಿ ಮಹಾದೇವಸ್ವಾಮಿ (48) ಮೃತ ಫಾರೆಸ್ಟ್ ವಾಚರ್. ಇನ್ನು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ